10:59 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ: ಸಿದ್ದರಾಮಯ್ಯ ವಿರುದ್ಧ ಸಾ.ರಾ ಮಹೇಶ್ ಕಿಡಿ

19/04/2026, 18:42

ಬೆಂಗಳೂರು(reporterkarnataka.com): ಜೆಡಿಎಸ್ ನಾಯಕ ಹಾಗೂ ಮಾಜಿ ಸಚಿವ ಸಾ.ರಾ.ಮಹೇಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಂಶಪಾರಂಪರ್ಯ ರಾಜಕೀಯ ಆರೋಪ ಮಾಡಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪುತ್ರ ಡಾ. ಯತೀಂದ್ರ ಅವರನ್ನು ವರುಣಾ ಕ್ಷೇತ್ರದಿಂದ ಬೆಂಗಳೂರಿನ ಮತದಾರರ ಪಟ್ಟಿಗೆ ವರ್ಗಾಯಿಸಿರುವುದನ್ನು ಟೀಕಿಸಿದ್ದಾರೆ. ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಯಲ್ಲಿ ಯತೀಂದ್ರ ಅವರಿಗೆ ಪ್ರಮುಖ ಸ್ಥಾನ ನೀಡುವ ಉದ್ದೇಶದಿಂದ ಮಾಡಲಾಗಿರುವ “ವಂಶಪಾರಂಪರ್ಯ ರಾಜಕಾರಣ” ಎಂದು ಆರೋಪಿಸಿದ್ದಾರೆ. ಸಿದ್ದರಾಮಯ್ಯ ಅವರೇ ನೀವು ಮತ್ತು ನಿಮ್ಮ ಮಗ ಯತೀಂದ್ರ ಮಾತ್ರ ಅಧಿಕಾರದಲ್ಲಿ ಇರಬೇಕಾ? ದಯಮಾಡಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್, ಮಹಾನಗರ ಪಾಲಿಕೆ ಚುನಾವಣೆ ಮಾಡಿ ಸ್ವಾಮಿ ಎಂದು ಆಗ್ರಹಿಸಿದರು.
ಐದು ವರ್ಷವೂ ನಮ್ಮ ತಂದೆಯೇ ಸಿಎಂ ಎಂದು ಯತೀಂದ್ರ ಹೇಳಿದ್ದಾರೆ. ಅದು ಅವರ ಪಕ್ಷದ ವಿಚಾರ. ನೀವು ಎಷ್ಟು ವರ್ಷವಾದರೂ ಅಧಿಕಾರದಲ್ಲಿರಿ. ನಿಮ್ಮ ಅಧಿಕಾರದ ಅವಧಿಯಲ್ಲೇ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ನಗರ ಪಾಲಿಕೆ, ಗ್ರಾಮ ಪಂಚಾಯಿತಿ ಚುನಾವಣೆ ಮಾಡಿ ಎಂದು ಒತ್ತಾಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು