ಇತ್ತೀಚಿನ ಸುದ್ದಿ
ಮಾಜಿ ಸಚಿವ ಆಸ್ಕರ್ ಪಾರ್ಥಿವ ಶರೀರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪುಷ್ಪನಮನ: ಅಗಲಿದ ನಾಯಕನಿಗೆ ಅಂತಿಮ ವಿದಾಯ
14/09/2021, 14:31
ಉಡುಪಿ(reporterkarnataka.com); ಕೇಂದ್ರ ಮಾಜಿ ಸಚಿವ ಆಸ್ಕರ್ ಫರ್ನಾಂಡೀಸ್ ಅವರ ಪಾರ್ಥಿವ ಶರೀರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಉಡುಪಿಯಲ್ಲಿ ಪುಷ್ಪನಮನ ಸಲ್ಲಿಸಿದರು.
ಪಕ್ಷದ ಕಾರ್ಯಾಧ್ಯಕ್ಷ ಧೃವನಾರಾಯಣ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರು,ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಜತೆಗಿದ್ದರು.