10:38 PM Saturday20 - June 2026
ಬ್ರೇಕಿಂಗ್ ನ್ಯೂಸ್
Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ…

ಇತ್ತೀಚಿನ ಸುದ್ದಿ

ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ:19 ಕಾರ್ಮಿಕರ ಮೃತ್ಯು; ಸಾವಿನ ಸಂಖ್ಯೆ ಇನ್ನಷ್ಟು ಏರುವ ಸಾಧ್ಯತೆ

19/04/2026, 22:40

ವಿರುಧುನಗರ(reporterkarnataka.com): ತಮಿಳುನಾಡಿನ ವಿರುಧುನಗರ ಜಿಲ್ಲೆಯ ಕಟ್ಟನಾರಪಟ್ಟಿ ಎಂಬಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 19 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ. ಈ ಘೋರ ದುರಂತದಲ್ಲಿ ಮತ್ತೂ 6 ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಲ್ಲಿನ ‘ವನಜಾ ಪಟಾಕಿ ಕಾರ್ಖಾನೆ’ಯಲ್ಲಿ ಕೆಲಸ ನಡೆಯುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಸ್ಫೋಟ ಉಂಟಾದ ಸಮಯದಲ್ಲಿ ಕಾರ್ಖಾನೆಯ ಒಳಗೆ ಸುಮಾರು 30 ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಪಟಾಕಿ ತಯಾರಿಕೆಗೆ ಬಳಸುವ ರಾಸಾಯನಿಕಗಳ ಮಿಶ್ರಣದ ವೇಳೆ ಉಂಟಾದ ಬೆಂಕಿ ಕಿಡಿ, ಕ್ಷಣಾರ್ಧದಲ್ಲಿ ಇಡೀ ಘಟಕಕ್ಕೆ ವ್ಯಾಪಿಸಿ ಸರಣಿ ಸ್ಫೋಟಕ್ಕೆ ಕಾರಣವಾಗಿದೆ. ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಹಲವು ಕೊಠಡಿಗಳು ಸಂಪೂರ್ಣವಾಗಿ ಕುಸಿದುಬಿದ್ದಿವೆ.
ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸುಮಾರು ಒಂದು ಗಂಟೆಗಳ ಕಾಲ ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಮೃತದೇಹಗಳನ್ನು ರಕ್ಷಣಾ ತಂಡಗಳು ಹೊರತೆಗೆದಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಾಥ್ ಮಾಹಿತಿ ನೀಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳದಲ್ಲಿ ಹರಡಿರುವ ಅವಶೇಷಗಳನ್ನು ತೆರವುಗೊಳಿಸುವ ಕಾರ್ಯ ಮುಂದುವರಿದಿದ್ದು, ಸಾವಿನ ಸಂಖ್ಯೆ ಇನ್ನು ಹೆಚ್ಚಾಗುವ ಆತಂಕ ಎದುರಾಗಿದೆ. ಸ್ಫೋಟದ ತೀವ್ರತೆಗೆ ಸುತ್ತಮುತ್ತಲಿನ ಪರಿಸರದಲ್ಲೂ ಆತಂಕದ ಛಾಯೆ ಆವರಿಸಿದೆ. ಈ ಪಟಾಕಿ ಘಟಕವು ಸುರಕ್ಷತಾ ನಿಯಮಗಳನ್ನು ಗಾಳಿಗೆ ತೂರಿ ಕೆಲಸ ಮಾಡುತ್ತಿತ್ತೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಘಟನೆಯ ಬಗ್ಗೆ ಜಿಲ್ಲಾಡಳಿತ ತೀವ್ರ ವಿಷಾದ ವ್ಯಕ್ತಪಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು