2:45 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಬೆಂಗಳೂರನ್ನೇ ಬೆಚ್ಚಿಬೀಳಿಸಿದ ಕೃತ್ಯ: ಕೆಲಸದಿಂದ ತೆಗೆದ ಸಿಟ್ಟಿಗೆ ಮ್ಯಾನೇಜರ್ ಗೆ ಚಾಕುವಿನಿಂದ ಇರಿದು ಬರ್ಬರ ಹತ್ಯೆ

01/04/2026, 15:27

ಬೆಂಗಳೂರು(reporterkarnataka.com):ಕೆಲಸದಿಂದ ತೆಗೆದಿದ್ದಕ್ಕೆ ಆಕ್ರೋಶಗೊಂಡ ವ್ಯಕ್ತಿಯೋರ್ವ, ಕಂಪನಿಯ ಮ್ಯಾನೇಜರ್​​​ನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಭಯಾನಕ ಘಟನೆ ಬೆಂಗಳೂರಿನ ತಿಗಳರಪಾಳ್ಯದಲ್ಲಿ ನಡೆದಿದೆ.ತಿಗಳರಪಾಳ್ಯದ ಪವರ್ ಪ್ಲಾಸ್ಟಿಕ್ ಪ್ರೈವೆಟ್ ಲಿಮಿಟೆಡ್ ಕಂಪನಿಯ ಮ್ಯಾನೇಜರ್ ರಾಹುಲ್(38) ಹತ್ಯೆಯಾದ ವ್ಯಕ್ತಿ. ಕೆಲಸದಿಂದ ತೆಗೆದಿದ್ದಕ್ಕೆ ಆಕ್ರೋಶಗೊಂಡ ಉದ್ಯೋಗಿ ಯಾದಗಿರಿ ಮೂಲದ ಹನುಮಂತಪ್ಪ, ಮ್ಯಾನೇಜರ್ ರಾಹುಲ್ ಗೆ ಚಾಕುವಿನಿಂದ ಇರಿದಿದ್ದ. ಇದರಿಂದ ಗಾಯಗೊಂಡ ರಾಹುಲ್​ ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಮ್ಯಾನೇಜರ್ ರಾಹುಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಯಾದಗಿರಿ ಮೂಲದ ಹನುಮಂತಪ್ಪ ಎನ್ನುವಾತ ಬೆಂಗಳೂರಿನ ತಿಗಳರಪಾಳ್ಯದಲ್ಲಿರುವ ಪವರ್ ಪ್ಲಾಸ್ಟಿಕ್ ಪ್ರೈವೆಟ್ ಲಿಮಿಟೆಡ್ ಎನ್ನುವ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಆದ್ರೆ, ಏಕಾಏಕಿ ಹನುಮಂತಪ್ಪನನ್ನು ಕೆಲಸದಿಂದ ತೆಗೆದು ಹಾಕಲಾಗಿದೆ. ಇದರಿಂದ ಕೋಪಗೊಂಡ ಹನುಮಂತಪ್ಪ, ನಿನ್ನೆ(ಮಾರ್ಚ್ 30) ಕಂಪನಿಯಲ್ಲಿದ್ದ ಮ್ಯಾನೇಜರ್ ರಾಹುಲ್​​ಗೆ ಸುಮಾರು 10 ಬಾರಿ ಚಾಕುವಿನಿಂದ ಇರಿದಿದ್ದ. ಪರಿಣಾಮ ತೀವ್ರ ರಕ್ತಸ್ರಾವದಿಂದ ರಾಹುಲ್, ಆಸ್ಪತ್ರೆಗೆ ದಾಖಲಾಗಿದ್ದ. ಆದರೆ, ದುರದೃಷ್ಟವಶಾತ್, ಚಿಕಿತ್ಸೆ ಫಲಿಸದೇ ಮ್ಯಾನೇಜರ್ ರಾಹುಲ್ ಮಂಗಳವಾರ ಮೃತಪಟ್ಟಿದ್ದಾರೆ. ಮೃತ ರಾಹುಲ್ ಉತ್ತರ ಪ್ರದೇಶ ಮೂಲದವರು ಎಂದು ತಿಳಿದುಬಂದಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮುಗಿಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಸದ್ಯ ರಾಜಗೋಪಾಲ್ ನಗರ ಪೊಲೀಸರು, ಯಾದಗಿರಿ ಮೂಲಕದ ಆರೋಪಿ ಹನುಮಂತಪ್ಪನನ್ನ ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು