9:04 PM Thursday1 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ

25/03/2026, 17:43

ಧಾರವಾಡ(reporterkarnataka.com): ಮಹಿಳೆಯೊಂದಿಗೆ ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಮಾಜಿ ಶಾಸಕರೊಬ್ಬರ ಪುತ್ರನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಧಾರವಾಡ ಗ್ರಾಮೀಣ ಠಾಣೆ ಪೊಲೀಸರ ತನಿಖೆಯಿಂದ ಈ ವಿಷಯ ತಿಳಿದುಬಂದಿದ್ದು, ಈ ಸಂಬಂಧ ಮಹಿಳೆ ಸೇರಿದಂತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಧಾರವಾಡದ ರಾಮಾಪುರ ಗ್ರಾಮದ ರೈಲ್ವೆ ಹಳಿ ಪಕ್ಕದಲ್ಲಿರುವ ದಟ್ಟ ಅರಣ್ಯ ಪ್ರದೇಶದಲ್ಲಿ ಕಾರಿನೊಳಗೆ ಗುರುತು ಸಿಗದಂತೆ ದುಷ್ಕರ್ಮಿಗಳು ರಾಜು ಬೋಳ ಶೆಟ್ಟಿ ಅವರನ್ನು ಸುಟ್ಟು ಪರಾರಿಯಾಗಿದ್ದರು.
ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಗೆ ರಾಜು ಸಾಲದ ರೂಪದಲ್ಲಿ ಹಣ ನೀಡುತ್ತಿದ್ದರು. ಇದುವರೆಗೂ 2 ಲಕ್ಷ ರೂ.ಗೂ ಹೆಚ್ಚು ಹಣ ಪಡೆದುಕೊಂಡಿದ್ದ ಮಹಿಳೆ ಇತ್ತೀಚೆಗೆ ರಾಜು ಅವರೊಂದಿಗೆ ಮನಸ್ತಾಪ ಹೊಂದಿದ್ದರು. ನಿನ್ನೆಯೂ ಸಹ ರಾಜು ಅವರ ಜಮೀನಿನ ಬಳಿ ಮಹಿಳೆ ಹೋಗಿದ್ದು, ಆಕೆಯ ಪ್ರಿಯಕರ ಹಾಗೂ ಮಗ ಸೇರಿ ರಾಜು ಅವರನ್ನು ಕೊಲೆ ಮಾಡಿ ಸಾಕ್ಷ್ಯ ನಾಶಪಡಿಸಲು ಬೆಂಕಿ ಹಚ್ಚಿರುವುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ.
ಜಮೀನಿನಲ್ಲೇ ಕೊಲೆ ಮಾಡಿ ರಾಜು ಅವರ ಕಾರಿನ ಹಿಂದಿನ ಸೀಟಿನಲ್ಲಿ ಮೃತದೇಹವಿಟ್ಟು ಮೊದಲೇ ಮಾಡಿಕೊಂಡ ಸಂಚಿನಂತೆ ತಂದಿದ್ದ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಮಹಿಳೆ ಸೇರಿ ಮೂವರು ಪರಾರಿಯಾಗಿದ್ದರು.ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ತನಿಖೆ ಚುರುಕುಗೊಳಿಸಿದ ಪೊಲೀಸರು ಕೆಲವೇ ಗಂಟೆಗಳಲ್ಲಿ ಮಹಿಳೆ ಸೇರಿದಂತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು