1:26 AM Thursday2 - May 2024
ಬ್ರೇಕಿಂಗ್ ನ್ಯೂಸ್
ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ

ಇತ್ತೀಚಿನ ಸುದ್ದಿ

ದ.ಕ. ಜಿಲ್ಲೆ: ಸೆಪ್ಟೆಂಬರ್ 30ರಂದು ಲೋಕ್ ಅದಾಲತ್: ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥ

13/09/2021, 10:10

ಮಂಗಳೂರು (reporterkarnataka.com):
ಇದೇ ಸೆಪ್ಟೆಂಬರ್ 30ರಂದು ಜಿಲ್ಲೆಯಾದ್ಯಂತ ಲೋಕ್ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಲೋಕ್ ಅದಾಲತ್‍ನಲ್ಲಿ ರಾಜಿ ಸಂಧಾನದ ಮೂಲಕ ಪ್ರಕರಣಗಳ ಇತ್ಯರ್ಥಪಡಿಸಲಾಗುತ್ತಿದೆ. 


ಕಳೆದ ಆಗಸ್ಟ್ 14ರಂದು ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮೆಗಾ ಲೋಕ್ ಅದಾಲತ್‍ನಲ್ಲಿ 11,192 ಅರ್ಹ ಪ್ರಕರಣಗಳ ಪೈಕಿ 5,310 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಎನ್‍ಐ ಕಾಯ್ದೆಯಡಿ 211 ಪ್ರಕರಣಗಳನ್ನು ಇತ್ಯರ್ಥಪಡಿಸಿ 3,57,06,682 ರೂ.ಗಳ ಪರಿಹಾರ ಮೊತ್ತವನ್ನು ವಿತರಿಸಲಾಗಿದೆ.  ಅದೇ ರೀತಿ ಮೋಟಾರು ವಾಹನ ಅಪಘಾತ ಪ್ರಕರಣಗಳಲ್ಲಿ 329 ಪ್ರಕರಣಗಳನ್ನು ಇತ್ಯರ್ಥಪಡಿಸಿ 8,96,57,166 ರೂ. ಮೊತ್ತಗಳ ಪರಿಹಾರವನ್ನು ಸಂಬಂಧಿಸಿದವರಿಗೆ ವಿತರಿಸಲಾಗಿದೆ. 138 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿ 94,37,090 ರೂ. ಗಳ ದಂಡವನ್ನು ಬ್ಯಾಂಕ್‍ಗಳಿಗೆ ಸಂಬಂಧಿಸಿದವರಿಂದ ಪಾವತಿಸಲಾಗಿದೆ. 
ಜಿಲ್ಲೆಯಲ್ಲಿ ಪರಸ್ಪರ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲು ಅರ್ಹವಿರುವ ಪ್ರಕರಣಗಳಲ್ಲಿ ಇದೇ ಸೆಪ್ಟೆಂಬರ್ 30 ರಂದು ಹಮ್ಮಿಕೊಳ್ಳಲಾಗಿರುವ ಲೋಕ್ ಅದಾಲತ್‍ನಲ್ಲಿ ಭಾಗವಹಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವಂತೆ ಜಿಲ್ಲಾ ನ್ಯಾಯಾಲಯದ ಹಿರಿಯ ಶ್ರೇಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪೃಥ್ವಿರಾಜ್ ವರ್ಣೇಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು