5:36 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಜಮೀರ್- ಮಲ್ಲಿಕಾರ್ಜುನ್ ಜಟಾಪಟಿ?: ದಾವಣಗೆರೆ ದಕ್ಷಿಣ ಕ್ಷೇತ್ರ ಕಾಂಗ್ರೆಸ್ ಗೆ ಬಿಸಿ ತುಪ್ಪವಾಗುತ್ತಿದೆಯೇ?

31/03/2026, 15:05

ದಾವಣಗೆರೆ(reporterkarnataka.com): ಉಪ ಚುನಾವಣೆ ನಡೆಯಲಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸಮರ್ಥ ಶಾಮನೂರು ಪರ ಪ್ರಚಾರ ಕಾರ್ಯಕ್ರಮದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ. ಹೀಗಾಗಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮುಸ್ಲಿಂ ಮತಗಳನ್ನು ಗಳಿಸುವ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದೆ.
ಜಮೀರ್ ಸದ್ಯ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರದಲ್ಲಿ ನಿರತರಾಗಿದ್ದಾರೆ.
ಮುಸ್ಲಿಂ ಜನಸಂಖ್ಯೆ ಹೆಚ್ಚಿರುವ 33 ಕ್ಷೇತ್ರಗಳ ಜವಾಬ್ದಾರಿಯನ್ನು ಅವರಿಗೆ ವಹಿಸಲಾಗಿದೆ. ಸಮುದಾಯದ ಮತದಾರರ ಮೇಲೆ ಪ್ರಭಾವ ಬೀರಲು ಅವರು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ ಮತ್ತು ಧರ್ಮಗುರುಗಳೊಂದಿಗೆ ಸಂವಹನ ನಡೆಸುತ್ತಿದ್ದಾರೆ.
ದಾವಣಗೆರೆ ದಕ್ಷಿಣದಿಂದ ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಪುತ್ರ ಸಮರ್ಥ್ ಶಾಮನೂರು ಕಣದಲ್ಲಿದ್ದಾರೆ, ಕ್ಷೇತ್ರದಲ್ಲಿ ಪ್ರಚಾರಕ್ಕೆ ಜಮೀರ್ ಬಾರದೇ ಇದ್ದರೂ ನಡೆಯುತ್ತೆ ಎಂದು ಮಲ್ಲಿಕಾರ್ಜುನ್ ಹೇಳಿಕೆ ನೀಡಿದ್ದರು. ಈ ಬಗ್ಗೆ ಸಿದ್ದರಾಮಯ್ಯ ಜತೆ ಮಾತನಾಡಿರುವ ಜಮೀರ್‌, ನನ್ನ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ, ಅಲ್ಲಿಗೆ ಪ್ರಚಾರಕ್ಕೆ ಹೋಗಬೇಕೇ ಎಂದು ಪ್ರಶ್ನಿಸಿದ್ದಾರೆಂದು ತಿಳಿದು ಬಂದಿದೆ.
ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳಿಗೆ ಸಮುದಾಯದ ಸದಸ್ಯರಿಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಜಮೀರ್ ಒತ್ತಾಯಿಸಿದ್ದರು. ಕಾಂಗ್ರೆಸ್ ನಾಯಕ ಸಾದಿಕ್ ಪೈಲ್ವಾನ್ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಆದರೆ ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ಮತ್ತು ಪರಿಷತ್ತಿನ ಮುಖ್ಯ ಸಚೇತಕ ಎಂಎಲ್‌ಸಿ ಸಲೀಂ ಅಹ್ಮದ್ ಸೇರಿ ಸಾದಿಕ್ ಅವರ ಮನವೊಲಿಸುವಲ್ಲಿ ಯಶಸ್ವಿಯಾದರು.
ಮಲ್ಲಿಕಾರ್ಜುನ ಅವರಿಗೆ ಬೇಡವಾದರೆ ದಾವಣಗೆರೆ ದಕ್ಷಿಣಕ್ಕೆ ಹೋಗುವುದಿಲ್ಲ ಎಂದು ಜಮೀರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೇಳಿದ್ದರು. ತಮ್ಮ ಸಮುದಾಯದ ಸದಸ್ಯರಿಗೆ ಟಿಕೆಟ್ ನಿರಾಕರಿಸಿದ್ದರಿಂದ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸುವಂತೆ ಮುಸ್ಲಿಂ ಧಾರ್ಮಿಕ ನಾಯಕರು ಸಮುದಾಯದ ಸದಸ್ಯರಿಗೆ ಆಗ್ರಹಿಸಿದ್ದಾರೆ, ಹೀಗಾಗಿ ಧಾರ್ಮಿಕ ಮುಖಂಡರ ಕೋಪಕ್ಕೆ ಹೆದರಿ ಜಮೀರ್ ದಾವಣಗೆರೆ ಕ್ಷೇತ್ರ ಪ್ರಚಾರ ನಿರಾಕರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು