7:39 PM Friday20 - March 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ…

ಇತ್ತೀಚಿನ ಸುದ್ದಿ

ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು ನಾಮಪತ್ರ ಸಲ್ಲಿಕೆ

20/03/2026, 19:27

ದಾವಣಗೆರೆ(reporterkarnataka.com): ದಾವಣಗೆರೆ ಉಪ ಚುನಾವಣೆ ಹಿನ್ನೆಲೆಯಲ್ಲಿ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈಗಾಗಲೇ ಬಿಜೆಪಿಯಿಂದ ಅಭ್ಯರ್ಥಿಗಳ ಹೆಸರು ಪ್ರಕಟವಾಗಿದ್ದು, ಕಾಂಗ್ರೆಸ್‌ನಲ್ಲಿ ಯಾರಿಗೆ ಟಿಕೆಟ್‌ ಸಿಗಲಿದೆ ಎಂಬ ಚರ್ಚೆ ನಡೆಯುತ್ತಿದೆ. ಆದರೆ, ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಸಿದ್ದಾರೆ.
ತಾಯಿ ಪ್ರಭಾ ಮಲ್ಲಿಕಾರ್ಜುನ ನೇತೃತ್ವದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಜನರು, ನಮ್ಮ ಸಮುದಾಯದವರಿಗೆ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಆದರೆ ಇದೀಗ ಟಿಕೆಟ್ ಘೋಷಣೆಯಾಗುವ ಮೊದಲೇ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ ಮಾಡುವ ಮೂಲಕ ಪಕ್ಷವನ್ನು ಗೊಂದಲಕ್ಕೆ ಸಿಲುಕಿಸಿದ್ದಾರೆ.
ಸಮರ್ಥ್ ಶಾಮನೂರು ಅವರು ಒಂದಲ್ಲ ಎರಡು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್ ಪಕ್ಷದಿಂದ ಒಂದು ನಾಮಪತ್ರ ಹಾಗೂ ಸ್ವತಂತ್ರ ಅಭ್ಯರ್ಥಿಯಾಗಿ ಮತ್ತೊಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ, ಶಾಮನೂರು ಕುಟುಂಬದ ನಡೆ ಭಾರೀ ಕುತೂಹಲ ಮೂಡಿಸಿದೆ.
ಜ್ಯೋತಿಷ್ಯರ ಸಲಹೆ ಮೇರೆಗೆ ಸಮರ್ಥ ಶಾಮನೂರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ ಎನ್ನಲಾಗಿದೆ. ಅಮೃತ ಸಿದ್ದಿಯೋಗದ ಸಮಯದಲ್ಲಿ ನಾಮಪತ್ರ ಸಲ್ಲಿಸಲು ಜೋತಿಷ್ಯರ ಸಲಹೆ ನೀಡಿದ್ದರಂತೆ. ಈ ಹಿನ್ನೆಲೆ ಇಂದು‌ ಮಲ್ಲಿಕಾರ್ಜುನ್ ಪುತ್ರ ಸಮರ್ಥ ಟಿಕೆಟ್ ಘೋಷಣೆಗೂ ಮುನ್ನ ನಾಮಪತ್ರ ಸಲ್ಲಿಸಿದ್ದಾರೆ ಎನ್ನಲಾಗಿದೆ.‌

*ಟಿಕೆಟ್ ನನಗೇ ಸಿಗುತ್ತದೆ ಎಂದ ಸಮರ್ಥ್*
ನಾಮಪತ್ರ ಸಲ್ಲಿಕೆಗೂ ಮುನ್ನ ಸಮರ್ಥ್‌ ಅವರಿಗೆ ‘ಅಧಿಕೃತವಾಗಿ ಬಿ-ಫಾರಂ ಸಿಕ್ಕಿದೆಯಾ?’ ಎಂಬ ಪ್ರಶ್ನೆ ಎದುರಾಯಿತು. ಇದಕ್ಕೆ ಉತ್ತರಿಸಿದ ಅವರು, ‘ಶಾಮನೂರು ಶಿವಶಂಕರಪ್ಪ ಅವರ ಬಗ್ಗೆ ನೀವು ಓದಿದ್ದೀರಾ? ಈ ಪಕ್ಷವನ್ನು ಕಟ್ಟಿದವರೇ ಅವರು. ನಮ್ಮ ಪಾರ್ಟಿ ಕಾರ್ಯಕರ್ತರ ಮೇಲೆ ನಮಗೆ ನಂಬಿಕೆ ಇದೆ, ಟಿಕೆಟ್ ನಮಗೆ ಸಿಗುತ್ತದೆ ಎಂಬ ವಿಶ್ವಾಸವಿದೆ’ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು