10:39 PM Thursday2 - April 2026
ಬ್ರೇಕಿಂಗ್ ನ್ಯೂಸ್
ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;…

ಇತ್ತೀಚಿನ ಸುದ್ದಿ

ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು

01/04/2026, 20:22

ತುಮಕೂರು(reporterkarnataka.com): ನಾಡಿನ ಪವಿತ್ರ ಧಾರ್ಮಿಕ ಕೇಂದ್ರವಾದ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಠದ ಶಿಸ್ತು ಮತ್ತು ಸೇವೆಯನ್ನು ಕಂಡು ಮನಸಾರೆ ಶ್ಲಾಘಿಸಿದರು. ತಮ್ಮ ಭಾಷಣದ ಆರಂಭದಲ್ಲೇ ಮೂರು ಬಾರಿ ‘ಓಂ ನಮಃ ಶಿವಾಯ’ ಎಂದು ಉದ್ಘರಿಸುವ ಮೂಲಕ ಭಕ್ತರ ಮನ ಗೆದ್ದ ರಾಷ್ಟ್ರಪತಿಗಳು, ಸಹೋದರ ಸಹೋದರಿಯರೇ ನಿಮಗೆ ನನ್ನ ಸಪ್ರೇಮ ವಂದನೆಗಳು ಎಂದು ಕನ್ನಡದಲ್ಲೇ ಮಾತು ಆರಂಭಿಸಿ ಎಲ್ಲರ ಗಮನ ಸೆಳೆದರು.
ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿರುವುದು ತಮಗೆ ಅಪಾರ ಸಂತೋಷ ತಂದಿದೆ ಎಂದು ಹಂಚಿಕೊಂಡ ರಾಷ್ಟ್ರಪತಿಗಳು, ಇಲ್ಲಿನ ಸಾಧು-ಸಂತರ ಆಶೀರ್ವಾದ ಪಡೆದದ್ದು ಮತ್ತು ಸಾವಿರಾರು ಮಕ್ಕಳನ್ನು ಭೇಟಿಯಾಗಿದ್ದು ಜೀವನದ ಸೌಭಾಗ್ಯ ಎಂದು ಬಣ್ಣಿಸಿದರು.
ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳನ್ನು ಸ್ಮರಿಸಿದ ಅವರು, ಶ್ರೀಗಳು ದೈಹಿಕವಾಗಿ ಇಂದು ನಮ್ಮೊಂದಿಗಿಲ್ಲದೇ ಇರಬಹುದು, ಆದರೆ ಅವರು ನೀಡಿದ ನಿಸ್ವಾರ್ಥ ಸೇವೆ ಇಂದಿಗೂ ಜನಮಾನಸದಲ್ಲಿ ಜೀವಂತವಾಗಿದೆ. ತಮ್ಮ ಆಧ್ಯಾತ್ಮಿಕ ಜೀವನದಲ್ಲಿ ಶಿವಕುಮಾರ ಶ್ರೀಗಳು ಇಡೀ ಸಮಾಜಕ್ಕೆ ದೊಡ್ಡ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ ಎಂದು ದ್ರೌಪದಿ ಮುರ್ಮು ಗೌರವ ಸಮರ್ಪಿಸಿದರು.
ಅನಾಥ ಮತ್ತು ಬಡ ಮಕ್ಕಳಿಗೆ ಶಿಕ್ಷಣ, ದಾಸೋಹ ಹಾಗೂ ಆಶ್ರಯ ನೀಡುವ ಮೂಲಕ ಮಠವು ಮಾಡುತ್ತಿರುವ ತ್ರಿವಿಧ ದಾಸೋಹ ಸೇವೆಯನ್ನು ರಾಷ್ಟ್ರಪತಿಗಳು ಮುಕ್ತಕಂಠದಿಂದ ಹೊಗಳಿದರು.
ದೇಶದ ವಿಕಾಸದಲ್ಲಿ ಸಿದ್ದಗಂಗಾ ಮಠದ ಪಾತ್ರ ಅತ್ಯಂತ ದೊಡ್ಡದಿದೆ. ಈ ಮಠವು ಕೇವಲ ಧಾರ್ಮಿಕ ಕೇಂದ್ರವಲ್ಲ, ಬದಲಾಗಿ ಸೇವೆ ಮತ್ತು ಆಧ್ಯಾತ್ಮಿಕ ಪರಂಪರೆಯ ಹೆಗ್ಗುರುತಾಗಿದೆ ಎಂದು ತಿಳಿಸಿದರು.
ಜಗಜ್ಯೋತಿ ಬಸವಣ್ಣನವರು ಹಾಕಿಕೊಟ್ಟ ದಯೆಯೇ ಧರ್ಮದ ಮೂಲವಯ್ಯ ಎಂಬ ತತ್ವದ ಅಡಿಯಲ್ಲಿ ಸಿದ್ದಗಂಗಾ ಮಠವು ಮುನ್ನಡೆಯುತ್ತಿದೆ. ರಾಷ್ಟ್ರ ನಿರ್ಮಾಣದ ಪವಿತ್ರ ಕಾರ್ಯದಲ್ಲಿ ಈ ಮಠವು ಮುಂಚೂಣಿಯಲ್ಲಿದ್ದು, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಶಿಕ್ಷಣ ಮತ್ತು ಅನ್ನ ನೀಡುವ ಮೂಲಕ ಶ್ರೇಷ್ಠ ಪರಂಪರೆಯನ್ನು ಎತ್ತಿ ಹಿಡಿದಿದೆ. ಮಠದ ಭೇಟಿಯು ತಮಗೆ ಹೊಸ ಚೈತನ್ಯ ನೀಡಿದೆ ಎಂದು ದ್ರೌಪದಿ ಮುರ್ಮು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು