ಇತ್ತೀಚಿನ ಸುದ್ದಿ
ಮಹತ್ವದ ರಾಜಕೀಯ ಬೆಳವಣಿಗೆ: ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ವಿಜಯ್ ರೂಪಾನಿ ರಾಜಿನಾಮೆ
12/09/2021, 09:51
ಅಹಮದಾಬಾದ್(reporterkarnataka.com) : ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ತನ್ನ ರಾಜೀನಾಮೆ ನೀಡಿದ್ದಾರೆ. ಇದು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ.
ವಿಜಯ್ ರೂಪಾನಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರಿಗೆ ಸಲ್ಲಿಸಿದ್ದಾರೆ.ರೂಪಾನಿ ಅವರು ನಾಲ್ವರು ಸಚಿವರ ಜತೆಗಿದ್ದರು.ಒಂದು ವರದಿ ಪ್ರಕಾರ,ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಸಿ. ಆರ್. ಪಾಟೀಲ್ ಅವರೊಂದಿಗಿನ ಭಿನ್ನಾಭಿಪ್ರಾಯದ ನಡುವೆ ರೂಪಾನಿ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಈ ಹಿಂದೆ, ಗುಜರಾತ್ ಸರ್ಕಾರದಲ್ಲಿ ನಾಯಕತ್ವದ ಬದಲಾವಣೆಯ ಬಗ್ಗೆ ಊಹಾಪೋಹಗಳ ನಡುವೆ, ಆಡಳಿತಾರೂಢ ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಪಾಟೀಲ್ ಅವರು ಮುಖ್ಯಮಂತ್ರಿ ವಿಜಯ ರೂಪಾನಿ ಮತ್ತು ಅವರ ಉಪ ನಿತಿನ್ ಪಟೇಲ್ ನೇತೃತ್ವದಲ್ಲಿ ಮುಂದಿನ ವರ್ಷದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಹೇಳಿದ್ದರು.