3:26 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಕಾಲೇಜು: ‘ಜೀವಶಾಸ್ತ್ರದಲ್ಲಿ ವೃತ್ತಿ ಅವಕಾಶಗಳು’ ಆನ್ ಲೈನ್ ಕಾರ್ಯಾಗಾರ

13/09/2021, 23:18

ಮಂಗಳೂರು(reporterkarnatakanews):ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇಲ್ಲಿನ ಪ್ರಾಣಿಶಾಸ್ತ್ರ ವಿಭಾಗದ ವತಿಯಿಂದ ಜೀವಶಾಸ್ತ್ರದಲ್ಲಿ ವೃತ್ತಿ ಅವಕಾಶಗಳು ಎಂಬ ವಿಷಯದ ಬಗ್ಗೆ ವಿಜ್ಞಾನದ ವಿದ್ಯಾರ್ಥಿಗಳಿಗೆ ಆನ್ಲೈನ್ ಕಾರ್ಯಗಾರ ಜರುಗಿತು.

ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಜೀವಶಾಸ್ತ್ರ ವಿಭಾಗದ ಅಧ್ಯಕ್ಷ ರಾದ ಪ್ರೊಫೆಸರ್ ಮೋನಿಕಾ ಸದಾನಂದ ಮಾತನಾಡಿ ಸರಕಾರ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಅನೇಕ ಸವಲತ್ತುಗಳನ್ನು ಒದಗಿಸಿದೆ ಅದನ್ನು ಉತ್ತಮ ರೀತಿಯಲ್ಲಿ ಬಳಸಿಕೊಂಡು, ಸಮಾಜದಲ್ಲಿ ಉನ್ನತ ಮಟ್ಟದಲ್ಲಿ ಸಾದಿಸಿ ಪರೋಕ್ಷವಾಗಿ ಸರಕಾರಕ್ಕೆ ಕೊಡುಗೆ ನೀಡಬೇಕು. ಎಂದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಿನ್ಸಿಪಾಲ್ ಡಾ.ಅನುಸೂಯ ರೈ ಮಾತನಾಡಿ ವೃತ್ತಿ ಮತ್ತು ಸಂಶೋಧನಾತ್ಮಕ ವಿಚಾರಗಳು ಹೆಚ್ಚಾಗಿ ಚರ್ಚಿತ ವಿಷಯವಾಗಿದೆ ಎಂದರು.

ಕಾರ್ಯಕ್ರಮದ ಆಯೋಜಕರಾದ ಪ್ರಾಣಿಶಾಸ್ತ್ರ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಡಾ. ನಾಗರತ್ನ ಕೆಎ ಮಾತನಾಡಿ ಪರಿಶ್ರಮ ಹಾಗೂ ಸಾಧನೆ ಜೊತೆ ಗೂಡಿದರೆ ಯಶಸ್ಸು ನಮ್ಮದಾಗಲಿದೆ. ಎಂದು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು. ಹಾಗೂ ಅತಿಥಿಗಳಿಗೆ ಸ್ವಾಗತಕೋರಿದರು.ಹಾಗೂ ಉಪಸ್ಥಿತರಿರುವ ವಿಭಾಗ ಮುಖ್ಯಸ್ಥರಾದ ಡಾ.ಬಿ. ಎಸ್ ಕಡಮಣ್ಣಾಯ ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮದಲ್ಲಿ ನಡೆಯುತ್ತಿದೆ ಎಂದರು.



ಉಪನ್ಯಾಸಕಿ ಗೀತಾ. ಎಂ ವಂದಿಸಿದರು. ಅತಿಥಿ ಉಪನ್ಯಾಸಕಿ ಸೃಜನ ಅತಿಥಿಗಳನ್ನು ಪರಿಚಯಿಸಿದರೆ, ವಿದ್ಯಾರ್ಥಿನಿ ಸಲೋನಿ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು