8:58 PM Thursday9 - April 2026
ಬ್ರೇಕಿಂಗ್ ನ್ಯೂಸ್
Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ: ಬಹುತೇಕ ಶಾಂತಿಯುತ ಮತದಾನ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ… ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:… ರಾಜ್ಯದಲ್ಲಿ ಬ್ಯಾನ್​​ ಆಗುತ್ತಾ ಸೋಲೋ ಟ್ರೆಕ್ಕಿಂಗ್?: ಅನುಭವವಿದ್ದರೂ ಅಪಾಯ ಫಿಕ್ಸ್​​; ಯಾಕೆ ಗೊತ್ತಾ? ಕೊಡಗಿನ ಅಳಿಯನಿಗೆ ಭರ್ಜರಿ ಪಾರ್ಟಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತವರಿನಲ್ಲಿ ಅದ್ದೂರಿ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಬ್ಯಾನ್​​ ಆಗುತ್ತಾ ಸೋಲೋ ಟ್ರೆಕ್ಕಿಂಗ್?: ಅನುಭವವಿದ್ದರೂ ಅಪಾಯ ಫಿಕ್ಸ್​​; ಯಾಕೆ ಗೊತ್ತಾ?

08/04/2026, 15:59

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ತಡಿಯಂಡಮೋಳದಲ್ಲಿ ಐಟಿ ಉದ್ಯೋಗಿ ನಾಪತ್ತೆಯಾದ ಬಳಿಕ ರಾಜ್ಯದಲ್ಲಿ ಸೋಲೋ ಟ್ರೆಕ್ಕಿಂಗ್ ನಿಷೇಧದ ಚರ್ಚೆ ಶುರುವಾಗಿದೆ. ಅನುಭವವಿದ್ದರೂ ಒಂಟಿಯಾಗಿ ಚಾರಣದಿಂದ ಅಪಾಯದ ಸಾಧ್ಯತೆ ಹೆಚ್ಚು. ಹೀಗಾಗಿ ಒಂಟಿಯಾಗಿ ಚಾರಣ ಮಾಡುವವರ ಜೊತೆಗೆ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಕಳುಹಿಸಬೇಕು. ಇದರಿಂದ ಚಾರಣಿಗರು ಸುರಕ್ಷಿತವಾಗಿ ಹಿಂದಿರುಗಲು ಅನುಕೂಲವಾಗುತ್ತದೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.
ಮಡಿಕೇರಿ ತಾಲೂಕಿನ ತಡಿಯಂಡಮೋಳ ಬೆಟ್ಟಕ್ಕೆ ಚಾರಣಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯಾ ಬರೋಬ್ಬರಿ 4 ದಿನಗಳ ಬಳಿಕ ಸುರಕ್ಷಿತವಾಗಿ ಪತ್ತೆಯಾಗಿದ್ದರು. ಆ ಬೆನ್ನಲ್ಲೇ ಅರಣ್ಯ ಇಲಾಖೆ ಕೊಡಗಿನ ತಡಿಯಂಡಮೋಳ ಟ್ರೆಕ್ಕಿಂಗ್ ಮಾರ್ಗವನ್ನು ಏಪ್ರಿಲ್ 11ರವರೆಗೆ ತಾತ್ಕಾಲಿಕವಾಗಿ ಮುಚ್ಚಿದೆ. ಈ ಮಾರ್ಗದಲ್ಲಿ ಕೆಲವು ಸುರಕ್ಷತಾ ಕ್ರಮಗಳನ್ನು ಬಲಪಡಿಸುವ ಯೋಜನೆ ಕೈಗೊಂಡಿರುವ ಹಿನ್ನೆಲೆ ಈ ನಿರ್ದಾರ ಕೈಗೊಂಡಿರೋದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಮತ್ತೊಂದೆಡೆ ಸೋಲೋ ಟ್ರೆಕ್ಕಿಂಗ್​​ ಸಾಕಷ್ಟು ಅಪಾಯಕ್ಕೆ ಕಾರಣವಾಗಿರುವ ಕಾರಣ ಒಬ್ಬಂಟಿಯಾಗಿ ಚಾರಣಕ್ಕೆ ಹೋಗುವುದನ್ನು ನಿಷೇಧಿಸಬೇಕೆಂಬ ಆಗ್ರಹವೂ ವ್ಯಕ್ತವಾಗಿದೆ.
ಟ್ರೆಕ್ಕಿಂಗ್​​ಗೆಂದು ತೆರಳಿ ತಡಿಯಂಡಮೋಳ ಬೆಟ್ಟದಲ್ಲಿ ನಾಪತ್ತೆಯಾಗಿದ್ದ ಶರಣ್ಯಾಗೆ ಚಾರಣ ಹೊಸದೇನೂ ಆಗಿರಲಿಲ್ಲ. ಆ ಬಗ್ಗೆ ಸಾಕಷ್ಟು ಅನುಭವ ಅವರಿಗಿತ್ತು. ಹೀಗಾಗಿ ಟ್ರೆಕ್ಕರ್‌ಗಳು ಎಷ್ಟೇ ಅನುಭವ ಹೊಂದಿದ್ದರೂ ಪರಿಚಯವಿಲ್ಲದ ಮಾರ್ಗದಲ್ಲಿ ಒಬ್ಬರೇ ಟ್ರೆಕ್‌ಗೆ ಹೋಗುವುದು ಸೂಕ್ತವಲ್ಲ. ತಾವು ತೆರಳಲು ಉದ್ದೇಶಿಸಿದ ಮಾರ್ಗಗಳ ಕುರಿತು ಟ್ರೆಕ್ಕರ್‌ಗಳು ಮುಂಚಿತವಾಗಿ ಸಂಪೂರ್ಣ ಮಾಹಿತಿ ಸಂಗ್ರಹಿಸಿಕೊಳ್ಳಬೇಕು. ಒಬ್ಬರೇ ತೆರಳುವವರು ತಮ್ಮ ಹಾದಿಯನ್ನು ಜಾಗರೂಕತೆಯಿಂದ ಗುರುತಿಸಿಕೊಂಡು ಸಾಗಬೇಕು. ಹಲವು ಬಗೆಯ ನ್ಯಾವಿಗೇಶನ್ ಆಪ್‌ಗಳು ಲಭ್ಯವಿದ್ದು ಅವುಗಳನ್ನು ಬಳಸುವುದು ಒಳಿತು. ಏಕೆಂದರೆ ಇವುಗಳಲ್ಲಿ ಪೂರ್ವನಕ್ಷಿತ ಮಾರ್ಗಗಳು ಲಭ್ಯವಿರುತ್ತವೆ ಎಂಬ ಅಭಿಪ್ರಾಯಗಳು ಕೂಡ ವ್ಯಕ್ತವಾಗಿವೆ. ಇನ್ನು ಟ್ರೆಕ್ಕರ್​​ಗಳು ಅಗತ್ಯ ಸಾಧನಗಳನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗಬೇಕು. ಟಾರ್ಚ್‌ಲೈಟ್, ನೀರು ಮತ್ತು ಆಹಾರ, ಸೀಟಿ (whistle), ಪೋರ್ಟ್‌ಬಲ್ ಚಾರ್ಜರ್ ಮತ್ತು ಫಸ್ಟ್‌ಏಯ್ಡ್ ಕಿಟ್ ಈ ಪೈಕಿ ಇರಲೇ ಬೇಕಾದಂತವು ಎಂಬ ಸೂಚನೆಯನ್ನು ತಜ್ಞರು ನೀಡಿದ್ದಾರೆ.
ಇನ್ನು ಕೊಡಗು ಜಿಲ್ಲೆಯ ಇತರೆ ಪ್ರಮುಖ ಟ್ರೆಕ್ಕಿಂಗ್ ಮಾರ್ಗಗಳಾದ ಸೋಮವಾರಪೇಟೆಯ ಬೀಡಹಳ್ಳಿಯಿಂದ ಆರಂಭವಾಗುವ ಕುಮಾರ ಪರ್ವತ ಟ್ರೆಕ್‌ಗೂ ಸ್ಪಷ್ಟ ಮಾರ್ಗಗಳಿದ್ದರೂ, ಅವು ಅರಣ್ಯ ಪ್ರದೇಶಗಳ ಮೂಲಕವೇ ಹೆಚ್ಚಾಗಿ ಸಾಗುವುದರಿಂದ ಇನ್ನಷ್ಟು ಸುರಕ್ಷತಾ ವ್ಯವಸ್ಥೆಗಳ ಅಗತ್ಯವಿದೆ. ಜೊತೆಗೆ ಈ ಮಾರ್ಗಗಳಲ್ಲಿ ಎಚ್ಚರಿಕೆ ಮತ್ತು ಸೂಚನಾ ಫಲಕಗಳ ಸ್ಥಾಪನೆ, ಸಂವಹನ ಕೇಂದ್ರಗಳ ನಿರ್ಮಾಣ, ವಿಶ್ರಾಂತಿ ಶೆಲ್ಟರ್‌ಗಳ ವ್ಯವಸ್ಥೆ, ಬ್ಯಾಕಪ್ ರೆಸ್ಕ್ಯೂ ತಂಡಗಳ ನಿಯೋಜನೆ ಮತ್ತು ಬೇಸ್ ಕ್ಯಾಂಪ್‌ಗಳಲ್ಲಿ ಆರೋಗ್ಯ ಸೇವೆಗಳ ಲಭ್ಯತೆ ಒದಗಿಸಬೇಕೇಂಬ ಬಗ್ಗೆಯೂ ಆಗ್ರಹ ಕೇಳಿಬಂದಿವೆ.
ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ತೆರಳುವವರಿಂದ ಅರಣ್ಯ ಇಲಾಖೆ ತಲಾ‌ 250 ರೂ. ಶುಲ್ಕ ವಸೂಲಿ ಮಾಡುತ್ತದೆ.ಆದರೆ ಚಾರಣ ತೆರಳುವವರ ಜೊತೆ ಯಾವುದೇ ಸಿಬ್ಬಂದಿಯನ್ನು ಕಳುಹಿಸುವುದಿಲ್ಲ. ಶರಣ್ಯಾ ಪ್ರಕರಣದಿಂದಾದರೂ ಅರಣ್ಯ ಇಲಾಖೆ ಎಚ್ಚೆತ್ತುಕೊಂಡು ಚಾರಣ ಬರುವವರ ಜೊತೆ ಕನಿಷ್ಠ ಒಬ್ಬ ಸಿಬ್ಬಂದಿಯನ್ನು ಖಡ್ಡಾಯವಾಗಿ ಕಳುಹಿಸುವಂತಾಗಬೇಕು. ಇದರಿಂದ ಚಾರಣಿಗರು ಸುರಕ್ಷಿತವಾಗಿ ಹಿಂದಿರುಗಲು ಅನುಕೂಲವಾಗುತ್ತದೆ ಎಂದು ವಕೀಲ ಅಚ್ಚಾಂಡಿರ ಪವನ್ ಪೆಮ್ಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು