7:13 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

Hassan | ಅರಸೀಕೆರೆ: ಕೆರೆಯಲ್ಲಿ ಮುಳುಗುತ್ತಿದ್ದ ಅಳಿಯನ ರಕ್ಷಿಸಲು ಹೋಗಿ ಮಾವ- ಅಳಿಯ ಇಬ್ಬರೂ ನೀರುಪಾಲು

20/04/2026, 14:12

ಹಾಸನ(reporterkarnataka.com): ಕೆರೆಯಲ್ಲಿ ಮುಳುಗುತ್ತಿದ್ದ ಅಳಿಯನ ರಕ್ಷಿಸಲು ಹೋಗಿ ಮಾವನೂ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಮನಕಲುಕುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಎನ್‌.ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು 12 ವರ್ಷದ ಬಾಲಕ ಪ್ರತೀಕ್ ಹಾಗೂ ಬಾಲಕನ ಮಾವ 45 ವರ್ಷದ ಪ್ರಭಾಕರ್ ಎಂದು ಗುರುತಿಸಲಾಗಿದೆ. ಆಗಿದ್ದೇನು?
ಬಾಲಕ ಪ್ರತೀಕ್ ಬೇಸಿಗೆ ರಜೆಯ ಹಿನ್ನೆಲೆ ಮಾವ ಪ್ರಭಾಕರ್ ಅವರ ಮನೆಗೆ ಬಂದಿದ್ದ. ಮಾವನ ಜೊತೆಗೆ ಕೆರೆಯ ಏರಿ ಮೇಲೆ ನಡೆದುಕೊಂಡು ಹೋಗುತ್ತಿದ್ದಾಗ ಪ್ರತೀಕ್ ಆಯತಪ್ಪಿ ಕೆರೆಗೆ ಬಿದ್ದಿದ್ದಾನೆ. ಕಾಲು ಜಾರಿ ಕೆರೆಗೆ ಬಿದ್ದ ಪ್ರತೀಕ್‌ನನ್ನು ರಕ್ಷಿಸಲು ಮಾವ ಪ್ರಭಾಕರ್‌ ಕೆರೆಗೆ ಹಾರಿದ್ದು,

ಈಜು ಬಾರದ ಕಾರಣ ಕೆರೆಯಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿದ್ದಾರೆ. ಪ್ರತೀಕ್ ಪ್ರಭಾಕರ್ ಅವರ ಸೋದರಿಯ ಮಗನಾಗಿದ್ದು, ಬೇಸಿಗೆ ರಜೆ ಹಿನ್ನೆಲೆ ಸೋದರ ಮಾವನ ಮನೆಗೆ ಬಂದಿದ್ದಾಗ ಈ ದುರಂತ ಸಂಭವಿಸಿದೆ. ಇಬ್ಬರ ಮೃತದೇಹವನ್ನು ಅಗ್ನಿಶಾಮಕ ಸಿಬ್ಬಂದಿ ಹೊರ ತೆಗೆದಿದ್ದು, ಗಂಡಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಮಾವ ಅಳಿಯ ಇಬ್ಬರನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು