10:34 PM Monday23 - March 2026
ಬ್ರೇಕಿಂಗ್ ನ್ಯೂಸ್
ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು…

ಇತ್ತೀಚಿನ ಸುದ್ದಿ

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್ ಅಂಗೀಕಾರ

23/03/2026, 22:28

ನವದೆಹಲಿ(reporterkarnataka.com): ಇಡೀ ರಾಜ್ಯವನ್ನೇ ತಲ್ಲಣಗೊಳಿಸಿದ ಧರ್ಮಸ್ಥಳ ಪಾಂಗಾಳದ ಅಪ್ರಾಪ್ತ ವಯಸ್ಸಿನ ಬಾಲಕಿ ಸೌಜನ್ಯ ಅಪಹರಣ, ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆ ನಡೆಸುವಂತೆ ಆಕೆಯ ತಾಯಿ ಸಲ್ಲಿಸಿದ್ದ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ವಿಚಾರಣೆಗೆ ಅಂಗೀಕರಿಸಿದೆ.
ಈ ಸಂಬಂಧ ಸರಕಾರ ಹಾಗೂ ಸಿಬಿಐಗೆ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಈ ಹಿಂದೆ ಸೌಜನ್ಯ ಅವರ ತಾಯಿ ಕುಸುಮಾವತಿ ಅವರು
ಕರ್ನಾಟಕ ಹೈಕೋರ್ಟ್ ಗೆ ಸಲ್ಲಿಸಿದ್ದ ಮರು ತನಿಖೆ ಅರ್ಜಿಯನ್ನು ವಜಾಗೊಳಿಸಿತ್ತು, ಇದನ್ನು ಪ್ರಶ್ನಿಸಿ ಸೌಜನ್ಯ ಅವರ ತಾಯಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.
ಈ ಹಿಂದೆ ​ಪ್ರಕರಣದ ಆರೋಪಿಯಾಗಿದ್ದ ಸಂತೋಷ್ ರಾವ್ ಅವರನ್ನು ಸಿಬಿಐ ವಿಶೇಷ ನ್ಯಾಯಾಲಯವು ದೋಷಮುಕ್ತಗೊಳಿಸಿತ್ತು. ಈ ತೀರ್ಪಿನ ಬೆನ್ನಲ್ಲೇ ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ ವ್ಯಾಪಕ ಪ್ರತಿಭಟನೆಗಳು ನಡೆದಿದ್ದವು. ಇದೀಗ ಸುಪ್ರೀಂ ಕೋರ್ಟ್ ಅರ್ಜಿಯನ್ನು ಪುರಸ್ಕರಿಸಿರುವುದು ಹೊಸ ಭರವಸೆ ಮೂಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು