1:42 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

Kodagu | ವಿರಾಜಪೇಟೆ: ಕಾಳುಮೆಣಸು ಕಳ್ಳತನ; 3 ಮಂದಿ ಆರೋಪಿಗಳ ಬಂಧನ

26/03/2026, 14:47

ಗಿರಿಧರ್ ಕೊಂಪುಳಿರ ಮಡಿಕೇರಿ

info..reporterkarnataka@gmail.com

ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಣಗಿಸಲು ಹಾಕಲಾಗಿದ್ದ ಕಾಳು ಮೆಣಸು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲು ಸಮೇತ ಮೂವರನ್ನು ಬಂಧಿಸಲಾಗಿದೆ.ಮೂಲತಃ ತಿತಿಮತಿ ನೋಕ್ಯ ಗ್ರಾಮದ ಸದ್ಯ ಪೆರಂಬಾಡಿಯ ನಿವಾಸಿ ಶಫೀಕ್ ಕೆ. ಬಿ(28), ಆರ್ಜಿ ಗ್ರಾಮದ ದರ್ಶನ್ ನಾಯಕ್(25) ಕೇರಳದ ಮಾನಂದವಾಡಿಯ ಎಡಪಾಡಿ ನಿವಾಸಿ ಮೊಹಮದ್ ಶಾಕೀರ್ (31) ಬಂಧಿತರು. ವಿರಾಜಪೇಟೆ ತಾಲ್ಲೂಕಿನ ಕಣ್ಣಂಗಾಲ ಗ್ರಾಮದ ಲೆಹರ್ ಗಣಪತಿ ಎಂಬುವವರಿಗೆ ಸೇರಿದ ಕಾಫಿ ಕಣದಿಂದ 300 ಕೆಜಿ ಕಾಳು ಮೆಣಸು ಕಳುವು ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿ ತನಿಖೆ ಕೈಗೊಂಡ ಪೊಲೀಸರು ಆರೋಪಿಗಳನ್ನು ಹುಣಸೂರು ತಾಲ್ಲೂಕು ಪಂಚವಳ್ಳಿಯಲ್ಲಿ ಬಂಧಿಸಿದ್ದಾರೆ. ಬಂಧಿತರು ಕಳುವು ಮಾಡಿದ ಕಾಳು ಮೆಣಸು ಸ್ಥಳೀಯವಾಗಿ ಮಾರಾಟ ಮಾಡಿದರೆ ಅನುಮಾನ ಬರುತ್ತದೆ ಎನ್ನುವ ಕಾರಣಕ್ಕೆ ಕೇರಳದಲ್ಲಿ 215 ಕೆಜಿ ಮಾರಾಟ ಮಾಡಿದ್ದು ವಶಕ್ಕೆ ಪಡೆಯಲಾಗಿದೆ, ಕೃತ್ಯಕ್ಕೆ ಬಳಸಿದ್ದ ಎರಡು ಕಾರು ಒಂದು ಬೈಕ್ ಸಹ ಪಡೆದುಕೊಂಡಿದ್ದು, ಬಂದಿತರ ಮೇಲೆ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ 75 ಕೆಜಿ ಕಾಳು ಮೆಣಸು ಮತ್ತು ಕಾರು ಕಳ್ಳತನ ಪ್ರಕರಣ ದಾಖಲಾಗಿರುವುದು ಬೆಳಕಿಗೆ ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು