4:31 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಹುಲಿಕಲ್ ಘಾಟ್ ರಸ್ತೆ ಅಗಲೀಕರಣ ಕಾಮಗಾರಿ ವೇಳೆ ಭೂಕುಸಿತ: ಮೂವರು ಕಾರ್ಮಿಕರು ಮೃತ್ಯು

10/04/2026, 09:38

ಶಿವಮೊಗ್ಗ(reporterkarnataka.com); ರಸ್ತೆ ಅಗಲೀಕರಣ ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ಹುಲಿಕಲ್‌ ಘಾಟ್‌ ಶ್ರೀ ಚಂಡಿಕಾಂಬ ದೇವಸ್ಥಾನದ ಬಳಿ ತಿರುವಿನಲ್ಲಿ ನಡೆದಿದೆ.

ಮೃತರನ್ನು ನಗರ ಸಮೀಪದ ಚಕ್ಕಾರು ಗ್ರಾಮದ ರಾಘು, ಹಾವೇರಿ ಜಿಲ್ಲೆಯ ನೆಲಗಲ್ಲು ಗ್ರಾಮದ ಶಬ್ಬೀರ್, ರಾಜು ಎಂದು ಗುರುತಿಸಲಾಗಿದೆ. ಹುಲಿಕಲ್ ಘಾಟ್‌ ( ಬಾಳೆಬರೆ ಘಾಟ್, ರಾಜ್ಯ ಹೆದ್ದಾರಿ 52) ಹೇರ್ ಪಿನ್ ತಿರುವಿನಲ್ಲಿ ಈ ಹಿಂದೆ ಭೂಕುಸಿತ ಸಂಭವಿಸಿತ್ತು. ಈ ಹಿನ್ನಲೆಯಲ್ಲಿ ಶಾಶ್ವತ ಬೃಹತ್ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಈ ವೇಳೆ ಕಾರ್ಮಿಕರ ಮೇಲೆ ಮಣ್ಣು ಜಾರಿದೆ. ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವು ಕಾರ್ಮಿಕರು ಗಾಯಗೊಂಡಿರುವ ಶಂಕೆ ಇದೆ.
ಮಣ್ಣಿನ ಅಡಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ನಗರ ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು