7:19 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

6 ಲಕ್ಷ ಲಂಚ ಸ್ವೀಕಾರ: ವಾಣಿಜ್ಯ ತೆರಿಗೆ ಇಲಾಖೆಯ ಡೆಪ್ಯುಟಿ ಕಮಿಷನರ್ ಲೋಕಾಯುಕ್ತ ಬಲೆಗೆ

30/03/2026, 17:46

ಹುಬ್ಬಳ್ಳಿ(reporterkarnataka.com): ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಪೊಲೀಸರು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಹುಬ್ಬಳ್ಳಿಯಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಡೆಪ್ಯುಟಿ ಕಮಿಷನರ್ (DC) 6 ಲಕ್ಷ ರೂಪಾಯಿ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ವಾಣಿಜ್ಯ ತೆರಿಗೆ ಇಲಾಖೆಯ ಉಪ ಆಯುಕ್ತರಾದ ಭರತ್ ಕುಮಾರ್ ಹೆಗ್ಡೆ ಲೋಕಾಯುಕ್ತ ಬಲೆಗೆ ಬಿದ್ದಿರುವ ಭ್ರಷ್ಟ ಅಧಿಕಾರಿ. ಅಂಕೋಲಾ ಮೂಲದ ಉದ್ಯಮಿ ವಿಶ್ವಜಿತ್ ನಾಯಕ್ ಎಂಬುವವರಿಂದ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಈ ದಾಳಿ ನಡೆಸಿದ್ದಾರೆ.

*ಪ್ರಕರಣದ ಹಿನ್ನೆಲೆ ಏನು?*
ದೂರುದಾರರಾದ ವಿಶ್ವಜಿತ್ ನಾಯಕ್ ಅವರು 2019ರಲ್ಲಿ ಎಂಟು ಟಿಪ್ಪರ್‌ಗಳನ್ನು ಖರೀದಿಸಿದ್ದರು. ಈ ವಾಹನಗಳ ಖರೀದಿಗೆ ಸಂಬಂಧಿಸಿದಂತೆ ಅವರಿಗೆ ಸುಮಾರು 60 ಲಕ್ಷ ರೂಪಾಯಿಗಳ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ (ITC) ಲಭ್ಯವಿತ್ತು. ಈ ಪೈಕಿ ವಿಶ್ವಜಿತ್ ಅವರು 34 ಲಕ್ಷ ರೂಪಾಯಿಗಳ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ ಅನ್ನು ಪಡೆದುಕೊಂಡಿದ್ದರು. ಆದರೆ, ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಈ ಪ್ರಕ್ರಿಯೆಯು ಕಾನೂನುಬಾಹಿರವಾಗಿದೆ ಮತ್ತು ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ ಅನ್ನು ಬೇರೆ ಉದ್ದೇಶಕ್ಕೆ ಬಳಸಿಕೊಳ್ಳಲಾಗಿದೆ ಎಂದು ಆರೋಪಿಸಿ ವಿಶ್ವಜಿತ್ ಅವರ ವಿರುದ್ಧ ಪ್ರಕರಣ ದಾಖಲಿಸಿ ವಿಚಾರಣೆ ನಡೆಸುತ್ತಿದ್ದರು.

*ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿ*
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭರತ್ ಕುಮಾರ್ ಹೆಗ್ಡೆ ಅವರು ವಿಶ್ವಜಿತ್ ನಾಯಕ್ ಅವರಿಗೆ ಈಗಾಗಲೇ ನಾಲ್ಕು ಬಾರಿ ನೋಟಿಸ್ ನೀಡಿ ವಿಚಾರಣೆಗೆ ಕರೆಸಿದ್ದರು. ಇಂದು (ಸೋಮವಾರ) ಐದನೇ ಬಾರಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ವಿಚಾರಣೆಯ ಸಂದರ್ಭದಲ್ಲಿ “ಪ್ರಕರಣವನ್ನು ಕ್ಲೋಸ್ ಮಾಡಬೇಕಾದರೆ ಹಣದೊಂದಿಗೆ ಬನ್ನಿ” ಎಂದು ಅಧಿಕಾರಿ ಭರತ್ ಕುಮಾರ್ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಲಂಚ ನೀಡಲು ಇಚ್ಛಿಸದ ವಿಶ್ವಜಿತ್ ನಾಯಕ್ ಅವರು ಈ ಕುರಿತು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಯೋಜನೆಯಂತೆ ಇಂದು ವಿಶ್ವಜಿತ್ ಅವರಿಂದ 6 ಲಕ್ಷ ರೂಪಾಯಿ ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಭರತ್ ಕುಮಾರ್ ಹೆಗ್ಡೆ ಅವರನ್ನು ಬಂಧಿಸಿದ್ದಾರೆ.

*ಲೋಕಾಯುಕ್ತ ತಂಡದ ಮಿಂಚಿನ ಕಾರ್ಯಾಚರಣೆ:*
ಬೆಂಗಳೂರು ಲೋಕಾಯುಕ್ತ ಎಸ್‌ಪಿ ಶಿವಪ್ರಕಾಶ ದೇವರಾಜ್ ಅವರ ಮಾರ್ಗದರ್ಶನದಲ್ಲಿ, ಲೋಕಾಯುಕ್ತ ಡಿವೈಎಸ್‌ಪಿಗಳಾದ ಮಲ್ಲಿಕಾರ್ಜುನ ಚುಕ್ಕಿ, ಪ್ರದೀಪ್ ಕುಮಾರ್ ಹಾಗೂ ಇನ್ಸ್‌ಪೆಕ್ಟರ್ ರಾಜು ನೇತೃತ್ವದ ತಂಡ ಈ ಯಶಸ್ವಿ ಕಾರ್ಯಾಚರಣೆ ನಡೆಸಿದೆ. ಬಂಧಿತ ಅಧಿಕಾರಿಯಿಂದ ಲಂಚದ ಹಣವನ್ನು ವಶಪಡಿಸಿಕೊಳ್ಳಲಾಗಿದ್ದು, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಸ್ತುತ ಲೋಕಾಯುಕ್ತ ಪೊಲೀಸರು ಕಚೇರಿಯ ದಾಖಲೆಗಳನ್ನು ಪರಿಶೀಲಿಸುತ್ತಿದ್ದು, ತನಿಖೆ ಮುಂದುವರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು