ಇತ್ತೀಚಿನ ಸುದ್ದಿ
ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್
25/03/2026, 15:47
ದಾವಣಗೆರೆ(reporterkarnataka.com): ದಾವಣಗೆರೆ ಬೈ ಎಲೆಕ್ಷನ್ ಅಖಾಡ ರಂಗೇರಿದ್ದು, ಕಾಂಗ್ರೆಸ್ ಗೆ ಬಂಡಾಯದ ಬಿಸಿ ತಟ್ಟಿದೆ.
ಕಾಂಗ್ರೆಸ್ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡ್ತಿದ್ದಾರೆ ಎಂದು ದಾವಣಗೆರೆ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಗುಡುಗಿದ್ದಾರೆ.
ಕಾಂಗ್ರೆಸ್ ನಲ್ಲಿ ಅಲ್ಪ ಸಂಖ್ಯಾತರಿಗೆ ಅನ್ಯಾಯ ಆಗುತ್ತಿದೆ ಎಂದಿದ್ದಾರೆ. ಎಲೆಕ್ಷನ್ ಟಿಕೆಟ್ ಹಂಚಿಕೆಯಲ್ಲಿ ಮುಸ್ಲಿಂ ಹಾಗೂ ಅಹಿಂದ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
*ನಾಮಪತ್ರ ವಾಪಸ್ ಇಲ್ಲ..!*
ನಾಮಪತ್ರ ಹಿಂಪಡೆಯುವಂತೆ ಒತ್ತಡವಿದ್ದರೂ ಸಾದಿಕ್ ಪೈಲ್ವಾನ್ ಬಿಗಿಪಟ್ಟು ಹಿಡಿದಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಅಹಿಂದ ಶಕ್ತಿ ಪ್ರದರ್ಶನವಾಗಬೇಕು. ಕಾಂಗ್ರೆಸ್ ಟಿಕೆಟ್ ವಿಚಾರದಲ್ಲಿ ಅಲ್ಪಸಂಖ್ಯಾತರು ಮತ್ತು ಅಹಿಂದ ಸಮುದಾಯವನ್ನು ಕಡೆಗಣಿಸಲಾಗಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ ನಾನು ಕಣಕ್ಕಿಳಿದಿದ್ದೇನೆ ಎಂದು ಹೇಳಿದರು. ನಾನು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ. ಯಾವ ಒತ್ತಡಕ್ಕೂ ತಲೆಬಾಗುವುದಿಲ್ಲ ಎಂದು ಹೇಳಿದರು.












