11:31 AM Friday25 - September 2026
ಬ್ರೇಕಿಂಗ್ ನ್ಯೂಸ್
*ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೂತನ 34ನೇ ಬೋಳಾರ ಶಾಖೆಯ ಆಮಂತ್ರಣ ಪತ್ರಿಕೆ ಬಿಡುಗಡೆ

20/03/2026, 12:31

ಮಂಗಳೂರು(reporterkarnataka.com): ನಗರದ ಪಡೀಲ್‌ನಲ್ಲಿ ಸ್ವಂತ ಆಡಳಿತ ಕಟ್ಟಡವನ್ನು ಹೊಂದಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ ೩೩ ಶಾಖೆಗಳನ್ನು ಹೊಂದಿದ್ದು, ಇದೀಗ ತನ್ನ ನೂತನ ೩೪ನೇ ಬೋಳಾರ ಶಾಖೆಯನ್ನು ಮಂಗಳೂರಿನ ಬೋಳಾರದ ಜೆಪ್ಪು ಮಾರ್ಕೇಟ್‌ನ ಭಗಿನಿ ಸಮಾಜದ ಬಳಿಯಿರುವ “ಯುನಿಕ್ ಸ್ಟಿçÃಕ್” ಕಾಂಪ್ಲೆಕ್ಸ್ ನಲ್ಲಿ ಮಾರ್ಚ್ ೨೫ ರಂದು ಬುಧವಾರ ಪೂರ್ವಾಹ್ನ ೧೧.೦೦ ಗಂಟೆಗೆ ಸಾರ್ವಜನಿಕ ಸೇವೆಗಾಗಿ ಲೋಕಾರ್ಪಣೆಗೊಳಿಸಲಿದೆ.
ನೂತನ ೩೪ನೇ ಬೋಳಾರ ಶಾಖೆಯ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ಮಂಗಳವಾರ ಸಂಘದ ಅಧ್ಯಕ್ಷರಾದ “ಸಹಕಾರ ರತ್ನ” ಶ್ರೀ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಜರುಗಿತು.
ನೂತನ ೩೪ನೇ ಬೋಳಾರ ಶಾಖೆಯ ಆಮಂತ್ರಣ ಪತ್ರಿಕೆಯನ್ನು ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದ ಅನುವಂಶಿಕ ಆಡಳಿತ ಮೋಕ್ತೆಸರರಾದ ಶ್ರೀ ಎಮ್. ಅರುಣ್ ಐತಾಳ್ ರವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಶ್ರೀ ದಿವಾಕರ್ ಬಿ.ಪಿ, ಶ್ರೀಮತಿ ಉಮಾವತಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಸ್ಥಳೀಯ ಮಂಗಳೂರು ನಗರ ಪಾಲಿಕೆಯ ನಿಕಟಪೂರ್ವ ಸದಸ್ಯರಾದ ಶ್ರೀಮತಿ ಭಾನುಮತಿ, ಬಿಲ್ಲವ ಸಂಘ ಮಂಗಳಾದೇವಿಯ ಗೌರವ ಅಧ್ಯಕ್ಷರಾದ ಶ್ರೀ ಸದಾನಂದ ಸಾಲಿಯಾನ್, ಅಧ್ಯಕ್ಷರಾದ ಶ್ರಿ ರಾಜರತ್ನ ಸನಿಲ್, ಉಪಾಧ್ಯಕ್ಷರಾದ ಶ್ರೀ ದಿನೇಶ್, ಕಾರ್ಯದರ್ಶಿಯಾದ ಶ್ರೀ ರಮಾನಂದ ಪೂಜಾರಿ, ಸಂಚಾಲಕರಾದ ಶ್ರಿ ಉದಯ ಕುಮಾರ್, ಶ್ರೀಮತಿ ಲಲಿತಾ ಬಿ., ನೂತನ ಶಾಖೆಯ ಸಲಹಾ ಸಮಿತಿ ಸದಸ್ಯರಾದ ಶ್ರೀ ಮೋಹನ್ ರಾಜ್, ಶ್ರೀ ಚಂದ್ರಹಾಸ್ ಸುವರ್ಣ, ಶ್ರೀ ಆನಂದ, ಶ್ರೀ ಮೋಹನ್ ಕುಮಾರ್, ಶ್ರೀ ಅರುಣ್ ಕುಮಾರ್ ಸುವರ್ಣ, ಮತ್ತಿತ್ತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು