12:00 AM Monday28 - September 2026
ಬ್ರೇಕಿಂಗ್ ನ್ಯೂಸ್
ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ವಿಜಯನಗರ | ಹೊಸಪೇಟೆ ಬಳಿ ರೈಲು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವು *ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ…

ಇತ್ತೀಚಿನ ಸುದ್ದಿ

Kodagu | ಸೋಮವಾರಪೇಟೆ: ಬೈಕ್ ನಲ್ಲಿ ಗಾಂಜಾ ಸಾಗಾಟ: ಇಬ್ಬರ ಬಂಧನ

26/03/2026, 14:52

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಗಾಂಜಾ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿರುವ ಸೋಮವಾರಪೇಟೆ ಅಬಕಾರಿ ಇಲಾಖೆ ಅಧಿಕಾರಿಗಳು ಮಾಲು ಸಮೇತ ಇಬ್ಬರನ್ನು ಬಂಧಿಸಿದ್ದಾರೆ.
ಕುಶಾಲನಗರ ಭಾಗದಿಂದ ಸೋಮವಾರಪೇಟೆಗೆ ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವ ಬಗ್ಗೆ ಸಿಕ್ಕ ಖಚಿತ ಮಾಹಿತಿ ಮೆರೆಗೆ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಪಟ್ಟಣ ಸಮೀಪದ ಕರ್ಕಳ್ಳಿ ಗ್ರಾಮದ ಎಸ್. ಟಿ. ಯಶವಂತ್ ಹಾಗೂ ಎಸ್. ಡಿ ಚೇತನ್ ಅವರುಗಳನ್ನು ವಶಕ್ಕೆ ಪಡೆದಿದ್ದಾರೆ.
ಕುಶಾಲನಗರದಿಂದ ಗಾಂಜಾ ತಂದು ಸೋಮವಾರಪೇಟೆ ಭಾಗದಲ್ಲಿ ಮಾರಾಟ ಮಾಡುತ್ತಿದ್ದರು ಎನ್ನಲಾಗಿದ್ದು, ಮಾರಾಟ ಮಾಡುತ್ತಿದ್ದವರು ಸಹ ಗಾಂಜಾ ವ್ಯಸನಿಗಳು ಎಂದು ತನಿಖೆಯಿಂದ ತಿಳಿದು ಬಂದಿದೆ.
ಆರೋಪಿಗಳಿಂದ ತೆನೆ ಬರಿತ 339 ಗ್ರಾಂ ಗಾಂಜಾ ಮತ್ತು ಒಂದು ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು