8:12 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ವಿಧಾನ ಮಂಡಲ ಅಧಿವೇಶನ ಆರಂಭ: ಎತ್ತಿನ ಗಾಡಿಯಲ್ಲಿ ಎಂಟ್ರಿ ಕೊಟ್ಟ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್

13/09/2021, 20:06

ಬೆಂಗಳೂರು(reporterkarnataka.com): 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದು ಮೊದಲ ಅಧಿವೇಶನವಾಗಿದೆ. ಈ ನಡುವೆ ತೈಲ ಬೆಲೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯೇರಿಕೆಯನ್ನು ಪ್ರತಿಭಟಿಸಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎತ್ತಿನ ಗಾಡಿಯಲ್ಲಿ ವಿಧಾನಸೌಧಕ್ಕೆ ಆಗಮಿಸಿ ಗಮನ ಸೆಳೆದರು.

ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ ನಿವಾಸದಿಂದ ವಿಧಾನಸೌಧದತ್ತ ತೆರಳಿದರು. ಎಸ್​.ಆರ್.ಪಾಟೀಲ್, ಎಂ‌.ಬಿ.ಪಾಟೀಲ್ ಮತ್ತು ಪರಿಷತ್ ಸದಸ್ಯ ನಜಿರ್ ಅಹಮದ್ ಸಿದರಾಮಯ್ಯರಿಗೆ ಸಾಥ್ ನೀಡಿದರು.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಹೆಚ್ಚಾಗಿಲ್ಲ. ಕೇಂದ್ರ ಸರಕಾರ ಬರೀ ಸುಳ್ಳು ಹೇಳುತ್ತಿದೆ. 7 ವರ್ಷದಲ್ಲಿ 24 ಲಕ್ಷ ಕೋಟಿ ರೂ. ಆದಾಯ ಬಂದಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಇಂಧನ ಬೆಲೆಯೇರಿಕೆಯೂ ಆಗಿದೆ.

ಕೇಂದ್ರ ಸರ್ಕಾರ ಜನರಿಗೆ ಮೋಸ ಮಾಡುತ್ತಿದೆ. ಹಿಂದಿನ ಸರ್ಕಾರ ಹೆಚ್ಚು ಸಾಲ ಮಾಡಿದೆ ಎಂದು ಹೇಳುತ್ತಾರೆ. ಕಚ್ಚಾ ತೈಲ ಬೆಲೆ ಹೆಚ್ಚಾಗಿದೆ ಎಂದು ಸುಳ್ಳು ಹೇಳುತ್ತಿದ್ದಾರೆ. ಬೆಲೆಯೇರಿಕೆ ವಿರುದ್ಧ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ನಾವು ಜನರ ಧ್ವನಿಯಾಗಿ ಕೆಲಸ ಮಾಡುತ್ತಿದ್ದೇವೆ. ಪೆಟ್ರೋಲ್, ಡೀಸೆಲ್, ಅಡುಗೆ ಎಣ್ಣೆ, ಅಗತ್ಯವಸ್ತುಗಳ ಬೆಲೆ ಏರಿಕೆಯಾಗಿದೆ. ಹೀಗಾಗಿ ಸರ್ಕಾರಕ್ಕೆ ಬಿಸಿಮುಟ್ಟಿಸಲು ಎತ್ತಿನಗಾಡಿಯಲ್ಲಿ ಹೋರಾಟ ನಡೆಸುತ್ತಿದ್ದೇವೆ. ರಾಜ್ಯ ಸರ್ಕಾರ ಜನರಿಂದ ಪ್ರತಿದಿನ ಪಿಕ್ ಪಾಕೆಟ್ ಮಾಡುತ್ತಿದೆ. ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು