9:02 PM Tuesday24 - March 2026
ಬ್ರೇಕಿಂಗ್ ನ್ಯೂಸ್
ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ

ಇತ್ತೀಚಿನ ಸುದ್ದಿ

ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ ಆಕ್ರೋಶ

24/03/2026, 17:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡಲ್ಲಿ ಮತ್ತೆ ತಲೆದೋರಿದ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ ದತ್ತಪೀಠದ ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಸರ್ಕಾರದ ವಿರುದ್ಧ ಮುಸ್ಲಿಂ ಸಮುದಾಯದ ಆಕ್ರೋಶ ವ್ಯಕ್ತವಾಗಿದೆ.
ಜಿಯಾರತ್ ಹಾಗೂ ಫಾತೇಹಾ ಸಲ್ಲಿಸಲು ಅವಕಾಶ ನೀಡದ ಜಿಲ್ಲಾಡಳಿತದ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.
ದರ್ಗಾ ಮತ್ತು ಖಬರಸ್ಥಾನ್‌ನಲ್ಲಿ ಜಿಯಾರತ್ ಮಾಡಲು ಅವಕಾಶ ನಿರಾಕರಿಸಿರುವುದರಿಂದ ಮುಸ್ಲಿಂ ಸಮುದಾಯ ಅಸಮಾಧಾನ ವ್ಯಕ್ತಪಡಿಸಿದೆ. ಜಿಯಾರತ್ ಅಂದರೆ ಸಮಾಧಿಗಳಿಗೆ ಪ್ರಾರ್ಥನೆ ಸಲ್ಲಿಸುವುದು, ಫಾತೇಹಾ ಅಂದರೆ ಸಮಾಧಿ ಬಳಿ ಸಿಹಿ ಇಟ್ಟು ಪೂಜೆ ಮಾಡುವ ಪದ್ಧತಿ. ಮುಂಚಿತವಾಗಿ ಮಾಹಿತಿ ನೀಡಿದ್ದರೂ ಜಿಲ್ಲಾಡಳಿತ ಅವಕಾಶ ನೀಡಿಲ್ಲ ಎಂದು ಆರೋಪಿಸಲಾಗಿದೆ. ಈ ಆಚರಣೆಗಳು ಹೊಸದು ಎಂದು ಹೇಳಿ ಅನುಮತಿ ನಿರಾಕರಿಸಲಾಗಿದೆ ಎನ್ನಲಾಗಿದೆ. ಈ ಹಿಂದೆ ತೆರೆಯುತ್ತಿದ್ದ ಖಬರಸ್ಥಾನ್ ಗೇಟ್ ಈ ಬಾರಿ ಸಂಪೂರ್ಣ ಬಂದ್ ಮಾಡಲಾಗಿದೆ.
ದೂರದಿಂದಲೇ ಖಬರಸ್ಥಾನ್ ನೋಡಿ ಹಿಂತಿರುಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ವಿರೋಧವಾಗಿ ದತ್ತಪೀಠದಲ್ಲಿ ಸುಮಾರು 3 ಗಂಟೆಗಳ ಕಾಲ ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ ನಡೆಯಿತು.


ಮುಂದಿನ ದಿನಗಳಲ್ಲಿ ಯಾವುದೇ ಅಡಚಣೆ ಇಲ್ಲದೆ ಜಿಯಾರತ್ ಮಾಡಲು ಅವಕಾಶ ನೀಡಬೇಕು ಎಂದು ಆಗ್ರಹಿಸಲಾಗಿದೆ.
ಈ ಸಂಬಂಧ ಧಾರ್ಮಿಕ ದತ್ತಿ ಸಚಿವ ರಾಮಲಿಂಗಾ ರೆಡ್ಡಿ, ಸಿಎಂ ಹಾಗೂ ಜಮೀರ್ ಅಹಮದ್ ಖಾನ್ ಅವರಿಗೆ ದೂರು ನೀಡಲಾಗಿದೆ.
ಚಿಕ್ಕಮಗಳೂರು ತಾಲೂಕಿನ ವಿವಾದಿತ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಈ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು