3:55 AM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ

18/04/2026, 22:37

ಗಿರಿಧರ್ ಕೊಂಪುಳಿರ ಹಾಸನ

info.reporterkarnataka@gmail.com

ಹಾಸನದ ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ.ಮೂರನೇ ದಿನದ ಕಾರ್ಯಾಚರಣೆ ಆರಂಭಿಸಿದ್ದ ಇಟಿಎಫ್‌ ಸಿಬ್ಬಂದಿ ಮುಂಜಾನೆಯೇ ಕಾಡಾನೆ ಇರುವ ಸ್ಥಳವನ್ನು ಪತ್ತೆ ಮಾಡಿದ್ದರು.ದೈತ್ಯಾಕಾರದ ಕಾಡಾನೆ ಜೊತೆಗೆ ಕ್ಯಾಪ್ಟನ್‌ ಕಾಡಾನೆ ಸಹ ಇತ್ತು. ಈ ವೇಳೆ ಕುಮ್ಕಿ ಆನೆಗಳೊಂದಿಗೆ ತೆರಳಿ ನರಹಂತಕ ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡಲಾಯಿತು.
ಈ ವೇಳೆ ಸ್ವಲ್ಪ ದೂರ ಓಡಿದ ಕಾಡಾನೆ ಪ್ರಜ್ಞೆತಪ್ಪಿ ಬಿದ್ದಿತು. ಈ ವೇಳೆ ಕುಮ್ಕಿ ಆನೆಗಳು ಅದನ್ನು ಸುತ್ತುವರಿದವು. ಬಳಿಕ ಕಾಡಾನೆಹೆ ನೀರು ಹಾಕಿ ಆರೈಕೆ ಮಾಡಿ ಹಗ್ಗದಲ್ಲಿ ಕಟ್ಟಲಾಯಿತು.
ನರಹಂತಕ ಕಾಡಾನೆ ಸೆರೆಯಿಂದ ಬೇಲೂರು ಭಾಗದ ಜನರು ನಿಟ್ಟುಸಿರು ಬಿಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು