1:41 AM Thursday1 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ ನಿವೃತ್ತಿ ಘೋಷಣೆ

27/03/2026, 20:08

ಬೆಂಗಳೂರು(reporterkarnataka.com): ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸಾದಿಕ್ ಪೈಲ್ವಾನ್ ಸ್ಪರ್ಧೆಯಿಂದ ನಿವೃತ್ತಿ ಘೋಷಿಸಿದ್ದಾರೆ.

ಟಿಕೆಟ್ ಕೈತಪ್ಪುತ್ತಿದ್ದಂತೆ ಸಾದಿಕ್ ಪೈಲ್ವಾಅನ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಾಯಕರು ಸಾದಿಕ್ ಪೈಲ್ವಾನ್ ಅವರೊಂದಿಗೆ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಅತನಾಡಿದ ಸಾದಿಕ್ ಪೈಲ್ವಾನ್, ಬಂಡಾಯ ಸ್ಪರ್ಧೆಯಿಂದ ನಾನು ನಿವೃತ್ತಿಯಾಗಿದ್ದೇನೆ ಎಂದು ಹೇಳಿದರು.
ನಾನು ಖಂಡಿತವಾಗಿಯೂ ಅಲ್ಪಸಂಖ್ಯಾತರು, ಅಹಿಂದ ವರ್ಗದ ಜನ ಭುಜಕ್ಕೆ ಭುಜ ಕೊಟ್ಟು ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಪುತ್ರ ಸಮರ್ಥ್ ಶಾಮನೂರು ಅವರನ್ನು ಗೆಲ್ಲಿಸುತ್ತೇವೆ ಎಂದು ನುಡಿದರು.
ನಾನು ಕಾಂಗ್ರೆಸ್ ನವನೇ. ಮನೆಯಲ್ಲಿ ಅಣ್ಣ-ತಮ್ಮಂದಿರ ಮಧ್ಯೆ ಜಗಳವಾದರೆ ಹಿರಿಯರು ಬಗೆಹರಿಸುತ್ತಾರೆ. ಹಾಗೇ ಹಿರಿಯ ನಾಯಕರು ಎಲ್ಲವನ್ನೂ ಬಗೆಹರಿಸಿದ್ದಾರೆ. ಒಗ್ಗಟ್ಟಿನಿಂದ ಉಪಚುನಾವಣೆಯನ್ನು ಎದುರಿಸುತ್ತೇವೆ ಎಂದು ಹೇಳಿದರು.
ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಸಮರ್ಥ್ ಮಲ್ಲಿಕಾರ್ಜುನ್ ಅವರ ಪರವಾಗಿ ಚುನಾವಣೆ ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದರು. ಸಂಧಾನದ ಜವಾಬ್ದಾರಿ ಹೊತ್ತಿದ್ದ ಶಾಸಕ ರಿಜ್ವಾನ್ ಅರ್ಷದ್, ಮೇಲ್ಮನೆ ಮುಖ್ಯ ಸಚೇತಕ ಸಲೀಮ್ ಅಹ್ಮದ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು