8:27 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಮಾರ್ಚ್ 29: ಆತ್ಮಶಕ್ತಿ ಬಜ್ಪೆ ಶಾಖೆಯಿಂದ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ

27/03/2026, 21:28

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬಜ್ಪೆ ಶಾಖೆಯ 12ನೇ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ ಬಜ್ಪೆ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನ ಮಾರ್ಚ್ 29ರಂದು ನಡೆಯಲಿದೆ.
ರೋಟರಿ ಕ್ಲಬ್, ಬಜ್ಪೆ, ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ) ಬಜ್ಪೆ, ಕರಂಬಾರು ಹಾಗೂ ಎನ್.ಜಿ. ವಲ್ಡ್ ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು, ಇವರ ಜಂಟಿ ಸಹಯೋಗದೊಂದಿಗೆ ಮಾ. 29ರಂದು ಪೂರ್ವಾಹ್ನ 9.30ರಿಂದ ಅಪರಾಹ್ನ 12.30 ರವರೆಗೆ ಶಿಬಿರ ಆಯೋಜಿಸಲಾಗಿದೆ.
ಈ ವೈದ್ಯಕೀಯ ಶಿಬಿರದಲ್ಲಿ ಕೆಎಂಸಿ ಆಸ್ಪತ್ರೆ ಅತ್ತಾವರ ಮತ್ತು ಮಣಿಪಾಲ ಕಾಲೇಜ್ ಡೆಂಟಲ್ ಸಾಯನ್ಸಸ್ ಮಂಗಳೂರು ಹಾಗೂ ದುರ್ಗಾ ಸಂಜೀವನಿ ಮಣಿಪಾಲ್ ಆಸ್ಪತ್ರೆ, ಕಟೀಲು ಇದರ ವೈದ್ಯರ ತಂಡದವರಿಂದ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರ ಚಿಕಿತ್ಸೆ, ಮಧುಮೇಹ ತಪಾಸಣೆ , ಬಿಪಿ ತಪಾಸಣೆ, ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಕಿವಿ-ಮೂಗು, ಗಂಟಲು ತಪಾಸಣೆ, ಬಾಯಿ ಮತ್ತು ಹಲ್ಲುಗಳ ಆರೋಗ್ಯ ತಪಾಸಣೆ, ಹುಳುಕು ಹಲ್ಲುಗಳನ್ನು ಭರ್ತಿ ಮಾಡುವುದು, ಹಲ್ಲುಗಳ ಶುಚಿ, ಹೆಚ್ಚಿನ ಚಿಕಿತ್ಸೆಗೆ ಹಸಿರು ಕಾರ್ಡನ್ನು ನೀಡುವುದು ಹಾಗೂ ಇತರ ವೈದ್ಯಕೀಯ ಸೇವೆಗಳು ಲಭ್ಯವಿರುತ್ತದೆ. ಅಗತ್ಯವುಳ್ಳವರಿಗೆ ಉಚಿತ ಕನ್ನಡಕ ವಿತರಣೆಯನ್ನು ಮಾಡಲಾಗುವುದು. ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕಾಗಿ ಎಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು