2:13 AM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್ ಸ್ಪರ್ಧೆ

22/03/2026, 22:43

ದಾವಣಗೆರೆ(reporterkarnataka.com): ‘ಅಲ್ಪಸಂಖ್ಯಾತ ಸಮುದಾಯದ ನಾಯಕರಿಗೆ ಕಾಂಗ್ರೆಸ್‌ ಟಿಕೆಟ್‌ ಕೈತಪ್ಪಿರುವುದು ಬೇಸರವುಂಟು ಮಾಡಿದೆ. ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸೋಮವಾರ ನಾಮಪತ್ರ ಸಲ್ಲಿಸಲಿದ್ದೇನೆ’ ಎಂದು ಕಾಂಗ್ರೆಸ್‌ ಮುಖಂಡ ಸಾದಿಕ್‌ ಪೈಲ್ವಾನ್‌ ತಿಳಿಸಿದರು. ‘ಕಾಂಗ್ರೆಸ್‌ ಟಿಕೆಟ್‌ಗೆ 2013ರಿಂದ ಬೇಡಿಕೆ ಮುಂದಿಡುತ್ತಿದ್ದೇನೆ. ಕ್ಷೇತ್ರದಲ್ಲಿ ಪ್ರಬಲವಾಗಿರುವ ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗದ ನಾಯಕರನ್ನು ಪ್ರಜ್ಞಾಪೂರ್ವಕವಾಗಿ ನಿರ್ಲಕ್ಷ್ಯ ಮಾಡಲಾಗುತ್ತಿದೆ. ಮತದಾರರ ಒತ್ತಾಯದ ಮೇರೆಗೆ ಉಪಚುನಾವಣಾ ಕಣಕ್ಕೆ ಇಳಿಯಲು ಸಿದ್ಧನಾಗಿದ್ದೇನೆ’ ಎಂದು ಭಾನುವಾರ ಸುದ್ದಿಗಾರರಿಗೆ ಮಾಹಿತಿ ನೀಡಿದರು.
‘ರಾಷ್ಟ್ರಮಟ್ಟದ ಕುಸ್ತಿ ಪೈಲ್ವಾನ್‌ ಆಗಿದ್ದ ನನಗೆ ಅಖಾಡದಲ್ಲಿ ಆಟವಾಡುವ ಪಟ್ಟುಗಳು ಗೊತ್ತಿವೆ. ಮುಂದಿಟ್ಟ ಹೆಜ್ಜೆಯನ್ನು ಹಿಂದೆ ತೆಗೆಯುವುದಿಲ್ಲ. ಯಾವುದೇ ಒತ್ತಡಗಳಿಗೂ ಮಣಿಯುವುದಿಲ್ಲ. ಕ್ಷೇತ್ರದಲ್ಲಿ ಸಂಚರಿಸಿ ಮತದಾರರ ಮನವೊಲಿಸಿ ಗೆಲುವು ಸಾಧಿಸುವ ವಿಶ್ವಾಸವಿದೆ’ ಎಂದು ಹೇಳಿದರು.
ಟಿಕೆಟ್‌ಗೆ ಬೇಡಿಕೆ ಇಟ್ಟಿದ್ದ ಸಾದಿಕ್‌ ಪೈಲ್ವಾನ್‌ ಅವರು ‘ಬಿ’ ಫಾರಂ ಇಲ್ಲದೇ ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು