4:48 PM Monday6 - April 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ: 2025-26ನೇ ಸಾಲಿನಲ್ಲಿ 3.50 ಕೋಟಿಗೂ ಅಧಿಕ ಲಾಭ

06/04/2026, 16:40

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಹಾಗೂ ಉಡುಪಿ ಉಭಯ ಜಿಲ್ಲೆಗಳಲ್ಲಿ 34 ಶಾಖೆಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು 2025-26 ನೇ ಸಾಲಿನಲ್ಲಿ ರೂ. 3.50 ಕೋಟಿಗೂ ಮಿಕ್ಕಿ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ತಿಳಿಸಿದ್ದಾರೆ.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ತನ್ನ ಸದಸ್ಯರಿಗೆ ಉತ್ತಮ ಸೇವೆ ನೀಡುವ ಮೂಲಕ ಉನ್ನತ ಸಾಧನೆಯ ಹಾದಿಯಲ್ಲಿ ಮುನ್ನಡೆಯುತ್ತಿದೆ. ಸಂಘವು ತನ್ನ ಸ್ವಂತ ಆಡಳಿತ ಹಾಗೂ ಪ್ರಧಾನ ಕಚೇರಿಯನ್ನು ನಗರದ ಅಳಪೆ ಗ್ರಾಮದ ಪಡೀಲ್‌ನಲ್ಲಿ ತೆರೆದು ಹವಾನಿಯಂತ್ರಿತ ಅತ್ಯಾಧುನಿಕ ಸೇವಾ ಸೌಲಭ್ಯಗಳೊಂದಿಗೆ ಕಾರ್ಯಾಚರಿಸುತ್ತಿದೆ. 2012 ರಲ್ಲಿ 1200 ಸದಸ್ಯರ ಪಾಲು ಬಂಡವಾಳದೊಂದಿಗೆ ಸ್ಥಾಪನೆಯಾದ ಸಂಸ್ಥೆಯು ಇಂದು 9079 ಸದಸ್ಯರನ್ನೊಳಗೊಂಡು, ರೂ.1.80 ಕೋಟಿಗೂ ಮಿಕ್ಕಿ ಪಾಲು ಬಂಡವಾಳ ಹೊಂದಿದೆ. ರೂ. 22 ಲಕ್ಷ ಠೇವಣಿಯೊಂದಿಗೆ ಆರಂಭಗೊಂಡ ಸಂಘವು 2025- 26ನೇ ಸಾಲಿನಲ್ಲಿ ರೂ. 305 ಕೋಟಿಗೂ ಮಿಕ್ಕಿ ಠೇವಣಾತಿ ಹೊಂದಿದೆ. ಸಂಘವು 2025-26ನೇ ಸಾಲಿನಲ್ಲಿ ರೂ. 278ಕೋಟಿಗೂ ಮಿಕ್ಕಿ ಹೊರಬಾಕಿ ಸಾಲ ಹೊಂದಿದೆ. ಸಂಘವು ಪ್ರತಿವರ್ಷವೂ ಶಾಸನಬದ್ಧ ಲೆಕ್ಕಪರಿಶೋಧನೆಯಲ್ಲಿ ‘ಎ’ ಶ್ರೇಣಿ ಕಾಯ್ದುಕೊಂಡಿದೆ.
ಕೇವಲ ಮೂರು ಮಂದಿ ಸಿಬ್ಬಂದಿಗಳೊಂದಿಗೆ ಆರಂಭಗೊಂಡ ಸಂಘವು ಇಂದು ಮಹಿಳಾ ಸಬಲೀಕರಣದ ಧ್ಯೇಯದೊಂದಿಗೆ ಶೇ. 95 ರಷ್ಟು ಮಹಿಳಾ ಸಿಬ್ಬಂದಿಗಳಿಗೆ ಉದ್ಯೋಗಾವಕಾಶವನ್ನು ಕಲ್ಪಿಸಿದೆ. ದಕ್ಷ ಆಡಳಿತ ಮಂಡಳಿ, ಬದ್ದತೆಯಿಂದ ಕೂಡಿದ ಸಿಬ್ಬಂದಿ ವರ್ಗ, ನೆಚ್ಚಿನ ಸದಸ್ಯ ಬಂಧುಗಳ ಸಹಕಾರದಿಂದ ನಾವು ಉತ್ತಮ ಪ್ರಗತಿ ಸಾಧಿಸಲು ಸಾಧ್ಯವಾಗಿದೆ ಎಂದರು.
ಸಂಘವು ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ 8 ಬಾರಿ ಉತ್ತಮ ವಿವಿಧೋದ್ದೇಶ ಸಹಕಾರಿ ಸಂಘ “ರಾಜ್ಯ ಪ್ರಶಸ್ತಿ”ಯನ್ನು ತನ್ನದಾಗಿಸಿಕೊಂಡಿದೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರಾರಂಭದಿಂದಲೂ ರಾಜ್ಯದಲ್ಲೇ ಅತೀ ಹೆಚ್ಚು ಇ-ಸ್ಟಾಂಪಿಂಗ್ ವಿತರಣೆ ಮಾಡುವುದರ ಮೂಲಕ ಸತತ 10 ವರ್ಷಗಳಿಂದ “ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ” ತನ್ನದಾಗಿಸಿಕೊಂಡಿದೆ. ಸಂಘವು ವ್ಯವಹಾರದಲ್ಲಿ ಸರ್ವತೋಮುಖ ಪ್ರಗತಿಯನ್ನು ಸಾಧಿಸಿದುದರ ಪ್ರತೀಕವಾಗಿ ಸತತ 10 ವರ್ಷಗಳಿಂದ “ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಶಸ್ತಿ”ಯನ್ನು ತನ್ನದಾಗಿಸಿಕೊಂಡಿದೆ. ಸಂಘವು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರವಾದ ಸಂಸ್ಥೆಯೆನ್ನಲು ಹೆಮ್ಮೆಯೆನಿಸುತ್ತದೆ.
ರಾಜ್ಯದಲ್ಲೇ ಪ್ರಥಮ ಬಾರಿಗೆ ಎನ್ನುವಂತೆ ಸಂಘವು ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ ಬೆಂಗಳೂರು ಇವರಿಂದ ನಡೆಸಲ್ಪಡುವ 26 ವಾರಗಳ ಹೆಚ್.ಡಿ.ಸಿ.ಎಮ್ ದೂರ ಶಿಕ್ಷಣ ತರಬೇತಿ ತರಗತಿಯನ್ನು ಸಂಘದ ಪ್ರಧಾನ ಕಚೇರಿಯಲ್ಲಿ ವ್ಯವಸ್ಥೆಗೊಳಿಸಿದೆ. ಸಹಕಾರ ಸಂಘಗಳಲ್ಲಿ ಉದ್ಯೋಗ ಸಂಪಾದಿಸಿಕೊಳ್ಳಲು, ಪದೋನ್ನತಿ ಹೊಂದಲು ಈ ಶಿಕ್ಷಣ ಬಹಳ ಪ್ರಾಮುಖ್ಯವಾಗಿದೆ. ಆತ್ಮಶಕ್ತಿಯು ಈ ಕೋರ್ಸಿನ ಮಂಗಳೂರು ವಿಭಾಗದ ಕೇಂದ್ರವಾಗಿ ಗುರುತಿಸಿಕೊಂಡಿದೆ. ಇದುವರೆಗೆ ವಿವಿಧ ಸಹಕಾರಿ ಸಂಘಗಳಲ್ಲಿ ದುಡಿಯುತ್ತಿರುವ 1000ಕ್ಕೂ ಅಧಿಕ ಸಿಬ್ಬಂದಿಗಳು ಇದರ ಪ್ರಯೋಜನವನ್ನು ಪಡೆದುಕೊಂಡಿದ್ದಾರೆ.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ತನ್ನ ಸದಸ್ಯರಿಗೆ ವಿಶೇಷ ಕೊಡುಗೆಯಾಗಿ 1000 ದಿನಗಳ ಠೇವಣಿಗಳಿಗೆ ಶೇ. 10.50ರವರೆಗೆ ಆಕರ್ಷಕ ಬಡ್ಡಿ ಯೋಜನೆಯನ್ನು ಜಾರಿಗೊಳಿಸಿದೆ. ಜೊತೆಗೆ ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂ ಗೆ ಗರಿಷ್ಟ ಮೌಲ್ಯ ರೂ. 12000/- ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲ ನೀಡಲಾಗುತ್ತಿದೆ. ಮಕ್ಕಳ ಭವಿಷ್ಯಕ್ಕೆ ಆತ್ಮಶಕ್ತಿ ಭವಿಷ್ಯ ಸುರಕ್ಷಾ ಯೋಜನೆಯಲ್ಲಿ ಸದಸ್ಯರು ರೂ.100000/- ವನ್ನು 18 ವರ್ಷಗಳ ಅವಧಿಗೆ ಠೇವಣಾತಿ ಮಾಡಿದಾಗ ರೂ. 500000/- ವನ್ನು ಪಡೆಯಬಹುದು. ಈ ಯೋಜನೆಯಲ್ಲಿ ಗ್ರಾಹಕರು ತಮ್ಮ ಮಕ್ಕಳ ಭವಿಷ್ಯದ ಸುರಕ್ಷತೆಗಾಗಿ ಕನಿಷ್ಟ ರೂ. 25000/- ಹೂಡಿಕೆ ಮಾಡಬಹುದು. ಈ ಯೋಜನೆಯು ಸೀಮಿತ ಅವಧಿಯದ್ದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸಂಘದ ಸಮೀಪದ ಶಾಖೆಗಳನ್ನು ಸಂಪರ್ಕಿಸಬಹುದು.
ಸಂಘವು ಕೇವಲ ಆರ್ಥಿಕ ಚಟುವಟಿಕೆಗಳಿಗಷ್ಟೇ ಸೀಮಿತವಾಗಿರದೆ ತನ್ನ ಕಾರ್ಯಕ್ಷೇತ್ರವನ್ನು ಸಮಾಜಸೇವೆಯಲ್ಲಿ ಕೂಡಾ ವಿಸ್ತಾರಕವಾಗಿಸಿಕೊಂಡಿದೆ . ಮುಖ್ಯವಾಗಿ ಸಾಮುದಾಯಿಕವಾಗಿ ಉಚಿತ ಆರೋಗ್ಯ ತಪಾಸಣಾ,106ಕ್ಕೂ ಮಿಕ್ಕಿ ಉಚಿತ ವೈದ್ಯಕೀಯ ಆರೋಗ್ಯ ಶಿಬಿರ,950ಕ್ಕೂ ಮಿಕ್ಕಿ ಕಣ್ಣಿನ ಶಸ್ತ್ರ ಚಿಕಿತ್ಸೆ, 21000ಕ್ಕೂ ಮಿಕ್ಕಿ ಉಚಿತ ಕನ್ನಡಕ ವಿತರಣೆ, ಉಚಿತ ಔಷದಿ ವಿತರಣೆ, ಉಚಿತ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ವಿತರಣೆ, ಸಂಘದ ಪಿಗ್ಮಿ ಸಂಗ್ರಾಹಕರಿಗೆ ಉಚಿತ ಆರೋಗ್ಯ ವಿಮೆ, ಸಾರ್ವಜನಿಕರ ಉಪಯೋಗಕ್ಕಾಗಿ ಬಸ್ಸು ತಂಗುದಾಣ ನಿರ್ಮಾಣ, ಮನೆ ನಿರ್ಮಾಣ, ಮನೆ ನವೀಕರಣ, ಆರ್ಥಿಕವಾಗಿ ತೀರಾ ಹಿಂದುಳಿದ ಬಡ ವಿದ್ಯಾರ್ಥಿಗಳಿಗೆ, ಪ್ರತಿಭಾವಂತ ಜಿಜ್ಞಾಸುಗಳಿಗೆ ವಿದ್ಯಾರ್ಥಿವೇತನ, ವಿಮಾ ಸೌಲಭ್ಯ, ಶಾಖೆಗಳ ವಾರ್ಷಿಕೋತ್ಸವ ಸಂದರ್ಭದಲ್ಲಿ ಗ್ರಾಹಕರ ಸಭೆಗಳನ್ನು ಆಯೋಜಿಸಲಾಗುತ್ತಿದೆ. ಸಂಘದ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಗಾರ, ವಾರ್ಷಿಕ ಅಧ್ಯಯನ ಪ್ರವಾಸವನ್ನು ಹಮ್ಮಿಕೊಳ್ಳಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು