6:10 AM Friday2 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

25/03/2026, 17:38

ಬೆಂಗಳೂರು(reporterkarnataka.com): ರಾಜ್ಯ ರಾಜಕಾರಣದಲ್ಲಿ ಸಿಎಂ ಕುರ್ಚಿ ಕಾಳಗ ಜೋರಾಗಿದೆ. ಇದೀಗ ಸಿಎಂ ಕುರ್ಚಿ ಆಟದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟ‌ಕ ಹೇಳಿಕೆಯೊಂದನ್ನು ನೀಡಿದ್ದಾರೆ‌. ಹೈಕಮಾಂಡ್ ಹೇಳಿದಾಗ್ಲೇ ಡಿಕೆಶಿ ಸಿಎಂ ಆಗುತ್ತಾರೆ ಎಂದು ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಡಿ. ಕೆ. ಶಿವಕುಮಾರ್, ಸಿದ್ದರಾಮಯ್ಯ ಮಧ್ಯದ ಕುರ್ಚಿ ಕಾಳಗದ ಬಗ್ಗೆ ವಿಪಕ್ಷದ ನಾಯಕರು ಸಿಎಂಗೆ ಪ್ರಶ್ನೆ ಕೇಳಿದರು. ಅದಕ್ಕೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ನಮ್ಮದು ಹೈಕಮಾಂಡ್ ಆಧಾರಿತ ಪಕ್ಷ. ಹೈಕಮಾಂಡ್ ಹೇಳಿದರೆ ಸಿಎಂ‌ ಕುರ್ಚಿ ಬಿಟ್ಟು ಕೊಡುವೆ. ಹೈ ಕಮಾಂಡ್ ಹೇಳಿದರೆ ಡಿ ಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದರು.
ಸಿಎಂ ಸಿದ್ದರಾಮಯ್ಯ ಇಷ್ಟಕ್ಕೆ ಸುಮ್ಮನಾಗಲಿಲ್ಲ. ಏನಪ್ಪಾ ಅಶೋಕ ನಿನಗೆ ಸಿಎಂ ಆಗುವ ಆಸೆ ಇಲ್ವಾ ಎಂದು ಪ್ರಶ್ನೆ ಮಾಡಿದರು. ಸಿಎಂ ಆಗಬೇಕು ಅನ್ನೋದನ್ನು ಹೇಳಲಾಗದೆ ಆರ್ ಅಶೋಕ್ ಈ ವೇಳೆ ಸ್ಮೈಲ್ ಮಾಡಿದ್ದಾರೆ.
ಅಶೋಕ ಬೇಕಿದ್ರೂ ಸಿಎಂ ಆಗಲಿ, ಅರವಿಂದ ಬೆಲ್ಲದ ಆದರೂ ಸಿಎಂ ಆಗಲಿ, ಅಶ್ವತ್ ನಾರಾಯಣ ಸಿಎಂ ಆದರೂ ಸಹ ಸಂತೋಷ ಎಂದು ಸಿಎಂ ಹೇಳಿದರು. ಆದರೆ ವಿಜಯೇಂದ್ರ ನೀವು ಸಿಎಂ ಆಗೋಕೆ ಬಿಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರ ಕಾಲು ಎಳೆಯೋದನ್ನ ಮಾತ್ರ ಮರೆಯಲಿಲ್ಲ.
ಅಲ್ಲ ಸಾರ್.. ಬಿಜೆಪಿಯ ಶಾಸಕರು ಸಿಎಂ ಆಗೋ ಬಗ್ಗೆ ಹೇಳಿದ್ರಿ. ಡಿ ಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಮಾತೇ ಆಡಲಿಲ್ವಲ್ಲ ಎಂದು ಬಿಜೆಪಿ ಶಾಸಕ ವಿ ಸುನೀಲ್ ಕುಮಾರ್ ಪ್ರಶ್ನೆ ಮಾಡಿದರು.‌
ಹೈಕಮಾಂಡ್ ನವರು ಯಾವಾಗ ತೀರ್ಮಾನ ಮಾಡುತ್ತಾರೆ ಆಗ ಡಿಕೆ ಶಿವಕುಮಾರ್ ಅವರು ಸಿಎಂ ಆಗುತ್ತಾರೆ. ಇಲ್ಲಿರುವ 224 ಶಾಸಕರು ಕೂಡ ಮುಖ್ಯಮಂತ್ರಿ ಆಗಲು ಅರ್ಹರಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಆಗುವ ಅರ್ಹತೆ ಹಲವರಿಗಿದೆ. ಎಂ ಬಿ ಪಾಟೀಲ್, ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ ಸೇರಿದಂತೆ ಅನೇಕರಿಗೆ ಸಿಎಂ ಆಗುವ ಅರ್ಹತೆ ಇದೆ, ಆದರೆ ಅವಕಾಶ ಇಲ್ಲ. ಆದರೆ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಸಿದ್ದರಾಮಯ್ಯ ಭವಿಷ್ಯ ನುಡಿದರು. ಆ ಮೂಲಕ ಎಲ್ಲಾ‌ ಗೊಂದಲಗಳಿಗೆ ತೆರೆ ಎಳೆಯುವ ಯತ್ನ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು