2:00 PM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

23/03/2026, 20:54

ಬಾಗಲಕೋಟೆ(reporterkarnataka.com): ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಮತ್ತು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ.
ಕೈ ಅಭ್ಯರ್ಥಿ ಉಮೇಶ್ ಮೇಟಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌, ಸಚಿವ ಸತೀಶ್‌ ಜಾರಕಿಹೊಳಿ ಸಾಥ್‌ ನೀಡಿದರೆ, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಉಮೇದುವಾರಿಕೆ ಸಲ್ಲಿಕೆ ವೇಳೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ಹಾಗೂ ಮಾಜಿ ಸಿಎಂ ಜಗದೀಶ ಶೆಟ್ಟರ್ ಮತ್ತಿತರರು ಉಪಸ್ಥಿತರಿದ್ದರು. ಇಬ್ಬರು ಅಭ್ಯರ್ಥಿಗಳು ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಮೆರವಣಿಗೆ ನಡೆಸುವ ಮೂಲಕ ಶಕ್ತಿ ಪ್ರದರ್ಶನ ಮಾಡಿ, ನಾಮಪತ್ರ ಸಲ್ಲಿಸಿದ್ದಾರೆ.

*ಇಡೀ ಸರ್ಕಾರ ಉಮೇಶ್ ಮೇಟಿ ಜತೆಗಿದೆ: ಡಿಕೆಶಿ*
ಇಂದು ನಾವು ಬಸವಣ್ಣನವರ ನಾಡಿನಲ್ಲಿ ಇದ್ದೇವೆ. ನಾವು ನುಡಿದಂತೆ ನಡೆದುಕೊಂಡು ಮಾತು ಉಳಿಸಿಕೊಂಡಿದ್ದೇವೆ. ಗ್ಯಾರಂಟಿ ಯೋಜನೆಗಳಿಂದ ಎಲ್ಲಾ ವರ್ಗದ ಜನರಿಗೂ ಅನುಕೂಲವಾಗುತ್ತಿವೆ. ಇಡೀ ಸರ್ಕಾರ ಉಮೇಶ್ ಮೇಟಿ ಅವರ ಜತೆಗಿದೆ. ಉಪ ಚುನಾವಣೆಯಲ್ಲಿ ಉಮೇಶ್ ಮೇಟಿ ಅವರನ್ನು ಅತೀ ಹೆಚ್ಚು ಮತಗಳ ಅಂತರದಿಂದ ಅಭೂತಪೂರ್ವವಾಗಿ ಗೆಲ್ಲಿಸಬೇಕೆಂದು ಮತದಾರರನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌ ಕೋರಿದ್ದಾರೆ.
ಇಂದು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌ ಮೇಟಿ ಅವರ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯನವರ ಜತೆ ಭಾಗವಹಿಸಿದ ಬಳಕಿ ಬೃಹತ್‌ ಬಹಿರಂಗ ಸಭೆಯಲ್ಲಿ ಡಿಸಿಎಂ ಮಾತನಾಡಿದ್ದಾರೆ.

*ಜನರ ಪ್ರೀತಿ, ಬೆಂಬಲ ಬಿಜೆಪಿಗೆ ಶ್ರೀರಕ್ಷೆ: ಜೋಶಿ*
ಕ್ಷೇತ್ರದಾದ್ಯಂತ ಪಕ್ಷದ ಪರವಾದ ಅಲೆ ಕಂಡುಬರುತ್ತಿದ್ದು, ಜನರ ಪ್ರೀತಿ ಮತ್ತು ಬೆಂಬಲ ಭಾರತೀಯ ಜನತಾ ಪಕ್ಷಕ್ಕೆ ಶ್ರೀ ರಕ್ಷೆಯಾಗಲಿದೆ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನಪರ ಯೋಜನೆಗಳು ಹಾಗೂ ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳು ಪಕ್ಷಕ್ಕೆ ಈ ಚುನಾವಣೆಯಲ್ಲಿ ಭವ್ಯ ಜಯ ತಂದುಕೊಡಲಿವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.
ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ನಾಮಪತ್ರ ಸಲ್ಲಿಕೆ ವೇಳೆ ಕೇಂದ್ರ ಸಚಿವರು ಮಾತನಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು