2:54 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಹಾವೇರಿ ಬಸ್ ನಿಲ್ದಾಣದಲ್ಲಿ ನಿಂತಿದ್ದವರ ಮೇಲೆ ನುಗ್ಗಿದ ಬಸ್; 2 ವರ್ಷದ ಮಗು ಸಾವು, ನಾಲ್ವರಿಗೆ ಗಾಯ

02/04/2026, 13:32

ಹಾವೇರಿ(reporterkarnataka.com): ನಗರದ ಎನ್‌ಡಬ್ಲ್ಯುಕೆಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಘೋರ ಅಪಘಾತ ಸಂಭವಿಸಿದೆ. ಚಾಲಕನ ಅತಿಯಾದ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯಿಂದಾಗಿ ಪ್ಲಾಟ್‌ಫಾರ್ಮ್‌ ಮೇಲೆ ನಿಂತಿದ್ದವರ ಮೇಲೆ ಬಸ್‌ ನುಗ್ಗಿದ ಪರಿಣಾಮ ಎರಡು ವರ್ಷದ ಪುಟ್ಟ ಮಗು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.



ಮುಂಜಾನೆ ಸುಮಾರು 06.30 ಗಂಟೆಯಲ್ಲಿ ಘಟನೆ ಸಂಭವಿಸಿದೆ. ವಾಯವ್ಯ ಕರ್ನಾಟಕ ಸಾರಿಗೆ ಬಸ್‌ ಚಾಲಕ ಮಂಜುನಾಥ ಎಂಬಾತನ ಅತಿಯಾದ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ದುರಂತ ಸಂಭವಿಸಿದೆ. ಪ್ಲಾಟ್ ಫಾರ್ಮ್‌ ನಂ.2 ಕಡೆಗೆ ಏಕಾಏಕಿ ಸಾರಿಗೆ ಬಸ್‌ ನುಗ್ಗಿದ್ದರಿಂದ ಸವಣೂರಿನ ಹಜರತ್‌ ಅಲಿ (2) ಮಗು ಮೃತಪಟ್ಟಿದೆ. ಘಟನೆಯಲ್ಲಿ ಬಂಕಾಪುರದ ವಾಸುದೇವ (44), ಹರ್ಷ (6), ಕಾವ್ಯಾಂಜಲಿ (39), ಅರಬಜ್‌ಖಾನ್‌ (13) ಗಾಯಗೊಂಡಿದ್ದಾರೆ.
ಬಸ್‌ ಹರಿದಿದ್ದರಿಂದ ಹಜರತ್ ಅಲಿ ತೀವ್ರವಾಗಿ ಗಾಯಗೊಂಡಿದ್ದ. ತಕ್ಷಣವೇ ಹಾವೇರಿ ಜಿಲ್ಲಾಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಹಜರತ್ ಅಲಿ ಮೃತಪಟ್ಟಿದ್ದಾನೆ. ಈ ಅಪಘಾತದ ಬಗ್ಗೆ ನಯಿಮ್ ಎಂಬುವವರು ನೀಡಿದ ದೂರಿನ ಮೇರೆಗೆ ಹಾವೇರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜನರ ಮೇಲೆ ಬಸ್ ನುಗ್ಗಿದ ಭೀಕರ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು