3:02 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ

05/04/2026, 16:45

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರ ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ವಿರುದ್ಧ ಏ.6ರಂದು ಬೆಳಗ್ಗೆ 10ಕ್ಕೆ ‘ರಾಜ್ಯಪಾಲರೇ ಕರ್ನಾಟಕ ಬಿಟ್ಟು ತೊಲಗಿ’ ಘೋಷಣೆಯೊಂದಿಗೆ ರಾಜಭವನ ಮುತ್ತಿಗೆ ಹಾಕಲು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ನಿರ್ಧರಿಸಿದೆ.
ಈ ಕುರಿತು ಮಾಹಿತಿ ನೀಡಿದ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ, ಹಿಂದಿ ಸಾಮ್ರಾಜ್ಯಶಾಹಿಯ ಲಾಬಿ ಪರ ಮಾತನಾಡುತ್ತಿರುವ ರಾಜ್ಯಪಾಲರೇ ಕನ್ನಡಿಗರು ಔದಾರ್ಯವಂತರು. ನಮ್ಮ ನೆಲದಲ್ಲಿ ನಿಮಗೆ ಐಶಾರಾಮಿ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದೇವೆ. ಕನ್ನಡಿಗರ ತೆರಿಗೆ ದುಡ್ಡಿನಲ್ಲಿ ರಾಜಭವನ ನಡೆಯುತ್ತಿದೆ. ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದೇ ನಿಲುವು ಮುಂದುವರೆಸಿದರೆ ರಾಜ್ಯಪಾಲರೇ, ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ ಎಂದು ನಾವು ಹೇಳಬೇಕಾಗುತ್ತದೆ

– ಎಸ್ಸೆಸ್ಸೆಲ್ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್‌ ಪದ್ಧತಿ

– ಈ ನೀತಿ ಮರುಪರಿಶೀಲಿಸುವಂತೆ ರಾಜ್ಯಪಾಲರ ಪತ್ರ

– ಕರ್ನಾಟಕ ರಕ್ಷಣಾ ವೇದಿಕೆಯಿಂದ ತೀವ್ರ ಆಕ್ರೋಶ

– ನೀವು ಹಿಂದಿ ಸಾಮ್ರಾಜ್ಯಶಾಹಿ ಪರ ಮಾತನಾಡ್ತಿದ್ದೀರಿ

– ನೀವು ಬರೆದ ಪತ್ರ, ಒಕ್ಕೂಟ ವ್ಯವಸ್ಥೆ ಅಣಕಿಸುವಂತಿದೆ

– ತಿಂದ ಮನೆಗೆ ಕನ್ನಹಾಕಬೇಡಿ: ನಾರಾಯಣಗೌಡ ಕಿಡಿ

ಗ್ರೇಡಿಂಗ್‌ ವ್ಯವಸ್ಥೆಗೆ ಕಾರಣ ಇದೆ:

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಕಾಲಕಾಲಕ್ಕೆ ಬದಲಾವಣೆ ಮಾಡುವ ಸಂವಿಧಾನಬದ್ಧ ಹಕ್ಕು ರಾಜ್ಯ ಸರ್ಕಾರಕ್ಕಿದೆ. ಸರ್ಕಾರ ಈಗ ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತರುತ್ತಿರುವುದಕ್ಕೆ ಸಾಕಷ್ಟು ಕಾರಣಗಳಿವೆ. ಇದರ ಸಾಧಕ-ಬಾಧಕಗಳನ್ನು ನಮ್ಮ ಜನಪ್ರತಿನಿಧಿಗಳು ನೋಡಿಕೊಳ್ಳುತ್ತಾರೆ. ʻಬೆಂಗಳೂರು ಸ್ಥಳೀಯ ಭಾಷೆಗಳ ಸಂರಕ್ಷಣಾ ಸಂಘʻದವರು ನಿಮಗೆ ಕೊಟ್ಟಿದ್ದಾರೆ ಎನ್ನಲಾದ ಮನವಿಗೆ ತುರ್ತಾಗಿ ಪ್ರತಿಕ್ರಿಯಿಸಿರುವುದು ಕೇಳಿ ಅಚ್ಚರಿಯಾಯಿತು. ಬೆಂಗಳೂರಿನಲ್ಲಿ ಇಂಥದ್ದೊಂದು ಸಂಘ ಇದೆ ಎಂಬುದೇ ಕನ್ನಡಿಗರಿಗೆ ತಿಳಿದಿರಲಿಲ್ಲ. ಇಂತಹ ಕುತಂತ್ರಗಳು ಕರ್ನಾಟಕಕ್ಕೆ ಹೊಸದೇನೂ ಅಲ್ಲ. ಮರೆಯಲ್ಲಿ ನಿಂತು ಬಾಣ ಬಿಡುವ ಈ ಹೇಡಿಗಳು ಬೀದಿಗೆ ಬರಲಿ ಎಂದು ನಾವೂ ಕಾಯುತ್ತಿದ್ದೇವೆ ಎಂದು ಎಚ್ಚರಿಸಿದರು.
ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ನೀವು ಬರೆದ ಪತ್ರ, ಒಕ್ಕೂಟ ವ್ಯವಸ್ಥೆಯನ್ನು ಅಣಕಿಸುವಂತಿದೆ. ರಾಜ್ಯಪಾಲರು ಸರ್ಕಾರದ ಪದನಿಮಿತ್ತ ಮುಖ್ಯಸ್ಥರು ಎಂಬುದನ್ನು ನೀವು ಮರೆತಿದ್ದೀರಿ. ನೀವು ನಮ್ಮಿಂದ ನೇರವಾಗಿ ಆಯ್ಕೆಯಾದ ಜನಪ್ರತಿನಿಧಿಯಲ್ಲ. ಒಂದು ಸರ್ಕಾರ ಬಹುಮತದೊಂದಿಗೆ ಸದೃಢವಾಗಿ ಕಾರ್ಯ ನಿರ್ವಹಿಸುತ್ತಿರುವಾಗ ದೈನಂದಿನ ಆಡಳಿತದಲ್ಲಿ ಮೂಗು ತೂರಿಸಲು ನಿಮಗೆ ಯಾವುದೇ ನೈತಿಕ ಅಧಿಕಾರವಿಲ್ಲ. ಸಾಂವಿಧಾನಿಕ ಹೊಣೆಗಾರಿಕೆಯಿಲ್ಲ. ಅದು ನಿಮ್ಮ ವ್ಯಾಪ್ತಿಯ ಕೆಲಸವೂ ಅಲ್ಲ ಎಂದು ಹೇಳಿದರು.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ನೀವು ಬರೆದಿರುವ ಪತ್ರವನ್ನು ಕೂಡಲೇ ಹಿಂದಕ್ಕೆ ಪಡೆಯಿರಿ. ಸರ್ಕಾರ ಶಿಕ್ಷಣ ತಜ್ಞರ ಅಭಿಪ್ರಾಯ ಪಡೆದು ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತಂದಿದೆ. ದಶಕಗಳಿಂದ ಕನ್ನಡ ಜನತೆಯನ್ನು ಕಾಡುತ್ತಿದ್ದ ಶಾಪ ವಿಮೋಚನೆಯಾಗಿದೆ. ಒಂದು ವೇಳೆ ಇದನ್ನು ಜಾರಿಗೆ ತರುವುದನ್ನು ತಡೆಯಲು ಯಾರೇ ಯತ್ನಿಸಿದರೂ ಕನ್ನಡಿಗರು ಸಹಿಸಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು