12:44 AM Thursday2 - May 2024
ಬ್ರೇಕಿಂಗ್ ನ್ಯೂಸ್
ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ

ಇತ್ತೀಚಿನ ಸುದ್ದಿ

ಕೇಂದ್ರ ಸರಕಾರದ 3 ಕೃಷಿ ಕಾಯ್ದೆಗೆ ತೀವ್ರ ವಿರೋಧ: ರೈತ ಮಹಿಳೆಯರಿಂದ ಭಾರಿ ಪ್ರತಿಭಟನೆ 

14/09/2021, 12:09

ಬೆಂಗಳೂರು( reporterkarnataka.com): ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಬೆಂಗಳೂರು ವಿಧಾನಸೌಧ ಮುತ್ತಿಗೆ ಚಳುವಳಿಯಲ್ಲಿ ಭಾಗವಹಿಸಿದ ರೂಪಾ ಶ್ರೀನಿವಾಸ್ ನಾಯಕ ಅವರು ಮತ್ತು ಅನಿತಾ ಮಂತ್ರಿ ಮುಖಂಡರ ಸಮ್ಮುಖದಲ್ಲಿ ಸಾವಿರಾರು ಕಾರ್ಯಕರ್ತರು ರೈತರ ಕೃಷಿ ಕಾಯ್ದೆಗಳ ವಿರೋಧಿಸಿ ಬೃಹತ್ ಪ್ರತಿಭಟನೆ ನಡೆಸಿದರು.

ರೂಪ ಶ್ರೀನಿವಾಸ್ ನಾಯಕ್ ವೇದಿಕೆಯನ್ನು ಉದ್ದೇಶಿಸಿ ಮಾತನಾಡಿ, ದೇಶಕ್ಕೆ ಅನ್ನ ಹಾಕುವ ರೈತರಿಗೆ ಅನ್ಯಾಯವಾಗುತ್ತಿದೆ. ರಾಜ್ಯ ಸರಕಾರಕ್ಕೆ ಬಡವರಿಗೆ ಬಗ್ಗೆ ಕಾಳಜಿ ಇಲ್ಲ. ಪ್ರತಿಯೊಂದು ಬೆಲೆಯು ಗಗನಕ್ಕೇರುತ್ತಿದ್ದು, ಬಡ ಕುಟುಂಬಗಳು ಬದುಕಲು ಕಷ್ಟವಾಗುತ್ತಿದೆ ಎಂದರು.

ರಾಜ್ಯ ಸಂಚಾಲಕಿ ಉಮಾದೇವಿ ನಾಯಕ್ ಮಾತನಾಡಿ, ಕೃಷಿ ಕಾಯ್ದೆ, ಭೂ ಸುಧಾರಣೆ ಕಾಯ್ದೆ, ವಿದ್ಯುತ್ ಕಾಯ್ದೆ ಇವುಗಳನ್ನು ವಾಪಸ್ ಪಡೆಯಬೇಕೆಂದು ಹೋರಾಟ ನಡೆಸಿದರು.ಕರ್ನಾಟಕ ರೈತರು ಇಂದು ಸಂಕಷ್ಟದಲ್ಲಿದ್ದಾರೆ.ಬದುಕಲು ಕಷ್ಟವಾಗುತ್ತಿದೆ. ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ಕಣ್ಣು-ಕಿವಿ ಇಲ್ಲವೇ ಎಂದು ಘೋಷಣೆ ಕೂಗುವ ಮೂಲಕ ಪ್ರತಿಭಟನೆ ನಡೆಸಿದರು.

ಅನಿತಾ ಮಂತ್ರಿ ಸೇರಿದಂತೆ ಈ ಸಂದರ್ಭದಲ್ಲಿ ಮರ್ಲಿಂಗ ಪಾಟೀಲ್, ಕೃಷ್ಣಪ್ಪ ,ರಂಗಪ್ಪ, ಶರಣಪ್ಪ ನಿಂಗಪ್ಪ ಇನ್ನಿತರ ಕಾರ್ಯಕ್ರಮ ಹಾಜರಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು