10:20 AM Friday25 - September 2026
ಬ್ರೇಕಿಂಗ್ ನ್ಯೂಸ್
*ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ

ಇತ್ತೀಚಿನ ಸುದ್ದಿ

ಎಸ್‌ಎಸ್‌ವಿಪಿ ಮಂಗಳೂರು ಸೆಂಟ್ರಲ್ ಕೌನ್ಸಿಲ್‌ನ ಅಧ್ಯಕ್ಷೆಯಾಗಿ ಮೊದಲ ಮಹಿಳೆ ಪ್ರಮಾಣ ವಚನ ಸ್ವೀಕಾರ

18/04/2026, 22:53

ಮಂಗಳೂರು(reportarkarnataka.com); ಸೇಂಟ್ ವಿನ್ಸೆಂಟ್ ಡಿ ಪೌಲ್ ಸೊಸೈಟಿ, ಮಂಗಳೂರು ಸೆಂಟ್ರಲ್ ಕೌನ್ಸಿಲ್ (SSVP), ತನ್ನ 66 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷರ ಪ್ರಮಾಣ ವಚನ ಸ್ವೀಕಾರ ಸಮಾರಂಭದೊಂದಿಗೆ ಐತಿಹಾಸಿಕ ಮೈಲಿಗಲ್ಲನ್ನು ಆಚರಿಸಿತು.
ಬೆಂದೂರು ಕಾನ್ಫರೆನ್ಸ್‌ಗೆ ಸೇರಿದ ಪ್ರೀತಾ ಲೋಬೊ ಅವರಿಗೆ ಆಧ್ಯಾತ್ಮಿಕ ಸಲಹೆಗಾರರಾದ ರೆ. ಫ್ಲೇವಿಯನ್ ಲೋಬೊ ಅವರು ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಮಾಜಿ ಆಧ್ಯಾತ್ಮಿಕ ಸಲಹೆಗಾರ ರೆ. ಫ್ರಾನ್ಸಿಸ್ ಡಿಸೋಜಾ ಮತ್ತು ಬೆಂದೂರು ಚರ್ಚ್‌ನ ಧರ್ಮಗುರು ರೆ. ವಾಲ್ಟರ್ ಡಿಸೋಜಾ ಉಪಸ್ಥಿತರಿದ್ದರು.
ನಿರ್ಗಮಿತ ಅಧ್ಯಕ್ಷರಾದ ಬ್ರದರ್ ಜ್ಯೊ ಕುವೆಲ್ಲೊ ಅವರು ತಮ್ಮ ಆರು ವರ್ಷಗಳ ಅಧಿಕಾರಾವಧಿಯಲ್ಲಿ ಬೆಂಬಲ ಮತ್ತು ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಅವರು ವಿಶೇಷವಾಗಿ ಕಾರ್ಯದರ್ಶಿ ಬ್ರದರ್ ಲಿಗೋರಿ ಫೆರ್ನಾಂಡಿಸ್ ಮತ್ತು ಕೋಶಾಧಿಕಾರಿ ಬ್ರದರ್ ಕ್ಲೆರೆನ್ಸ್ ಮಚಾದೊ ಅವರೊಂದಿಗೆ ಎಲ್ಲಾ ಸದಸ್ಯರಿಗೆ ಧನ್ಯವಾದ ಅರ್ಪಿಸಿದರು. ಅಲ್ಲದೆ, ನೂತನ ಅಧ್ಯಕ್ಷರಿಗೆ ಯಶಸ್ಸನ್ನು ಹಾರೈಸಿದ ಅವರು, ತಮ್ಮ ಸಂಪೂರ್ಣ ಬೆಂಬಲದ ಭರವಸೆ ನೀಡಿದರು.

ನೂತನ ಅಧ್ಯಕ್ಷರು ತಮ್ಮನ್ನು ಈ ಹುದ್ದೆಗೆ ಆಯ್ಕೆ ಮಾಡಿದ್ದಕ್ಕಾಗಿ ಎಲ್ಲರಿಗೂ ಧನ್ಯವಾದ ಅರ್ಪಿಸಿದರು ಮತ್ತು ಎಲ್ಲಾ ಸದಸ್ಯರ ಸಹಕಾರ ಹಾಗೂ ಬೆಂಬಲವನ್ನು ಕೋರಿದರು.

ಇತ್ತೀಚಿನ ಸುದ್ದಿ

ಜಾಹೀರಾತು