10:38 PM Saturday18 - April 2026
ಬ್ರೇಕಿಂಗ್ ನ್ಯೂಸ್
ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು Udupi | ಕಾಪು ಬಳಿ ಭೀಕರ ಲಾರಿ-ಕಾರು ಅಪಘಾತ: ಓರ್ವ ಸಾವು; ಇಬ್ಬರು… ಮಂತ್ರಾಲಯದ ಬಳಿ ಭೀಕರ ಅಪಘಾತ: 8 ಮಂದಿ ಸಾವು, ತರೀಕೆರೆ ತಾಲೂಕಿನ ಇಬ್ಬರು… ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ, ಸಂಪುಟ ಪುನರ್ ರಚನೆ ಆಗಲಿ: ಆರೋಗ್ಯ… ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ 17 ಮಂದಿಗೆ ಜೀವಾವಧಿ… ಪುತ್ರನ ಮೇಲಿನ ಹಲ್ಲೆ ಕೇಸ್ ಕೈಬಿಡಿ: ಅನಂತ ಕುಮಾರ್ ಹೆಗಡೆ ಮನವಿಗೆ ಸ್ಪಂದಿಸಿದ… ಕೋಡಪದವಿನಲ್ಲಿ ಚಿನ್ನದ ಸರ ಕದ್ದ ಪ್ರಕರಣಕ್ಕೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ಫೋಟೋದ ವ್ಯಕ್ತಿಗೂ… Chikkamagaluru | ಬಣಕಲ್: ಚಾಲಕನ ನಿಯಂತ್ರಣ ತಪ್ಪಿ ಐಟ್ವೆಂಟಿ ಕಾರು ವಿದ್ಯುತ್ ಕಂಬಕ್ಕೆ…

ಇತ್ತೀಚಿನ ಸುದ್ದಿ

ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ ಬಿದ್ದು ಯೋಧನಿಗೆ ಗಂಭೀರ ಗಾಯ

18/04/2026, 22:31

ಬಳ್ಳಾರಿ(reporterkarnataka.com): ಬಳ್ಳಾರಿ ಹೊರವಲಯದ ಪಿ.ಡಿ ಹಳ್ಳಿಯಲ್ಲಿ ಪ್ಯಾರಚೂಟ್ ತರಬೇತಿ ವೇಳೆ ಆಯತಪ್ಪಿ 50 ಅಡಿ ಎತ್ತರದಿಂದ ಕೆಳಕ್ಕೆ ಬಿದ್ದು ಯೋಧರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
25 ವರ್ಷದ ಯೋಧ ಚಿನ್ನರಾಜ್ ಗಾಯಗೊಂಡಿದ್ದರು. ತಕ್ಷಣವೇ ಪ್ರಾಥಮಿಕ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಾಯದ ತೀವ್ರತೆ ಹೆಚ್ಚಿದ್ದ ಕಾರಣ ವೈದ್ಯರ ಸಲಹೆಯಂತೆ ಬೆಂಗಳೂರಿನ ಕಮಾಂಡ್ ಆಸ್ಪತ್ರೆಗೆ ಸ್ಥಳಾಂತರಿಸಲು ನಿರ್ಧರಿಸಲಾಯಿತು. ಗಾಯಗೊಂಡ ಯೋಧನನ್ನು 25 ವರ್ಷದ ಚಿನ್ನರಾಜ್ ಎಂದು ಗುರುತಿಸಲಾಗಿದೆ. ಘಟನೆಯ ತೀವ್ರತೆಗೆ ಯೋಧನ ಕಾಲಿನ ಮೂಳೆ ಮುರಿದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ವಿಶೇಷ ಹೆಲಿಕಾಪ್ಟರ್ ಮೂಲಕ ಬೆಂಗಳೂರಿನ ಕಮಾಂಡ್ ಆಸ್ಪತ್ರೆಗೆ ಏರ್‌ಲಿಫ್ಟ್ ಮಾಡಲಾಗಿದೆ. ಪಿ.ಡಿ. ಹಳ್ಳಿ ಬಳಿಯ ವಿಶಾಲ ಬಯಲಿನಲ್ಲಿ ಶನಿವಾರ ಮುಂಜಾನೆ ಸುಮಾರು 417 ಸೈನಿಕರ ತಂಡವು ಪ್ಯಾರಚೂಟ್ ಜಿಗಿತದ ತಾಲೀಮು ನಡೆಸುತ್ತಿತ್ತು. ಈ ವೇಳೆ ಯೋಧ ಚಿನ್ನರಾಜ್ ಅವರು ವಿಮಾನದಿಂದ ಜಿಗಿದ ನಂತರ ಭೂಸ್ಪರ್ಶ ಮಾಡುವ ಹಂತದಲ್ಲಿ ಪ್ಯಾರಚೂಟ್‌ನಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡಿದೆ ಅಥವಾ ಆಯತಪ್ಪಿದೆ ಎನ್ನಲಾಗಿದೆ. ಇದರಿಂದಾಗಿ ಅವರು ನೇರವಾಗಿ ಸುಮಾರು 50 ಅಡಿ ಎತ್ತರದಿಂದ ನೆಲಕ್ಕೆ ಅಪ್ಪಳಿಸಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಸಹೋದ್ಯೋಗಿಗಳು ಮತ್ತು ಸೇನಾ ವೈದ್ಯಕೀಯ ತಂಡವು ಗಾಯಾಳುವನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಿತು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ, ವೈದ್ಯರ ಸಲಹೆಯಂತೆ ಸುಧಾರಿತ ಚಿಕಿತ್ಸೆಗಾಗಿ ಬೆಂಗಳೂರಿಗೆ ಸ್ಥಳಾಂತರಿಸಲು ನಿರ್ಧರಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು