12:23 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ

21/03/2026, 17:07

ದಾವಣಗೆರೆ(reporterkarnataka.com): ದಾವಣಗೆರೆ ದಕ್ಷಿಣ ಮತಕ್ಷೇತ್ರದ ಉಪಚುನಾವಣಾ ಕಣದಲ್ಲಿ ಕೈ-ಕಮಲ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದೆ. ಈಗಾಗಲೇ, ಕಾಂಗ್ರೆಸ್ ಹಾಗೂ ಬಿಜೆಪಿಯಿಂದ ಸ್ಪರ್ಧಾಳುಗಳು ಶುಕ್ರವಾರ ನಾಮಪತ್ರ ಸಲ್ಲಿಕೆ‌ ಮಾಡಿದ್ದು, ತಮ್ಮ ಆಸ್ತಿ ವಿವರ ಘೋಷಿಸಿದ್ದಾರೆ.
ಬಿ ಫಾರಂ ಸಿಗುವ ಮುನ್ನವೇ ನಾಮಪತ್ರ ಸಲ್ಲಿಸಿರುವ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರು ಚುನಾವಣಾಧಿಕಾರಿಗೆ ತಮ್ಮ ಆಸ್ತಿ ಬಗ್ಗೆ ಅಫಿಡವಿಟ್ ಸಲ್ಲಿಸಿದ್ದಾರೆ.

*ಸಮರ್ಥ್ ಶಾಮನೂರು ಆಸ್ತಿ ವಿವರ*
ಯುವ ಉದ್ಯಮಿಯಾಗಿರುವ ಸಮರ್ಥ್ ರಾಜಕೀಯಕ್ಕೆ ಪದಾರ್ಪಣೆ ಮಾಡುತ್ತಿರುವ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ಪುತ್ರ ಸಮರ್ಥ್, ಯುವ ಉದ್ಯಮಿಯಾಗಿದ್ದು ಒಟ್ಟು 4.25 ಕೋಟಿ ರೂ.ಗೂ ಅಧಿಕ ಮೌಲ್ಯದ ಸ್ಥಿರ ಮತ್ತು ಚರ ಆಸ್ತಿ ಹೊಂದಿರುವುದಾಗಿ ಅಫಿಡವಿಟ್​ನಲ್ಲಿ ವಿವರ ನೀಡಿದ್ದಾರೆ. 2.17 ಕೋಟಿ ರೂ. ಮೌಲ್ಯದ ಚರ ಆಸ್ತಿ ಹಾಗೂ 2.08 ಕೋಟಿ ಮೌಲ್ಯದ ಕೃಷಿ ಭೂಮಿ ಸೇರಿದಂತೆ ಸ್ಥಿರ ಆಸ್ತಿಯಿದೆ ಎಂದು ಉಲ್ಲೇಖಿಸಿದ್ದಾರೆ.
ಸಮರ್ಥ್ ಶಾಮನೂರು ದಾವಣಗೆರೆ ತಾಲೂಕಿನ ಆನೆಕೊಂಡ ಹಾಗು ಬೇತೂರು ಗ್ರಾಮಗಳಲ್ಲಿ ಒಟ್ಟು 6 ಎಕರೆ 14 ಗುಂಟೆ ಕೃಷಿ ಭೂಮಿ ಹೊಂದಿದ್ದು, ಅವರ ಹೆಸರಿನಲ್ಲಿ 8.35 ಲಕ್ಷ ರೂ. ನಗದು ಹಣವಿದೆ. ಅಲ್ಲದೆ ವಿವಿಧ ಬ್ಯಾಂಕ್‌ ಖಾತೆಗಳಲ್ಲಿ ಹಣ ಹಾಗೂ 14.45 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳಿವೆ. ‌ಆಸ್ತಿಯ ಜೊತೆಗೆ ಸಮರ್ಥ್ ಅವರ ಹೆಸರಿನಲ್ಲಿ ಒಟ್ಟು 3.52 ಕೋಟಿ ರೂ. ಮೊತ್ತದ ಸಾಲ ಹಾಗೂ ಹೊಣೆಗಾರಿಕೆಗಳಿವೆ. 2024-25ನೇ ಸಾಲಿನ ಆದಾಯ ತೆರಿಗೆ ಮರುಪಾವತಿಯಲ್ಲಿ ಅವರು 96.05 ಲಕ್ಷ ರೂ. ವಾರ್ಷಿಕ ಆದಾಯವನ್ನು ತೋರಿಸಲಾಗಿದೆ. ಸಮರ್ಥ್ ಮೇಲೆ ಯಾವುದೇ ​ಕ್ರಿಮಿನಲ್ ಪ್ರಕರಣಗಳಿಲ್ಲ ಎಂದು ಅಫಿಡವಿಟ್‌ನಲ್ಲಿ ವಿವರಿಸಲಾಗಿದೆ.

*ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಟಿ‌.ದಾಸಕರಿಯಪ್ಪ ಆಸ್ತಿ ವಿವರ*
ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಟಿ.ದಾಸಕರಿಯಪ್ಪ ಅವರು ಶುಕ್ರವಾರ ದಾವಣಗೆರೆ ಪಾಲಿಕೆಗೆ ಆಗಮಿಸಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದು, 5.76 ಕೋಟಿ ರೂ.ಗೂ ಅಧಿಕ ಮೌಲ್ಯದ ಸ್ಥಿರ ಮತ್ತು ಚರಾಸ್ತಿಗಳನ್ನು ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ.
ಶ್ರೀನಿವಾಸ್ ಹೆಸರಿನಲ್ಲಿ 34.79 ಲಕ್ಷ ರೂ. ಮೌಲ್ಯದ ಚರಾಸ್ತಿ ಹಾಗೂ 5.41 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಗಳಿವೆ. ಸ್ಥಿರಾಸ್ತಿಯಲ್ಲಿ 1.13 ಕೋಟಿ ರೂ. ಬೆಲೆಬಾಳುವ ಪಿತ್ರಾರ್ಜಿತ ಕೃಷಿ ಭೂಮಿ ಹಾಗೂ 4.27 ಕೋಟಿ ರೂ. ಮೌಲ್ಯದ ಸ್ವಯಾರ್ಜಿತ ಆಸ್ತಿಗಳು ಸೇರಿವೆ. 3.60 ಲಕ್ಷ ರೂ. ನಗದು ಇರುವುದಾಗಿ ಅವರು ಅಫಿಡವಿಟ್​ನಲ್ಲಿ ತಿಳಿಸಿದ್ದಾರೆ.
45 ವರ್ಷದ ಶ್ರೀನಿವಾಸ್​ ಕೃಷಿ ಮತ್ತು ವ್ಯವಹಾರವನ್ನು ವೃತ್ತಿಯಾಗಿಸಿಕೊಂಡಿದ್ದಾರೆ. ತುಂಬಿಗೆರೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 2.96 ಲಕ್ಷ ರೂ. ಸಾಲ ಬಾಕಿ ಇದೆ. ಇವರು 1999-2000ನೇ ಸಾಲಿನಲ್ಲಿ ನಗರದ ಎ.ಆರ್.ಎಂ.ವಿಜ್ಞಾನ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪೂರ್ಣಗೊಳಿಸಿದ್ದಾರೆ. ತಮ್ಮ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣಗಳಿಲ್ಲ ಎಂದು ಅಫಿಡವಿಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು