3:21 AM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ

18/03/2026, 20:00

ಬೆಂಗಳೂರು(reporterkarnataka.com): ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಇನ್ನು ಮೂರು-ನಾಲ್ಕು ತಿಂಗಳಲ್ಲಿ ಭರ್ತಿ ಮಾಡಲಾಗುವುದು ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಹೇಳಿದರು.
ಇಂದು ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರು ಉಡುಪಿ ಜಿಲ್ಲೆ ವ್ಯಾಪ್ತಿಯಲ್ಲಿನ ಕೃಷಿ ಇಲಾಖೆಯಲ್ಲಿನ ವಿವಿಧ ಕಚೇರಿಗಳ ಮಂಜೂರಾದ ಹುದ್ದೆಗಳ ವಿವರ ಹಾಗೂ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ತಿಳಿಸಬೇಕೆಂದು ಕೋರಿದರು.
ಈ ಸಮಯದಲ್ಲಿ ಶಾಸಕರ ಪ್ರಶ್ನೆಗೆ ಉತ್ತರಿಸಿದ ಸಚಿವರು ಉಡುಪಿ ಜಿಲ್ಲೆ ವ್ಯಾಪ್ತಿಯಲ್ಲಿನ ವಿವಿಧ ಕಚೇರಿಗಳಲ್ಲಿ 143 ಹುದ್ದೆಗಳು ಮಂಜೂರಾಗಿದ್ದು ಅದರಲ್ಲಿ 30 ಹುದ್ದೆಗಳು ಖಾಲಿ ಇರುತ್ತವೆ. 2018ರಲ್ಲಿ 370 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. 2023ರಲ್ಲಿ 940 ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಗೆ ಬಂದಿದ್ದು ಸರ್ಕಾರದ ನಿರ್ದೇಶನದಂತೆ ಅಧಿಸೂಚನೆ ಹೊರಡಿಸಲು ಸಾಧ್ಯವಾಗಿರುವುದಿಲ್ಲ. ಸರ್ಕಾರದ ಇತ್ತೀಚಿನ ನಿರ್ದೇಶನದನ್ವಯ ಹೊಸದಾಗಿ ನೇಮಕಾತಿ ಅಧಿಸೂಚನೆ ಹೊರಡಿಸಲು ಪ್ರಸ್ತಾವನೆ ಸಲ್ಲಿಸಲು ಕ್ರಮ ವಹಿಸಲಾಗುತ್ತಿದೆ.
ಇನ್ನು 2-3 ತಿಂಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡ ನಂತರ ಉಡುಪಿ ಭಾಗಕ್ಕೂ ಸಹ ನಿಯೋಜಿಸಲಾಗುವುದು ಎಂದು ಸಚಿವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು