1:10 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಕಾಂಗ್ರೆಸ್‌ಗೆ ಬಿಗ್ ಶಾಕ್;‌ 48 ವರ್ಷಗಳ ಇತಿಹಾಸವಿರುವ 24 ಅಕ್ಬರ್ ರೋಡ್ ಕಚೇರಿ ಖಾಲಿ ಮಾಡಲು ಡೆಡ್‌ಲೈನ್!

25/03/2026, 18:06

ನವದೆಹಲಿ(reporterkarnataka.com): ದೇಶದ ರಾಜಕಾರಣದಲ್ಲಿ ಹಲವು ದಶಕಗಳ ಕಾಲ ಪಾರುಪತ್ಯ ಮೆರೆದಿದ್ದ, ಹಾಗೂ ಅನೇಕ ಏಳುಬೀಳುಗಳನ್ನು ಕಂಡಿರುವ ಕಾಂಗ್ರೆಸ್‌ ಪಕ್ಷಕ್ಕೆ ಇದೀಗ ಅನಿರೀಕ್ಷಿತ ಸಂಕಷ್ಟವೊಂದು ಎದುರಾಗಿದೆ. ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ಕಳೆದ 48 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಶಕ್ತಿ ಕೇಂದ್ರವಾಗಿ ಮತ್ತು ಅಧಿಕಾರದ ಬಿಂದುವಾಗಿ ಹಾಗೂ ಅನೇಕ ರಾಜಕೀಯ ಪಲ್ಲಟಗಳಿಗೆ ಸಾಕ್ಷಿಯಾಗಿ ಕಾರ್ಯನಿರ್ವಹಿಸುತ್ತಿದ್ದ 24 ಅಕ್ಬರ್ ರೋಡ್ ಕಚೇರಿಯನ್ನು ಖಾಲಿ ಮಾಡುವಂತೆ ಎಸ್ಟೇಟ್ ಇಲಾಖೆ ನೋಟಿಸ್ ಜಾರಿ ಮಾಡಿದೆ.
ಇದೇ ಮಾರ್ಚ್ 28 (ಶನಿವಾರ)ರೊಳಗಾಗಿ 24 ಅಕ್ಬರ್‌ ರೋಡ್‌ನಲ್ಲಿರುವ ಪಕ್ಷದ ಕಚೇರಿಯನ್ನು ತೆರವುಗೊಳಿಸುವಂತೆ, ಕಾಂಗ್ರೆಸ್‌ ಪಕ್ಷಕ್ಕೆ ಎಸ್ಟೇಟ್‌ ಇಲಾಖೆ ನೋಟಿಸ್‌ ನೀಡಿದೆ. 1978ರಿಂದಲೂ ಈ ಬೃಹತ್‌ ಬಂಗಲೆ ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ಪ್ರಧಾನ ಕಚೇರಿಯಾಗಿ ಕಾರ್ಯನಿರ್ವಹಿಸುತ್ತಿತ್ತು. ಇಂದಿರಾ ಗಾಂಧಿ ಕಾಲದಿಂದ ಹಿಡಿದು ಇಂದಿನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವರೆಗೂ, 24 ಅಕ್ಬರ್‌ ರೋಡ್‌ ಕಚೇರಿಯೇ ಕಾಂಗ್ರೆಸ್‌ ಪಕ್ಷದ ಜೀವಾಳವಾಗಿತ್ತು.

ಕಳೆದ 2023ರಲ್ಲಿ ಹೊಸದಿಲ್ಲಿಯ ಕೋಟ್ಲಾ ಮಾರ್ಗದಲ್ಲಿ ಕಾಂಗ್ರೆಸ್‌ ನೂತನ ಕಚೇರಿ ಇಂದಿರಾ ಭವನ ಉದ್ಘಾಟನೆಗೊಂಡಿದೆ. ಅಲ್ಲಿಯವರೆಗೂ 24 ಅಕ್ಬರ್‌ ರೋಡ್‌ನಲ್ಲಿರುವ ಬಂಗಲೆಯೇ ಪಕ್ಷದ ರಾಷ್ಟ್ರೀಯ ಪ್ರಧಾನ ಕಚೇರಿಯಾಗಿತ್ತು. ಪಕ್ಷ ತನ್ನ ಚಟುವಟಿಕೆಗಳನ್ನು ಇಂದಿರಾ ಭವನಕ್ಕೆ ವರ್ಗಾಯಿಸಿದ ಮೇಲೂ, ಅಕ್ಬರ್‌ ರಸ್ತೆಯಲ್ಲಿರುವ ಕಟ್ಟಡಕ್ಕೆ ಮಾರುಕಟ್ಟೆ ದರದಂತೆ ಬಾಡಿಗೆ ಪಾವತಿಸುತ್ತಿತ್ತು. ಆದರೆ ಈಗ ಕೇಂದ್ರ ಸರ್ಕಾರದ ಎಸ್ಟೇಟ್ ಇಲಾಖೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದು, ಬರುವ ಮಾರ್ಚ್ 28ರ ಗಡುವಿನೊಳಗೆ ಕಚೇರಿ ಸಂಪೂರ್ಣ ಖಾಲಿ ಮಾಡುವಂತೆ ತಾಕೀತು ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು