12:57 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಪುರಾತನ ದೇಗುಲದಲ್ಲಿ ಪ್ರಿ ವೆಡಿಂಗ್‌ ಶೂಟಿಂಗ್‌: ಸ್ಥಳೀಯರಿಂದ ಜೋಡಿ ಮೇಲೆ ಹಲ್ಲೆ

28/03/2026, 18:28

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಸಕಲೇಶಪುರದ ಬೆಟ್ಟದ ಭೈರವೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರೀ-ವೆಡ್ಡಿಂಗ್ ಫೋಟೋಶೂಟ್‌ಗಾಗಿ ಬಂದಿದ್ದ ತಂಡದ ಮೇಲೆ ಸ್ಥಳೀಯ ಯುವಕರು ಹಲ್ಲೆ ನಡೆಸಿರುವ ಘಟನೆ ನಡೆದಿದೆ.

*ಘಟನೆ ನಡೆದದ್ದು ಹೇಗೆ ?*
ಫೋಟೋಗ್ರಾಫರ್‌ಗಳ ತಂಡ ಮುಂಜಾನೆಯೇ ದೇವಸ್ಥಾನಕ್ಕೆ ಆಗಮಿಸಿ ಚಿತ್ರೀಕರಣದಲ್ಲಿ ತೊಡಗಿತ್ತು. ಈ ವೇಳೆ ಸ್ಥಳಕ್ಕೆ ಬಂದ ಯುವಕರ ಗುಂಪು “ಇಲ್ಲಿ ಚಿತ್ರೀಕರಣ ಮಾಡಲು ನಿಮಗೆ ಯಾರು ಅನುಮತಿ ನೀಡಿದ್ದಾರೆ?” ಎಂದು ಪ್ರಶ್ನೆ ಮಾಡಿದೆ. ಇದಕ್ಕೆ ಫೋಟೋಗ್ರಾಫರ್‌ ಗಳ ತಂಡ ಸಾರ್ವಜನಿಕ ದೇವಸ್ಥಾನದ ಆವರಣದಲ್ಲಿ ಫೋಟೋ ತೆಗೆಯಲು ವಿಶೇಷ ಅನುಮತಿಯ ಅಗತ್ಯವಿಲ್ಲ ಎಂದು ಫೋಟೋಗ್ರಾಫರ್‌ಗಳು ಸಮರ್ಥಿಸಿಕೊಂಡಿದ್ದಾರೆ. ಈ ವೇಳೆ ಆರಂಭವಾದ ಮಾತಿನ ಚಕಮಕಿ ತೀವ್ರ ವಿಕೋಪಕ್ಕೆ ಕಾರಣವಾಗಿದೆ. ಸ್ಥಳಕ್ಕೆ ಬಂದ ಯುವಕರು ಫೋಟೋಗ್ರಾಫರ್‌ ಗಳ ಮೇಲೆ ಹಲ್ಲೆ ನಡೆಸಿದೆ. ತಾವು ಮಾಡುತ್ತಿರುವ ತಪ್ಪಾದರೂ ಏನು ಎಂದು ಸಂತ್ರಸ್ಥರು ಕೇಳಿದಾಗಲೂ ಮನವಿ ಮಾಡಿಕೊಂಡರೂ, ಪುಂಡ ಯುವಕರು ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ಈ ಇಡೀ ಘಟನೆ ವಿಡಿಯೋದಲ್ಲಿ ಸೆರೆಯಾಗಿದೆ. ಹಲ್ಲೆಕೋರರು ಫೋಟೋಗ್ರಾಫರ್‌ಗಳ ದುಬಾರಿ ಕ್ಯಾಮೆರಾ ಮತ್ತು ಸಲಕರಣೆಗಳನ್ನು ಹಾನಿ ಮಾಡಲು ಯತ್ನಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಈಗ ಎರಡೂ ಕಡೆಯವರು ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಘಟನೆಯು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳು ಎದ್ದಿವೆ. ಕೆಲವು ತಜ್ಞರು ಈ ಬಗ್ಗೆ ಮಾತನಾಡಿ, ಪ್ರವಾಸೋದ್ಯಮದ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ ಎಂದಿದ್ದಾರೆ. ಸಾರ್ವಜನಿಕ ವಲಯದಲ್ಲಿಯೂ ಆಕ್ರೋಶ ವ್ಯಕ್ತವಾಗುತ್ತಿದ್ದು, ಕಾನೂನು ಸುವ್ಯವಸ್ಥೆಯ ಕಟ್ಟುನಿಟ್ಟಿನ ಪಾಲನೆಯ ಅಗತ್ಯವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಪ್ರಕೃತಿ ಸೌಂದರ್ಯಕ್ಕೆ ಹೆಸರಾದ ಈ ದೇವಸ್ಥಾನಕ್ಕೆ ಪ್ರತಿದಿನ ನೂರಾರು ಪ್ರವಾಸಿಗರು ಮತ್ತು ಫೋಟೋಗ್ರಾಫರ್‌ಗಳು ಭೇಟಿ ನೀಡುತ್ತಾರೆ. ಅದೇ ರೀತಿ, ಶುಭ ಕಾರ್ಯದ ಚಿತ್ರೀಕರಣಕ್ಕೆಂದು ಬಂದಿದ್ದ ತಂಡದವರನ್ನು ತಡೆದ ಸ್ಥಳೀಯ ಯುವಕರ ಗುಂಪು ಏಕಾಏಕಿ ಹಲ್ಲೆ ನಡೆಸಿರುವುದು ಪ್ರವಾಸಿಗರಲ್ಲೂ ಗೊಂದಲ ಉಂಟು ಮಾಡಿದೆ. ವೈರಲ್‌ ಆದ ವೀಡಿಯೋದಲ್ಲಿ, ಸಂತ್ರಸ್ತ ಫೋಟೋಗ್ರಾಫರ್‌ಗಳು “ನಮ್ಮನ್ನು ಯಾಕೆ ಹೊಡೆಯುತ್ತಿದ್ದೀರಿ?” ಎಂದು ಕೈಮುಗಿದು ಕೇಳಿಕೊಂಡರೂ, ಪುಂಡರು ಮಾತ್ರ ಮನಬಂದಂತೆ ಹೊಡೆದಿದ್ದಾರೆ. ಅಷ್ಟೇ ಅಲ್ಲದೆ, ಲಕ್ಷಾಂತರ ರೂಪಾಯಿ ಮೌಲ್ಯದ ಕ್ಯಾಮೆರಾ ಮತ್ತು ಲೆನ್ಸ್ ಸೇರಿದಂತೆ ಇತರ ಸಲಕರಣೆಗಳನ್ನು ಧ್ವಂಸಗೊಳಿಸಲು ಯತ್ನಿಸಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿ ಕಂಡುಬಂದಿದೆ. ಪ್ರವಾಸಿ ತಾಣಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಪೊಲೀಸರು ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಮತ್ತು ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು