8:28 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಮೋದಿ ಭಾಷಣದಲ್ಲಿ ಕಾಂಗ್ರೆಸ್ ಜಪವೇ 59 ಬಾರಿ, ಮಹಿಳೆಯರ ಪ್ರಸ್ತಾಪ ನಗಣ್ಯ’: ಮಸೂದೆ ಪತನದ ಬಳಿಕ ಖರ್ಗೆ ಲೇವಡಿ

19/04/2026, 11:30

ನವದೆಹಲಿ(reporterkarnataka.com): ಮಹಿಳಾ ಮೀಸಲಾತಿ ಮಸೂದೆಯು ಲೋಕಸಭೆಯಲ್ಲಿ ಸೋಲನುಭವಿಸಿದ ಬೆನ್ನಲ್ಲೇ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರವಾಗಿ ಟೀಕಿಸಿದ್ದಾರೆ. ಪ್ರಧಾನಿಯವರ 75 ನಿಮಿಷಗಳ ಭಾಷಣದಲ್ಲಿ ಮಹಿಳೆಯರ ಹಿತಾಸಕ್ತಿಗಿಂತ ಕಾಂಗ್ರೆಸ್ ಪಕ್ಷವನ್ನು ದೂಷಿಸುವುದಕ್ಕೇ ಹೆಚ್ಚಿನ ಆದ್ಯತೆ ನೀಡಲಾಗಿತ್ತು ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.
ಪ್ರಧಾನಿ ಭಾಷಣವನ್ನು ವಿಶ್ಲೇಷಿಸಿದ ಖರ್ಗೆ, “ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಬರೋಬ್ಬರಿ 59 ಬಾರಿ ‘ಕಾಂಗ್ರೆಸ್’ ಹೆಸರನ್ನು ಎತ್ತಿದ್ದಾರೆ. ಆದರೆ ಯಾವ ಮಹಿಳೆಯರಿಗಾಗಿ ಈ ಮಸೂದೆ ಎಂದು ಹೇಳುತ್ತಿದ್ದಾರೋ, ಆ ಮಹಿಳೆಯರ ಬಗ್ಗೆ ಅವರು ಮಾತನಾಡಿದ್ದು ಬಹಳ ಕಡಿಮೆ. ಇದು ಅವರ ರಾಜಕೀಯ ದ್ವೇಷವನ್ನು ತೋರಿಸುತ್ತದೆ,” ಎಂದು ಲೇವಡಿ ಮಾಡಿದ್ದಾರೆ.
ಲೋಕಸಭೆಯಲ್ಲಿ ಮಸೂದೆ ಸೋತಿದ್ದಕ್ಕೆ ವಿರೋಧ ಪಕ್ಷಗಳನ್ನು ಹೊಣೆ ಮಾಡುತ್ತಿರುವ ಸರ್ಕಾರದ ಕ್ರಮವನ್ನು ಖಂಡಿಸಿದ ಖರ್ಗೆ, “ಮಸೂದೆ ಸೋತಿದ್ದು ಸರ್ಕಾರದ ವೈಫಲ್ಯದಿಂದ. ಆದರೆ ಪ್ರಧಾನಿಯವರು ವಿರೋಧ ಪಕ್ಷಗಳ ಮೇಲೆ ಗೂಬೆ ಕೂರಿಸುವ ಮೂಲಕ ತಮ್ಮ ತಪ್ಪುಗಳನ್ನು ಮುಚ್ಚಿ ಹಾಕಲು ಪ್ರಯತ್ನಿಸುತ್ತಿದ್ದಾರೆ,” ಎಂದು ಆರೋಪಿಸಿದ್ದಾರೆ.
ಪ್ರಧಾನಿ ಮೋದಿಯವರು ವಿಪಕ್ಷಗಳನ್ನು ‘ಮಹಿಳಾ ವಿರೋಧಿ’ ಎಂದು ಕರೆದಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, “ನಾವು ಮಹಿಳೆಯರಿಗೆ ತಕ್ಷಣದ ಮೀಸಲಾತಿ ಕೇಳುತ್ತಿದ್ದೇವೆ, ಬಿಜೆಪಿ ಅದನ್ನು 2029 ಅಥವಾ 2034ಕ್ಕೆ ತಳ್ಳುತ್ತಿದೆ. ನಿಜವಾದ ಮಹಿಳಾ ವಿರೋಧಿಗಳು ಯಾರು ಎಂಬುದು ದೇಶಕ್ಕೆ ತಿಳಿದಿದೆ,” ಎಂದು ತಿರುಗೇಟು ನೀಡಿದ್ದಾರೆ.
ಇದು ದೇಶವನ್ನುದ್ದೇಶಿಸಿ ಮಾಡಿದ ಭಾಷಣವಾಗಿರಲಿಲ್ಲ, ಬದಲಿಗೆ ಮುಂಬರುವ ವಿಧಾನಸಭಾ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಮಾಡಿದ ಕೇವಲ ‘ಜಾಹೀರಾತು’ ಎಂದು ಖರ್ಗೆ ಟೀಕಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು