12:20 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಮಂಗಳೂರು: 9ರ ಬಾಲಕನಿಗೆ ಅಶ್ಲೀಲ ವೀಡಿಯೋ ತೋರಿಸಿ ಲೈಂಗಿಕ ದೌರ್ಜನ್ಯ: ಪೊಕ್ಸೊ ಕೇಸ್‌ನಲ್ಲಿ ಆರೋಪಿ ಅರೆಸ್ಟ್

19/03/2026, 12:33

ಮಂಗಳೂರು(reporterkarnataka.com): ಹಣ ಕೊಡುವ, ತಿಂಡಿ ಕೊಡಿಸುವ ಆಮಿಷವೊಡ್ಡಿ ಅಶ್ಲೀಲ ವೀಡಿಯೋ ತೋರಿಸಿ 9ವರ್ಷದ ಬಾಲಕನಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಕೋಟೆಕಾರು, ಮಡ್ಯಾರ್ ನಿವಾಸಿ ಆಶೀಶ್ ಪೂಜಾರಿ (33) ಬಂಧಿತ ಕಾಮುಕ.
ಆಶಿಶ್ ಪೂಜಾರಿ 9 ವರ್ಷದ ಬಾಲಕನನ್ನು ಹಣ ಹಾಗೂ ತಿಂಡಿ ನೀಡುವ ಆಮಿಷವೊಡ್ಡಿ ಕರೆದೊಯ್ದಿದ್ದಾನೆ. ಬಳಿಕ ಅಶ್ಲೀಲ ವಿಡಿಯೋ ತೋರಿಸಿ ಅಸಭ್ಯ ಕ್ರಿಯೆಗೆ ಪ್ರೇರೇಪಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರು ನೀಡಲಾಗಿದೆ.
ಈ ಹಿನ್ನೆಲೆಯಲ್ಲಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ POCSO ಕಾಯ್ದೆಯ ಸೆಕ್ಷನ್ 4, 6, 12 ಹಾಗೂ BNS ಕಾಯ್ದೆಯ ಸೆಕ್ಷನ್ 75 ಅಡಿಯಲ್ಲಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು