9:37 PM Monday20 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ

ಇತ್ತೀಚಿನ ಸುದ್ದಿ

ರಾಜಸ್ಥಾನ: ನಾಳೆ ಪ್ರಧಾನಿ ಮೋದಿ ಉದ್ಘಾಟಿಸಬೇಕಿದ್ದ ರಿಫೈನರಿಯಲ್ಲಿ ಬೆಂಕಿ ಅವಘಡ; 20 ಅಗ್ನಿಶಾಮಕ ವಾಹನಗಳು ದೌಡು

20/04/2026, 21:34

ಜೈಪುರ(reporterkarnataka.com): ಕೇಂದ್ರ ಸರ್ಕಾರದ ಬಹುನಿರೀಕ್ಷಿತ ಕೈಗಾರಿಕಾ ಅಭಿವೃದ್ಧಿಯಲ್ಲಿ ಒಂದಾಗ ರಾಜಸ್ಥಾನದ ಬಲೋತ್ರಾದಲ್ಲಿನ ರಿಫೈನರಿ ಘಟಕ ಉದ್ಘಾಟನೆಗೆ ಸಜ್ಜಾದ ಬೆನ್ನಲ್ಲೇ ಅಗ್ನಿ ಅವಘಡ ಸಂಭವಿಸಿದೆ. ಬರೋಬ್ಬರಿ 79,000 ಕೋಟಿ ರೂಪಾಯಿ ಮೊತ್ತ ಹೂಡಿಕೆ ಮಾಡಿ ಈ ರಿಫೈನರಿ ಘಟಕವನ್ನು ಅಭಿವೃದ್ಧಿ ಮಾಡಲಾಗಿತ್ತು. ನಾಳೆ(ಏ.21) ಪ್ರಧಾನಿ ನರೇಂದ್ರ ಮೋದಿ ಈ ಘಟಕವನ್ನು ಉದ್ಘಾಟನೆ ಮಾಡಬೇಕಿತ್ತು.


ಆದರೆ ಉದ್ಘಾಟನೆಗೂ ಮೊದಲೇ ಅಗ್ನಿ ಅವಘಡ ಸಂಭವಿಸಿದೆ. ಭಾರತದಲ್ಲಿರುವ ತೈಲ ಶುದ್ಧೀಕರಣ ಘಟಕಗಳ ಪೈಕಿ ರಾಜಸ್ಥಾನದಲ್ಲಿ ನಾಳೆ ಉದ್ಘಾಟನೆಯಾಗಬೇಕಿದ್ದ ಘಟಕ ಅತ್ಯಾಧುನಿಕ ತಂತ್ರಜ್ಞಾನದ ಹಾಗೂ ಸುಸಜ್ಜಿತ ಘಟಕ ಎಂದೇ ಗುರುತಿಸಿಕೊಂಡಿತ್ತು.

*ಪೆಟ್ರೋ ಕೆಮಿಕಲ್ ರಿಫೈನರಿ ಘಟಕ:*
ರಾಜಸ್ಥಾನದ ಬಲೋತ್ರದಲ್ಲಿ ತಲೆ ಎತ್ತಿ ನಿಂತಿರುವ ಈ ಘಟಕದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. 20 ಅಗ್ನಿಶಾಮಕ ದಳ ವಾಹನ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ. ಬಲೋತ್ರದಲ್ಲಿರುವ ಪೆಟ್ರೋ ಕೆಮಿಕಲ್ ರಿಫೈನರಿ ಭಾರತದ ಮೊದಲ ಗ್ರೀನ್ ಫೀಲ್ಡ್ ರಿಫೈನರಿ ಎಂದೇ ಗುರುತಿಸಿಕೊಂಡಿದೆ.
ಭಾರತದಲ್ಲಿ 23 ತೈಲ ಶುದ್ಧೀಕರಣ ಘಟಕಗಳಿವೆ. ಈ ಪೈಕಿ ರಾಜಸ್ಥಾನದಲ್ಲಿ ಉದ್ಘಾಟನೆಯಾಗಬೇಕಿದ್ದ ಈ ರಿಫೈನರಿ ಘಟಕ ಅತ್ಯಾಧುನಿಕ ಘಟಕವಾಗಿತ್ತು. ಬರೋಬ್ಬರಿ 41 ದೇಶಗಳಿಂದ ಭಾರತ ಕಚ್ಚಾ ತೈಲ ಆಮದು ಮಾಡಿಕೊಳ್ಳುತ್ತದೆ. ಬಳಿಕ ಭಾರತದಲ್ಲಿ ಶುದ್ಧೀಕರಣ ಮಾಡಲಾಗುತ್ತದೆ. ಬಲೋತ್ರದಲ್ಲಿರುವ ಈ ತೈಲ ಶುದ್ಧೀಕರಣ ಘಟಕ ನೇರವಾಗಿ ಮುದ್ರಾ ಬಂದರಿಗೆ ಸಂಪರ್ಕಹೊಂದಿದೆ. ಹೀಗಾಗಿ ಸಾಗಣೆ, ಪೂರೈಕೆಯಲ್ಲೂ ಭಾರತಕ್ಕೆ ಹೆಚ್ಚಿನ ಲಾಭಗಳಿವೆ.

*ಉದ್ಘಾಟನೆ ಮುಂದೂಡುವ ಸಾಧ್ಯತೆ:*
ಪ್ರಧಾನಿ ನರೇಂದ್ರ ಮೋದಿ, ರಾಜಸ್ಥಾನ ಮುಖ್ಯಮಂತ್ರಿ ಬಜನ್ ಲಾಲ್ ಶರ್ಮಾ ಸೇರಿದಂತೆ ಪ್ರಮುಖ ನಾಯಕರು ನಾಳೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿತ್ತು, ಸದ್ಯ ಅಗ್ನಿಅವಘಡದಲ್ಲಿ ರಿಫೈನರಿ ಘಟಕಕ್ಕೆ ಭಾರಿ ಹಾನಿಯಾಗಿದೆ. ಹೀಗಾಗಿ ನಾಳೆ ಮೋದಿ ಉದ್ಘಾಟನಾ ಕಾರ್ಯಕ್ರಮ ಮುಂದೂಡುವ ಸಾಧ್ಯತೆ ಇದೆ. ರಿಪೇರಿ ಕಾಮಗಾರಿಗಳು ಪೂರ್ಣಗೊಂಡ ಬಳಿಕ ಉದ್ಘಾಟನೆ ಮಾಡುವ ಸಾಧ್ಯತೆ ಇದೆ.
ರಾಜಸ್ಥಾನ ಮರಭೂಮಿಯಲ್ಲಿ ಈ ರಿಫೈನರ್ ಘಟಕ ನಿರ್ಮಾಣ ಮಾಡಲಾಗಿದೆ. ಇನ್ನು ಪೈಪ್‌ಲೈನ್ ಕೆಲಸಗಳು ಪೂರ್ಣಗೊಳಿಸಲಾಗಿದೆ. ಈ ಘಟಕದಿಂದ ವಾರ್ಷಿಕವಾಗಿ ರಾಜಸ್ಥಾನ ಸರ್ಕಾರಕ್ಕೆ 5000 ಕೋಟಿ ರೂಪಾಯಿ ಆದಾಯದ ನಿರೀಕ್ಷೆ ಇದೆ. ಈ ಘಚಕ ಭಾರತದ ತೈಲ ಆತಂಕವನ್ನೂ ತಗ್ಗಿಸಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು