10:44 AM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಭೀಕರ ಅಪಘಾತ: 4 ಮಂದಿ ಸ್ಥಳದಲ್ಲೇ ಸಾವು

23/03/2026, 11:26

ಬೆಂಗಳೂರು(reporterkarnataka.com): ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಡಿವೈಡರ್‌ಗೆ ಬಸ್‌ ಡಿಕ್ಕಿಯಾಗಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಕೇರಳ ಮೂಲದ ಪಿ. ಕೆ. ಟ್ರಾವೆಲ್ಸ್ ಕಂಪನಿಗೆ ಸೇರಿದ ಬಸ್‌ ಕೇರಳದಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಗ್ರಾಮದ ಪುಟ್ಟಪ್ಪನದೊಡ್ಡಿ ಬಳಿ ಬಸ್‌ ಡಿವೈಡರ್‌ಗೆ ಡಿಕ್ಕಿಯಾಗಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಚಾಲಕ ನಿದ್ದೆ ಮಂಪರಿನಲ್ಲಿ ಇದ್ದಿದ್ದರಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಮೃತರೆಲ್ಲರೂ ಕೇರಳ ಮೂಲದವರು ಎಂದು ತಿಳಿದು ಬಂದಿದೆ. ಮಾಹಿತಿ ತಿಳಿದ ತಕ್ಷಣ ಚನ್ನಪಟ್ಟಣ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಪೈಕಿ ಇಬ್ಬರು ಬೆಂಗಳೂರಿನವರಾಗಿದ್ದಾರೆ. ಮೃತರನ್ನು ಕೇರಳದ ಕಾಜಿಕೋಟೆಯ ಮೊಹಮ್ಮದ್ ಫರಾನ್(22), ಸುಲ್ಫಿ (45), ಬೆಂಗಳೂರಿನ ಕಲಾಸಿಪಾಳ್ಯದ ನಿವಾಸಿ ರಶೀದ್(45) ಹಾಗೂ ಆಡುಗೋಡಿಯ ಅಣ್ಣೆಪಾಳ್ಯ ನಿವಾಸಿ ಸಾಕೇರ್ ಎಂದು ಗುರುತಿಸಲಾಗಿದೆ.
ಕೇರಳದ ಕಣ್ಣೂರಿನ ಅಬ್ದುಲ್​, ಅಲೇನ್​ ಎಂಬುವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು