1:08 AM Monday22 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ

20/03/2026, 19:23

ಬಾಗಲಕೋಟೆ(reporterkarnataka.com): ರಾಜ್ಯದ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳಿಗೆ ವೇದಿಕೆ ಸಿದ್ಧವಾಗುತ್ತಿದೆ. ಈ ನಡುವೆ ಬಾಗಲಕೋಟೆ ಕ್ಷೇತ್ರದಲ್ಲಿ ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕಾರ್ಯಕ್ಕೆ ಚಾಲನೆ ನೀಡಿದ್ದು, ಪಕ್ಷದ ಮುಖಂಡ ವೀರಣ್ಣ ಚರಂತಿಮಠ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ.
ಪತ್ನಿ ರಾಜೇಶ್ವರಿ ಅವರೊಂದಿಗೆ ತಹಶೀಲ್ದಾರ ಕಚೇರಿಗೆ ಆಗಮಿಸಿದ ವೀರಣ್ಣ ಚರಂತಿಮಠ ಅವರು ಚುನಾವಣಾ ಅಧಿಕಾರಿ ಸಂತೋಷ್ ಜಗಲಾಸರ್ ಅವರಿಗೆ ನಾಮಪತ್ರ ಸಲ್ಲಿಸಿದರು. ಶುಭ ಮುಹೂರ್ತದ ಹಿನ್ನೆಲೆಯಲ್ಲಿ ಇಂದು ನಾಮಪತ್ರ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದರು. ಅಧಿಕೃತ ಘೋಷಣೆಗೂ ಮುನ್ನವೇ ನಾಮಪತ್ರ ಸಲ್ಲಿದ್ದಾರೆ.
ರಾಜ್ಯದ ಪ್ರಮುಖ ನಾಯಕರ ಸಮ್ಮುಖದಲ್ಲಿ ವೀರಣ್ಣ ಚರಂತಿಮಠ ಅವರು ಅಧಿಕೃತವಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ಮೂಲಕ ಕ್ಷೇತ್ರದಲ್ಲಿ ಪಕ್ಷದ ಶಕ್ತಿ ಪ್ರದರ್ಶನಕ್ಕೂ ಬಿಜೆಪಿ ಸಜ್ಜಾಗಿದೆ.
ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,59,260 ಮತದಾರರು ಇದ್ದು, ಇವರಲ್ಲಿ 1,26,761 ಪುರುಷರು, 1,32,476 ಮಹಿಳೆಯರು ಮತ್ತು 23 ಇತರೆ ಮತದಾರರು ಸೇರಿದ್ದಾರೆ. ಈ ಅಂಕಿಅಂಶಗಳು ಕ್ಷೇತ್ರದಲ್ಲಿ ಮಹಿಳಾ ಮತದಾರರ ಪ್ರಾಬಲ್ಯ ಹೆಚ್ಚಿದೆ. ಆದ್ದರಿಂದ ಎಲ್ಲಾ ಪಕ್ಷಗಳೂ ಮಹಿಳಾ ಮತದಾರರನ್ನು ಸೆಳೆಯುವತ್ತ ಹೆಚ್ಚಿನ ಗಮನ ಹರಿಸುವ ನಿರೀಕ್ಷೆಯಿದೆ.

ಇತ್ತೀಚಿನ ಸುದ್ದಿ

ಜಾಹೀರಾತು