3:17 PM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ  ದ್ವಿತೀಯ ಪಿಯುಸಿ ಪರೀಕ್ಷೆ ಅನಿವಾರ್ಯ: ಶಿಕ್ಷಣ ಸಚಿವ ಸುರೇಶ್ ಕುಮಾರ್

23/05/2021, 23:24

ಬೆಂಗಳೂರು(reporterkarnataka news) : ಪದವಿಪೂರ್ವ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸುವುದು ಉಚಿತ. ಯಾವುದಾದರೂ ಮಾದರಿಯಲ್ಲಿ ಪರೀಕ್ಷೆ ನಡೆಸುವುದು ಅನಿವಾರ್ಯ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.

ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆಯು ಭಾನುವಾರ ಆಯೋಜಿಸಿದ್ದ ಎಲ್ಲ ರಾಜ್ಯಗಳ ಶಿಕ್ಷಣ ಸಚಿವರ ಸಭೆಯಲ್ಲಿ ಮಾತನಾಡಿದ ಸುರೇಶ್ ಕುಮಾರ್,

ವೃತ್ತಿಪರ ಶಿಕ್ಷಣಕ್ಕೆ ಸನ್ನದ್ಧರಾಗುವ ಹಂತದಲ್ಲಿರುವ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಯಾವುದಾದರೂ ಮಾದರಿಯಲ್ಲಿ ಪರೀಕ್ಷೆಗಳನ್ನು ನಡೆಸಬೇಕಾದ್ದು ಅನಿವಾರ್ಯ. ಕೋವಿಡ್ ಸಂಪೂರ್ಣವಾಗಿ ತಹಬಂದಿಗೆ ಬಂದ ನಂತರ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಿಯಾದರೂ ಪರೀಕ್ಷೆಗಳನ್ನು ನಡೆಸುವುದು ಸಮರ್ಪಕವಾಗುತ್ತದೆ ಎಂದು ಪ್ರತಿಪಾದಿಸಿದರು.

ಪ್ರಸ್ತುತ ಕೋವಿಡ್ ಪ್ರಸರಣವು ಎಲ್ಲೆಡೆ ತೀವ್ರವಾಗಿದ್ದು, ಕರ್ನಾಟಕ ರಾಜ್ಯದಲ್ಲಿ ಎರಡನೇ ಅಲೆ ತಹಬಂದಿಗೆ ಬಂದ ಕೂಡಲೇ 15-20 ದಿನಗಳ ಕಾಲಾವಕಾಶ ನೀಡಿ ಮುಂಚೆಯೇ ಪರೀಕ್ಷೆಗಳ ದಿನಾಂಕವನ್ನು ಪ್ರಕಟಿಸಲು ಸದ್ಯಕ್ಕೆ ತೀರ್ಮಾನಿಸಲಾಗಿದೆ. ಕೋವಿಡ್ ಕಾರಣಕ್ಕಾಗಿ ವಾರ್ಷಿಕ ಪರೀಕ್ಷೆಯನ್ನು ತೆಗೆದುಕೊಳ್ಳಲು ವಿಫಲರಾಗುವ ವಿದ್ಯಾರ್ಥಿಗಳಿಗೆ ಹೊಸದಾಗಿ ಇನ್ನೊಮ್ಮೆ ಪರೀಕ್ಷೆ ಬರೆಯಲು ಇದೇ ಸಾಲಿನಲ್ಲಿ ಅವಕಾಶ ಕಲ್ಪಿಸಲು ಸಹ ರಾಜ್ಯ ಸರ್ಕಾರವು ಯೋಜಿಸಿದೆ ಎಂದರು.

ದ್ವಿತೀಯ ಪಿಯು ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯದಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸುವ ಕಾರ್ಯ ಪೂರ್ಣಗೊಳಿಸಲಾಗಿದೆ.

ಪರೀಕ್ಷಾ ಕೇಂದ್ರಗಳನ್ನು ಗಣನೀಯವಾಗಿ ಹೆಚ್ಚಿಸಲಾಗುತ್ತಿದೆ. ಅತ್ಯಂತ ಸುರಕ್ಷಿತವಾಗಿ ಪರೀಕ್ಷೆಗಳನ್ನು ನಡೆಸಲು ಎಲ್ಲ ಪೂರ್ವ ಸಿದ್ಧತೆಗಳನ್ನು ತೆಗೆದುಕೊಳ್ಳಲಾಗಿದೆ. ಒಂದು ವೇಳೆ ಜುಲೈ ಮಾಹೆಯಲ್ಲಿ ಪರೀಕ್ಷೆಗಳನ್ನು ನಡೆಸಲು ಸಾಧ್ಯವಾದಲ್ಲಿ ಆಗಸ್ಟ್ ತಿಂಗಳಿನಲ್ಲಿ ಪರೀಕ್ಷಾ ಫಲಿತಾಂಶವನ್ನು ಘೋಷಿಸಲು ಸಾಧ್ಯವಾಗುತ್ತದೆ. ಹಾಗಾಗಿ ನೀಟ್/ಜೆಇಇ/ಸಿಇಟಿ/ಐಸಿಎಆರ್/ಅಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆಗಸ್ಟ್ ಮಾಹೆಯ ಸೂಕ್ತ ದಿನಾಂಕಗಳಂದು ಆಯೋಜಿಸಬಹುದಾಗಿದೆಯೆಂದೂ ಸಚಿವ ಸುರೇಶ್ ಕುಮಾರ್ ಸಲಹೆ ನೀಡಿದರು. 

ಸಭೆಯಲ್ಲಿ ಕೇಂದ್ರ ರಕ್ಷಣಾ ಮಂತ್ರಿ ರಾಜನಾಥ ಸಿಂಗ್, ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್, ಜವಳಿ ಸಚಿವೆ ಸ್ಮೃತಿ ಇರಾನಿ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಸೇರಿದಂತೆ ಹಲವು ರಾಜ್ಯಗಳ ಶಿಕ್ಷಣ ಸಚಿವರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು