ಇತ್ತೀಚಿನ ಸುದ್ದಿ
Mandya | ಆದಿ ಚುಂಚನಗಿರಿಯಲ್ಲಿ ಕಾಲ ಭೈರವನಿಗೆ ಪ್ರಧಾನಿ ನರೇಂದ್ರ ಮೋದಿ ಪೂಜೆ ಸಲ್ಲಿಕೆ
15/04/2026, 14:43
ಗಿರಿಧರ್ ಕೊಂಪುಳಿರ ಮಂಡ್ಯ
info.reporterkarnataka@gmail.com
ಪ್ರಧಾನಿ ನರೇಂದ್ರ ಮೋದಿ ಭೈರವೈಕ್ವ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕಾಗಿ ಆದಿಚುಂಚನಗಿರಿ ಮಠಕ್ಕೆ ಆಗಮಿಸಿದ್ದು ಮಠಾಧೀಶರಾದ ನಿರ್ಮಲಾನಂದ ಸ್ವಾಮೀಜಿ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯ ಸ್ವಾಮಿ ಸೇರಿದಂತೆ ಹಲವರು ಪ್ರಧಾನಿಯವರನ್ನು ಸ್ವಾಗತಿಸಿದರು.





ಮಠಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಬಾಲಗಂಗಾಧರ ನಾಥ ಸ್ವಾಮೀಜಿಯವರ ಸ್ಮಾರಕಕ್ಕೆ ವಂದನೆ ಅರ್ಪಿಸಿದರು.
ಶ್ರೀಗುರು ಭೈರವೈಕ್ಯ ಮಂದಿರವನ್ನು ಲೋಕಾರ್ಪಣೆಗೊಳಿಸಿ ಶ್ರೀಬಾಲಗಂಗಾಧರನಾಥ ಸ್ವಾಮೀಜಿಯವರ ಗದ್ದುಗೆ ವೀಕ್ಷಿಸಿ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ‘ಗೋರಕ್ಷನಾಥ ಸಿದ್ಧ ಸಿದ್ಧಾಂತ ಪದ್ಧತಿ’ ಎಂಬ ಗ್ರಂಥವನ್ನು ಬಿಡುಗಡೆ ಮಾಡಿದರು.














