3:29 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್…

ಇತ್ತೀಚಿನ ಸುದ್ದಿ

ಪ್ರೊಟೊಕಾಲ್ ಗೊಂದಲ: ಸಿದ್ದಗಂಗಾ ಮಠದ ವೇದಿಕೆಯಲ್ಲೇ ಸಿದ್ದಲಿಂಗ ಶ್ರೀಗಳಿಗೆ ಕೊನೆಯ ಸೀಟು!

01/04/2026, 15:29

ತುಮಕೂರು(reporterkarnataka.com): ತುಮಕೂರಿನ ಸಿದ್ದಗಂಗಾ ಮಠದಲ್ಲಿ ಇಂದು ಆಯೋಜಿಸಲಾಗಿರುವ ಡಾ.ಶಿವಕುಮಾರ ಮಹಾಸ್ವಾಮಿಗಳ 119ನೇ ಜಯಂತೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಆಸನ ವ್ಯವಸ್ಥೆಯ ಶಿಷ್ಟಾಚಾರ ದೊಡ್ಡ ಮಟ್ಟದ ಗೊಂದಲಕ್ಕೆ ಕಾರಣವಾಯಿತು. ರಾಷ್ಟ್ರಪತಿಗಳ ಭದ್ರತಾ ಸಿಬ್ಬಂದಿ ಹಾಗೂ ಕೇಂದ್ರ ಸಚಿವರ ನಡುವೆ ಆಸನದ ವಿಚಾರವಾಗಿ ಗೊಂದಲ ಉಂಟುಮಾಡಿತು. ರಾಷ್ಟ್ರಪತಿಗಳು ಭಾಗವಹಿಸುವ ಕಾರ್ಯಕ್ರಮವಾದ್ದರಿಂದ ಶಿಷ್ಟಾಚಾರದ ಪ್ರಕಾರವೇ ಕುಳಿತುಕೊಳ್ಳುವಂತೆ ಭದ್ರತಾ ಸಿಬ್ಬಂದಿ ಸೂಚಿಸಿದರು. ಅದರ ಪ್ರಕಾರ ವೇದಿಕೆಯ ಕೊನೆಯಲ್ಲಿ ಸಿದ್ದಲಿಂಗಸ್ವಾಮೀಜಿ ಕುಳಿತುಕೊಳ್ಳುವಂತೆ ಹೇಳಲಾಯಿತು. ಆದರೆ ಶ್ರೀಗಳು ವೇದಿಕೆಯ ಕೊನೆಯಲ್ಲಿ ಕೂರುವುದು ಸರಿಯಲ್ಲ ರಾಷ್ಟ್ರಪತಿಗಳ ಪಕ್ಕದಲ್ಲಿ ಸಿದ್ದಲಿಂಗಸ್ವಾಮೀಜಿ ಅವರು ಕುಳಿತುಕೊಳ್ಳಲು ಅವಕಾಶ ಕಲ್ಪಿಸುವಂತೆ ಕೇಂದ್ರ ಸಚಿವ ವಿ. ಸೋಮಣ್ಣ ಹಾಗೂ ಪ್ರಹ್ಲಾದ್ ಜೋಶಿ ಅವರು ಭದ್ರತಾ ಸಿಬ್ಬಂದಿಗೆ ಮನವಿ ಮಾಡಿದರು. ಆದರೆ ಭದ್ರತಾ ಸಿಬ್ಬಂದಿ ಇದ್ಯಾವುದಕ್ಕೂ ಕಿವಿಗೊಡಲಿಲ್ಲ.

*ಕೇಂದ್ರ ಸಚಿವರು ಮನವಿ ಮಾಡಿದ್ರೂ ಕೇಳದ ಭದ್ರತಾ ಸಿಬ್ಬಂದಿ*
ಎಷ್ಟೇ ಹೇಳಿದರೂ ಕೇಂದ್ರ ಸಚಿವರ ಮನವಿಗೂ ರಾಷ್ಟ್ರಪತಿಗಳ ಭದ್ರತಾ ಸಿಬ್ಬಂದಿ ಒಪ್ಪಲಿಲ್ಲ. ಬದಲಾಗಿ ರಾಷ್ಟ್ರಪತಿಗಳ ಪಕ್ಕದಲ್ಲಿ ರಾಜ್ಯಪಾಲರು ಹಾಗೂ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರಿಗೆ ಅವಕಾಶ ನೀಡಿದರು. ನಂತರ ಗೃಹ ಸಚಿವ ಪರಮೇಶ್ವರ್, ಲಕ್ಷ್ಮೀ ಹೆಬ್ಬಾಳ್ಕರ್, ಎಂ.ಬಿ. ಪಾಟೀಲ್ ಅವರಿಗೆ ಅವಕಾಶ ಮಾಡಿಕೊಡಲಾಯಿತು. ಮಠದ ಆತಿಥೇಯರಾದ ಸಿದ್ದಲಿಂಗ ಶ್ರೀಗಳು ಅನಿವಾರ್ಯವಾಗಿ ವೇದಿಕೆಯ ಕೊನೆಯಲ್ಲಿ ಕುಳಿತುಕೊಳ್ಳಬೇಕಾಯಿತು. ಈ ವೇಳೆ ಸ್ವಾಮೀಜಿ ವೇದಿಕೆಯ ಕೊನೆಯಲ್ಲಿ ಕುಳಿತಿರುವುದು ಕೇಂದ್ರ ಸಚಿವರಿಗೆ ಇರಿಸುಮುರಿಸು ಉಂಟುಮಾಡಿತು

*10 ನಿಮಿಷಗಳ ಹೈಡ್ರಾಮಾ – ರಾಷ್ಟ್ರಪತಿ ಆಗಮನ ವಿಳಂಬ*
ಈ ಆಸನ ವ್ಯವಸ್ಥೆಯ ಗೊಂದಲದಿಂದಾಗಿ ಸುಮಾರು 10 ನಿಮಿಷಗಳ ಕಾಲ ವೇದಿಕೆಗೆ ರಾಷ್ಟ್ರಪತಿ ಬರಲು ವಿಳಂಬವಾಯಿತು. ಶಿಷ್ಟಾಚಾರದ ಗೊಂದಲ ಸಂಪೂರ್ಣವಾಗಿ ಬಗೆಹರಿದು, ಎಲ್ಲರೂ ಆಸನಗಳಲ್ಲಿ ಕುಳಿತ ನಂತರವಷ್ಟೇ ರಾಷ್ಟ್ರಪತಿಗಳು ವೇದಿಕೆಗೆ ಆಗಮಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು