9:44 AM Friday18 - September 2026
ಬ್ರೇಕಿಂಗ್ ನ್ಯೂಸ್
ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:…

ಇತ್ತೀಚಿನ ಸುದ್ದಿ

ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು; ಕಾರಿನಲ್ಲೇ ಮಾತುಕತೆ!

31/03/2026, 10:29

ಬಾಗಲಕೋಟೆ(reporterkarnataka.com): ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ, ಮುಸ್ಲಿಂ ಮುಖಂಡರು ರಾತೋರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದಾರೆ. ವಿಜಯಪುರ ಜಿಲ್ಲೆಯ ಆಲಮಟ್ಟಿ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಮುಸ್ಲಿಂ ಮುಖಂಡರು ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಬಾಗಲಕೋಟೆ ಕ್ಷೇತ್ರದ ಉಪ ಚುನಾವಣಾ ಪ್ರಚಾರಕ್ಕಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಕರೆಸಿಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಕಾರಿನಲ್ಲೇ ಕುಳಿತು ಮುಖಂಡರೊಂದಿಗೆ ಕೆಲ ಸಮಯ ಚರ್ಚೆ ನಡೆಸಿದ್ದಾರೆ.

ಇದೀಗ ಸಚಿವ ಜಮೀರ್ ಅಹ್ಮದ್ ಖಾನ್ ಕೇರಳದಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಅವರು ಏಪ್ರಿಲ್ 5ರಂದು ಕರ್ನಾಟಕಕ್ಕೆ ವಾಪಸ್ ಆಗಲಿದ್ದು, ಮೊದಲು ದಾವಣಗೆರೆ ಕ್ಷೇತ್ರಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ಬಳಿಕ ಏಪ್ರಿಲ್ 6 ಮತ್ತು 7ರಂದು ಬಾಗಲಕೋಟೆ ಕ್ಷೇತ್ರದ ಪ್ರಚಾರಕ್ಕೆ ಭಾಗವಹಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮುಸ್ಲಿಂ ಮುಖಂಡ ಸಾಧಿಕ್ ಪೈಲ್ವಾನ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಜಮೀರ್ ಅಹ್ಮದ್ ಖಾನ್ ಅಸಮಾಧಾನಗೊಂಡಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಹರಿದಾಡಿತ್ತು. ಆದರೆ ಈ ಆರೋಪವನ್ನು ಜಮೀರ್ ಅಹ್ಮದ್ ತಳ್ಳಿ ಹಾಕಿದ್ದು, ಪಕ್ಷದ ಅಭ್ಯರ್ಥಿಯ ಗೆಲುವಿಗೆ ತಾನು ಸಂಪೂರ್ಣವಾಗಿ ಶ್ರಮಿಸುವುದಾಗಿ ಸ್ಪಷ್ಟಪಡಿಸಿದ್ದರು.
ಆದಾಗ್ಯೂ, ಅವರು ಈ ನಡುವೆ ಕೇರಳ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿರುವುದರಿಂದ ಕರ್ನಾಟಕ ಉಪಚುನಾವಣೆಯ ಪ್ರಚಾರದಲ್ಲಿ ಕಾಣಿಸಿಕೊಳ್ಳದಿರುವುದು ಚರ್ಚೆಗೆ ಕಾರಣವಾಗಿದೆ. ಹೀಗಾಗಿ ಬಾಗಲಕೋಟೆ ಸೇರಿದಂತೆ ಉಪಚುನಾವಣೆ ನಡೆಯುತ್ತಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಜಮೀರ್ ಅಹ್ಮದ್ ಪ್ರಚಾರಕ್ಕೆ ಬರಬೇಕು ಎಂಬ ಬೇಡಿಕೆಯನ್ನು ಮುಸ್ಲಿಂ ಮುಖಂಡರು ಮುಂದಿಟ್ಟಿದ್ದಾರೆ.

ಒಟ್ಟಾರೆ ಬಾಗಲಕೋಟೆ ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಮುಸ್ಲಿಂ ಮುಖಂಡರ ಈ ದಿಢೀರ್ ಭೇಟಿ ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು