1:38 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ರಾಜ್ಯ ಸರ್ಕಾರದಿಂದ ಚಾರಣಿಗರಿಗೆ ಸ್ಟ್ರಿಕ್ಟ್ ರೂಲ್ಸ್: 10 ಮಂದಿಗೊಬ್ಬರು ಗೈಡ್ ಕಡ್ಡಾಯ

18/04/2026, 12:41

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಹೆಚ್ಚುತ್ತಿರುವ ಚಾರಣ ಅಪಘಾತಗಳ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಕಟ್ಟುನಿಟ್ಟಿನ ಕಾರ್ಯಾಚರಣೆ ವಿಧಾನ (SOP) ಜಾರಿಗೊಳಿಸಿದೆ.
ಅರಣ್ಯ ಸಚಿವ ಈಶ್ವರ್ ಖಂಡ್ರೆ ಬಿಡುಗಡೆ ಮಾಡಿದ ನಿಯಮಗಳ ಪ್ರಕಾರ, ಚಾರಣಕ್ಕೆ ಆನ್‌ಲೈನ್ ಬುಕ್ಕಿಂಗ್, ಪ್ರತಿ 10 ಮಂದಿಗೆ ಒಬ್ಬ ಗೈಡ್ ಹಾಗೂ ಟ್ರ್ಯಾಕಿಂಗ್ ಆ್ಯಪ್ ಕಡ್ಡಾಯವಾಗಿದೆ. ಸುರಕ್ಷಿತ ಚಾರಣಕ್ಕೆ ಅಗತ್ಯ ಉಪಕರಣಗಳು ಮತ್ತು ಕ್ಯಾರಿಂಗ್ ಕೆಪಾಸಿಟಿ ನಿಯಂತ್ರಣವೂ ಜಾರಿಗೆ ತರಲಾಗಿದೆ.
ರಾಜ್ಯದಲ್ಲಿ ಚಾರಣಕ್ಕೆ (Trekking) ತೆರಳಿ ಸಂಭವಿಸುತ್ತಿರುವ ಅಪಘಾತಗಳ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಕಟ್ಟುನಿಟ್ಟಿನ ಪ್ರಮಾಣಿತ ಕಾರ್ಯಾಚರಣೆ ವಿಧಾನ (SOP) ಜಾರಿಗೆ ತಂದಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಬೆಂಗಳೂರಿನ ಸೆವೆನ್ ಮಿನಿಸ್ಟರ್ ಕ್ವಾರ್ಟರ್ಸ್‌ನಲ್ಲಿ ಎಸ್‌ಒಪಿ ಬಿಡುಗಡೆ ಮಾಡಿ ಮಹತ್ವದ ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಪ್ರಸ್ತುತ 44 ಚಾರಣ ಪಾಯಿಂಟ್‌ಗಳು ಕಾರ್ಯನಿರ್ವಹಿಸುತ್ತಿವೆ. ಕೊಡಗು ತಡಿಯಾಂಡಮೊಳ್ ಸೇರಿದಂತೆ ಹಲವು ಕಡೆಗಳಲ್ಲಿ ಚಾರಣಕ್ಕೆ ತೆರಳಿದವರು ನಾಪತ್ತೆಯಾಗಿರುವುದು ಹಾಗೂ ಚಿಕ್ಕಮಗಳೂರಿನಲ್ಲಿ ಬಾಲಕಿ ಸಾವನ್ನಪ್ಪಿದ ಘಟನೆಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಹೊಸ ನಿಯಮಗಳ ಪ್ರಕಾರ, ಚಾರಣಿಗರು ಆನ್‌ಲೈನ್ ಮೂಲಕವೇ ಬುಕ್ಕಿಂಗ್ ಮಾಡಬೇಕು. 10 ಮಂದಿಗೆ ಒಬ್ಬ ಗೈಡ್ ಕಡ್ಡಾಯವಾಗಿದ್ದು, ಗೈಡ್ ಇಲ್ಲದೆ ಚಾರಣಕ್ಕೆ ಅವಕಾಶ ಇರುವುದಿಲ್ಲ. ಟ್ರೆಕಿಂಗ್ ಹೋಗುವವರ ಮೊಬೈಲ್‌ಗಳಲ್ಲಿ ಟ್ರ್ಯಾಕಿಂಗ್ ಆಪ್ ಅಳವಡಿಕೆ ಮಾಡಲಾಗುತ್ತದೆ. ಜೊತೆಗೆ ಗೈಡ್‌ಗಳಿಗೆ ಜಿಪಿಎಸ್ ಸೌಲಭ್ಯ ಇರುವ ವಾಕಿಟಾಕಿ ನೀಡಲಾಗುತ್ತದೆ ಎಂದಿದ್ದಾರೆ.
ಪ್ರತಿ ಸ್ಥಳದ ಕ್ಯಾರಿಂಗ್ ಕೆಪಾಸಿಟಿಯನ್ನು ನಿಯಂತ್ರಿಸಲಾಗಿದ್ದು, ಒಮ್ಮೆ 150 ಮಂದಿಗೆ ಮಾತ್ರ ಚಾರಣಕ್ಕೆ ಅವಕಾಶ ನೀಡಲಾಗುತ್ತದೆ. ಒಂದು ತಂಡ ಮರಳಿದ ಬಳಿಕವೇ ಮತ್ತೊಂದು ತಂಡವನ್ನು ಕಳುಹಿಸಲಾಗುತ್ತದೆ. ಟಾರ್ಚ್, ಹೆಡ್ ಲ್ಯಾಂಪ್ ಸೇರಿದಂತೆ ಅಗತ್ಯ ಸುರಕ್ಷತಾ ಉಪಕರಣಗಳನ್ನು ಕಡ್ಡಾಯವಾಗಿ ಹೊಂದಿರಬೇಕು ಎಂದು ಹೇಳಿರು ಖಂಡ್ರೆ, ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವುದಾಗಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು