3:20 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

Raichuru | ರಾಜ್ಯದಲ್ಲಿ ಮತ್ತೊಂದು ಘೋರ ದುರಂತ : ನಾಮಫಲಕ ಕುಸಿದು ಬಿದ್ದು ಇಬ್ಬರು ಮಕ್ಕಳು ದಾರುಣ ಸಾವು

19/04/2026, 11:32

ರಾಯಚೂರು(reporterkarnataka.com): ರಾಯಚೂರು ತಾಲೂಕಿನ ಬೈಲ್ ಮರ್ಚಡ್ ಗ್ರಾಮದಲ್ಲಿ ಇಂದು ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಗ್ರಾಮದ ಸಮುದಾಯ ಭವನದ ನಾಮಫಲಕದ ಸಿಮೆಂಟ್ ಬೋರ್ಡ್ ಕುಸಿದು ಬಿದ್ದ ಪರಿಣಾಮ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರಿಗೆ ಗಂಭೀರವಾದ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸಮ್ಮ ಎನ್ನುವ ಮಹಿಳೆಯ ಒಂದು ಕಾಲು ಕಟ್ ಆಗಿದ್ದು, ಪುತ್ರಿ ಲಕ್ಷ್ಮಿ ಎರಡು ಕಾಲುಗಳು ಸಹ ಕಟ್ ಆಗಿವೆ. ವಿಶಾಲಮ್ಮ (20) ಹಾಗೂ ಎಲ್ಲಮ್ಮ (4) ಎಂಬ ಬಾಲಕಿಗೆ ಗಂಭೀರವಾದ ಗಾಯಗಳಾಗಿದ್ದು ರಾಯಚೂರಿನ ಒಪೆಕ್ ಆಸ್ಪತ್ರೆಗೆ ದಾಖಲಿಸಿ ನಾಲ್ವರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಗ್ರಾಮದಲ್ಲಿ ನಿನ್ನೆ ರಾತ್ರಿ ಬಯಲಾಟ ನೋಡುತ್ತಿದ್ದ ಗ್ರಾಮಸ್ಥರು, ಸಮುದಾಯ ಭವನದ ಕಟ್ಟೆಯ ಕೆಳಗೆ ಕೂತು ಬೈರಾಟ ವೀಕ್ಷಣೆ ಮಾಡುತ್ತಿದ್ದರು. ಈ ವೇಳೆ ನಾಮಫಲಕದ ಸಿಮೆಂಟ್ ಬೋರ್ಡ್ ಕುಸಿದು ದುರಂತ ಸಂಭವಿಸಿದೆ ಮಾನ್ವಿ ಪೊಲೀಸ್ ಠಾಣೆಯಲ್ಲಿ ಕುರಿತು ಪ್ರಕರಣ ದಾಖಲಾಗಿದೆ.
*ದುರಂತದ ಹಿನ್ನೆಲೆ:* ಮಕ್ಕಳು ನಾಮಫಲಕದ ಬಳಿ ಇದ್ದ ಸಂದರ್ಭದಲ್ಲಿ ಈ ಅನಾಹುತ ಸಂಭವಿಸಿದೆ ಎನ್ನಲಾಗಿದೆ. ಬೃಹತ್ ಗಾತ್ರದ ಸಿಮೆಂಟ್ ಬೋರ್ಡ್ ಇದ್ದಕ್ಕಿದ್ದಂತೆ ಕುಸಿದು ಮಕ್ಕಳ ಮೇಲೆ ಬಿದ್ದಿದೆ. ಬೋರ್ಡ್‌ನ ಭಾರಕ್ಕೆ ಸಿಲುಕಿದ ಮಕ್ಕಳು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ದೃಶ್ಯ ಕಂಡು ಗ್ರಾಮಸ್ಥರು ಮಮ್ಮಲ ಮರುಗಿದ್ದಾರೆ. ಮೃತ ಮಕ್ಕಳನ್ನ ಒಂದೂವರೆ ವರ್ಷದ ಸಮಾನ್ವಿತಾ ಹಾಗೂ 8 ವರ್ಷದ ವಿಶ್ವನಾಥ್ ಎಂದು ತಿಳಿದುಬಂದಿದೆ.

*ಗ್ರಾಮಸ್ಥರ ಆಕ್ರೋಶ:* “ಯಾವುದೇ ಮುನ್ನೆಚ್ಚರಿಕೆ ಇಲ್ಲದೆ ನಿರ್ಮಿಸಲಾದ ಇಂತಹ ನಾಮಫಲಕಗಳು ಸಾವಿನ ಬಲೆಗಳಾಗಿವೆ” ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ. ಕಳಪೆ ಕಾಮಗಾರಿಯೇ ಮಕ್ಕಳ ಸಾವಿಗೆ ನೇರ ಕಾರಣ ಎಂದು ಆರೋಪಿಸಿರುವ ಸ್ಥಳೀಯರು, ಘಟನೆಗೆ ಕಾರಣರಾದ ಗುತ್ತಿಗೆದಾರರು ಮತ್ತು ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ. ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಮೌನ ಆವರಿಸಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು