10:19 PM Sunday29 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಗ್ರಾಪಂ ನಿರ್ಮಿಸಿದ ತೋಡನ್ನೇ ಮುಚ್ಚಿದ ಖದೀಮ!: ಪ್ರಶ್ನಿಸಿದ ನೆರೆಮನೆಯವರಿಗೆ ಕಲ್ಲೇಟು; ಇಬ್ಬರು ಮಹಿಳೆಯರು ಸಹಿತ 3 ಮಂದಿಗೆ ಗಾಯ

29/03/2026, 22:02

ಸಾಂದರ್ಭಿಕ ಚಿತ್ರ
ಉಳ್ಳಾಲ(reporterkarnataka.com): ಕೊಣಾಜೆ ಠಾಣೆ ವ್ಯಾಪ್ತಿಯ ಅಂಬ್ಲಮೊಗರು ಗ್ರಾಮದ ಪಟ್ನಮೊಗರು ಎಂಬಲ್ಲಿ ಪಂಚಾಯತ್‌ ನಿರ್ಮಿಸಿದ ಮಳೆ ನೀರಿನ ತೋಡನ್ನೇ ಖದೀಮನೊಬ್ಬ
ಮುಚ್ಚಿದ್ದು, ಇದನ್ನು ಪ್ರಶ್ನಿಸಿದ ನೆರೆಮನೆಯ ಇಬ್ಬರು ಮಹಿಳೆಯರು ಹಾಗೂ ಯುವಕನಿಗೆ ಕಲ್ಲಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಪಟ್ನಮೊಗರು ನಿವಾಸಿ ನಾಗೇಶ್‌ ಶೇಣವ ಹಲ್ಲೆ ನಡೆಸಿರುವ
ಆರೋಪಿಯಾಗಿದ್ದು, ಕೊಣಾಜೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.


ಆರೋಪಿ ನಾಗೇಶ್‌ ಶೇಣವ ನೆರೆಮನೆಯ ಬೇಬಿ(56), ಅವರ ಪುತ್ರ ರವಿರಾಜ್‌ ಮತ್ತು ಸೊಸೆ ವರ್ಷಾ ಎಂಬವರ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಇಂದು ಬೆಳಿಗ್ಗೆ 8.30 ರ ಸುಮಾರಿಗೆ ನಾಗೇಶ್‌ ಶೇಣವ ತನ್ನ ಅಂಗಳದಲ್ಲಿ ಹಲವು ವರ್ಷಗಳಿಂದ ಹಾದುಹೋಗುವ , ಪಂಚಾಯತ್‌ ನಿರ್ಮಿಸಿದ್ದಂತಹ ಮಳೆ ನೀರಿನ ತೋಡಿನ ಛೇಂಬರನ್ನು ಅಗೆದು, ಇಟ್ಟಿಗೆಯಿಂದ ಸಂಪೂರ್ಣವಾಗಿ ಮುಚ್ಚಿದ್ದಾನೆ. ಇದನ್ನು ನೆರೆಮನೆಯ ರವಿರಾಜ್‌ ಅವರು ಪ್ರಶ್ನಿಸಿದ್ದಾರೆ. ಈ ವೇಳೆ ನಾಗೇಶ್ ಶೇಣವ ಅವರ ಕೆನ್ನೆಗೆ ಹೊಡೆದು ಹಲ್ಲೆ ನಡೆಸಿದ್ದಾರೆ. ಇದನ್ನು ತಡೆಯಲು ಮುಂದಾದ ಬೇಬಿ ಅವರಿಗೆ ಸ್ಥಳದಲ್ಲಿದ್ದ ಕಲ್ಲನ್ನು ಕಾಲಿಗೆ ಎಸೆದು ಗಂಭೀರ ರೀತಿಯಲ್ಲಿ ಹಲ್ಲೆ ನಡೆಸಿದ್ದಾನೆ. ಅದನ್ನು ಪ್ರಶ್ನಿಸಿದ ಸೊಸೆ ವರ್ಷಾ ಅವರ ಮೇಲೂ ಕಲ್ಲಿನಿಂದ ಹಲ್ಲೆ ನಡೆಸಿದ್ದಾನೆ.
ಈ ಕುರಿತು ಕೊಣಾಜೆ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ದೂರಿನಂತೆ ಬಿಎನ್‌ ಎಸ್‌ ಆಕ್ಟ್‌ ನಡಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು